23ಕ್ಕೆ ತಾಲೂಕು ಸಾಹಿತ್ಯ ಸಮ್ಮೇಳನ
Team Udayavani, Nov 8, 2019, 3:30 PM IST
ಬಾಗೇಪಲ್ಲಿ: ತಾಲೂಕು ಕಸಾಪ ವತಿಯಿಂದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನ.23 ರಂದು ಪಟ್ಟಣದ ಬಾಲಕಿಯರ ಶಾಲಾ ಸಂಕೀರ್ಣ ಆವರಣದಲ್ಲಿ ನಡೆಸಲು ಸಾಹಿತ್ಯ ಪರಿಷತ್‌ನ ತುರ್ತು ಸಭೆಯಲ್ಲಿ ತೀರ್ಮಾನಿಸಲಾಯಿತು. ಪಟ್ಟಣದ ಬಾಲಕಿಯರ ಸರ್ಕಾರಿ ಶಾಲಾ ಆವರಣದ ಕನ್ನಡ ಭವನದಲ್ಲಿ ತಾಲೂಕು ಕಸಾಪ ಅಧ್ಯಕ್ಷ ಎ.ಜಿ.ಸುಧಾಕರ್ ಅಧ್ಯಕ್ಷತೆಯಲ್ಲಿ ತುರ್ತುಸಭೆ ನಡೆಯಿತು.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ಕೆ.ಎಂ.ನಯಾಜ್ ಅಹಮದ್ ಮಾತನಾಡಿ, ಆಂಧ್ರದ ಗಡಿಯ ತಾಲೂಕಿನಲ್ಲಿ ಕನ್ನಡ ಭಾಷೆ, ನಾಡು, ಸಾಹಿತ್ಯ, ಸಂಸ್ಕೃತಿ ಬಿಂಬಿಸುವ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಕನ್ನಡ ಸಾಹಿತ್ಯ ಪರಿಚಯಿಸುವ ಕೆಲಸ ಆಗಬೇಕು. ಇಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಸಾಹಿತ್ಯ, ಕಲೆ, ಸಂಸ್ಕೃತಿ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕೆಂದರು.
ಸಾಹಿತ್ಯ ಪರಿಷತ್‌ನ ತಾಲೂಕು ಪ್ರ. ಕಾರ್ಯದರ್ಶಿ ಡಿ.ಎನ್.ಕೃಷ್ಣಾರೆಡ್ಡಿ, ತಾಲೂಕು ಕಸಾಪ ಅಧ್ಯಕ್ಷ ಎ.ಜಿ. ಸುಧಾಕರ್ ಮಾತನಾಡಿದರು. ಸಭೆಯಲ್ಲಿ ನ್ಯಾಷನಲ್ ಪದವಿ ಕಾಲೇಜಿನ ಪ್ರಾಂಶುಪಾಲ ಡಾ.ರಾಮಯ್ಯ, ಜಿಲ್ಲಾ ರಾಜ್ಯೋ ತ್ಸವ ಪ್ರಶಸ್ತಿ ಪುರಸ್ಕೃತ ವಲೀಭಾಷ, ತಾಲೂಕು ಕಸಾಪ ಸಂಚಾಲಕ ಶ್ರೀನಿವಾಸ್, ಕಾರ್ಯದರ್ಶಿ ಡಾ.ಚಿನ್ನ ಕೈವಾರಮಯ್ಯ, ಮಾಜಿ ಪ್ರಧಾನ ಕಾರ್ಯದರ್ಶಿ ಮಣಿಕಂಠ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸೈಯದ್ ಸಿದ್ದೀಕ್, ಪತ್ರಿಕಾ ಕಾರ್ಯದರ್ಶಿ, ಕನ್ನಡ ಕಲಾ ಸಂಘದ ಅಧ್ಯಕ್ಷ ಪಿ.ಎಸ್. ರಾಜೇಶ್, ಸಾಹಿತಿಗಳಾದ ಶ್ರೀನಿವಾಸ ತಂತ್ರಿ, ಚಂದ್ರಶೇಖರ್, ಉಪನ್ಯಾಸಕ ಉಮೇಶ್ ಭಾವಿಕಟ್ಟಿ, ಮುಖ್ಯಶಿಕ್ಷಕ ಮಂಜುನಾಥ್, ಮಹಿಳಾ ಪ್ರತಿನಿಧಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.