ರಾಗಿ ಖರೀದಿಗೆ ನೋಂದಣಿ ಆರಂಭ


Team Udayavani, Dec 12, 2020, 4:32 PM IST

ರಾಗಿ ಖರೀದಿಗೆ ನೋಂದಣಿ ಆರಂಭ

ಚಿಕ್ಕಬಳ್ಳಾಪುರ: ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ 5 ಸ್ಥಳಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, ಡಿ.15ರಿಂದ ರಾಗಿ ಖರೀದಿ ಮಾಡಲಾಗುತ್ತದೆ. ಶುಕ್ರವಾರದಿಂದಲೇನೋಂದಣಿ ಆರಂಭವಾಗಿದ್ದು, ಜಿಲ್ಲೆಯ ರೈತರು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಆರ್‌.ಲತಾ ತಿಳಿಸಿದರು.

ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ 2020-21ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿ ಕೇಂದ್ರಗಳನ್ನು ತೆರೆಯುವ ಸಂಬಂಧ 2ನೇ ಜಿಲ್ಲಾ ಟಾಸ್ಕ್ಫೋರ್ಸ್‌ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಲ್ಲೆಲ್ಲಿ ಆರಂಭ?: ಜಿಲ್ಲೆಯಲ್ಲಿ ಗೌರಿಬಿದನೂರು ನಗರದ ಎಪಿಎಂಸಿಮಾರುಕಟ್ಟೆ ಆವರಣ, ಚಿಂತಾಮಣಿ ತಾಲೂಕಿನ ಕಾಗತಿ ರಸ್ತೆಯಲ್ಲಿರುವ ಕೆಎಫ್‌ ಸಿಎಸ್‌ ಗೋದಾಮು, ಚಿಕ್ಕಬಳ್ಳಾಪುರ ತಾಲೂಕಿನ ವರದಹಳ್ಳಿ ಬಳಿಯಿರುವ ಕೆಎಫ್‌ ಸಿಎಸ್‌ ಗೋದಾಮು, ಬಾಗೇಪಲ್ಲಿ ಪಟ್ಟಣದಲ್ಲಿರುವ ಎಪಿಎಂಸಿ ಮಾರುಕಟ್ಟೆ ಆವರಣಯಲ್ಲಿ ರಾಗಿ ಖರೀದಿ ಕೇಂದ್ರಗಳನ್ನುಸ್ಥಾಪಿಸಲಾಗಿದೆ. ರೈತರು ತಮ್ಮ ತಮ್ಮ ವ್ಯಾಪ್ತಿಯ ಖರೀದಿ ಕೇಂದ್ರಗಳಲ್ಲಿ ಹೆಸರು ನೋಂದಣಿಮಾಡಿಕೊಳ್ಳಬಹುದು ಎಂದು ಹೇಳಿದರು.

ಗ್ರೇಡರ್‌ಗಳ ನೇಮಕ: ರಾಗಿ ಖರೀದಿ ಸಂಬಂಧ ಎಲ್ಲಾ ಖರೀದಿ ಕೇಂದ್ರಗಳಲ್ಲಿ ಶುಕ್ರವಾರದಿಂದಲೇ ನೋಂದಣಿ ಪ್ರಾರಂಭಗೊಂಡಿದ್ದು, 2021ರ ಜನವರಿ 31ರವರೆಗೆ ನೋಂದಣಿಗೆ ಅವಕಾಶವಿದೆ. ಈಸಂಬಂಧ ಜಿಲ್ಲೆಯಲ್ಲಿ ಈಗಾಗಲೇ ಗ್ರೇಡರ್‌ ಗಳನ್ನು ನೇಮಕ ಮಾಡಲಾಗಿದ್ದು, ಇವರಿಗೆ ತರಬೇತಿಯೂ ನೀಡಲಾಗಿದೆ. ನೋಂದಣಿ ರೈತರಿಂದ 2021ರ ಮಾರ್ಚ್‌ 15 ರವರೆಗೆರಾಗಿ ಖರೀದಿಸಲಾಗುತ್ತದೆ ಎಂದು ತಿಳಿಸಿದರು.

ಪ್ರಚಾರ ಮಾಡಿ: ಜಿಲ್ಲೆಯಲ್ಲಿ ತೆರೆದಿರುವ ರಾಗಿ ಖರೀದಿ ಕೇಂದ್ರಗಳ ಬಗ್ಗೆ ಕೃಷಿ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಗಳು ಪ್ರಚಾರ ಮಾಡಬೇಕು. ಜಿಲ್ಲೆಯ ಎಲ್ಲಾ ರೈತ ಸಂಪರ್ಕ ಕೇಂದ್ರಗಳು,ಗ್ರಾಮ ಪಂಚಾಯಿತಿಗಳು, ಎಪಿಎಂಸಿಮಾರುಕಟ್ಟೆಗಳು ಸೇರಿದಂತೆ ಎಲ್ಲಾಗ್ರಾಮಗಳಲ್ಲಿ ಬೆಂಬಲ ಬೆಲೆಯ ಬಗೆಗಿನಭಿತ್ತಿಪತ್ರಗಳನ್ನು ಪ್ರಚುರ ಪಡಿಸಬೇಕು.ಹೆಚ್ಚಿನರೈತರುಇದರಲಾಭಪಡೆಯುವಂತೆ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳು, ಕೃಷಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕಿ ಸವಿತಾ, ಜಂಟಿ ಕೃಷಿ ನಿರ್ದೇಶಕಿ ಎಲ್‌. ರೂಪಾ, ಕೆಎಸ್‌ಎಫ್‌ಸಿ ವ್ಯವಸ್ಥಾಪಕರಾದ ವಿಜಯ್‌ಕುಮಾರ್‌ ಹಾಗೂ ಇತರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪ್ರತಿ ಕ್ವಿಂಟಲ್‌ಗೆ 3,295 ರೂ.ಬೆಂಬಲ ಬೆಲೆ :

ಖರೀದಿ ಕೇಂದ್ರಗಳಲ್ಲಿ ಡಿ.15 ರಿಂದ ರಾಗಿ ಖರೀದಿ ಪ್ರಕ್ರಿಯೆ ಆರಂಭವಾಗಲಿದ್ದು, ರೈತರು ಆಧಾರ್‌ಕಾರ್ಡ್‌ ಅಥವಾ ಫ್ರೂಟ್‌ ಐಡಿಯನ್ನು ತಂದು ನೋಂದಣಿಮಾಡಿಸಿಕೊಳ್ಳಬಹುದು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರ ಪ್ರತಿ 1 ಕ್ವಿಂಟಲ್‌ಗೆ 3,295 ರೂ. ಬೆಂಬಲ ಬೆಲೆ ನಿಗದಿ ಮಾಡಿದ್ದು, 1 ಎಕರೆಗೆ 10 ಕ್ವಿಂಟಲ್‌ನಂತೆ ಒಬ್ಬ ರೈತರಿಂದ ಗರಿಷ್ಠ 50 ಕ್ವಿಂಟಲ್‌ ವರೆಗೂ ರಾಗಿ ಖರೀದಿ ಮಾಡಲಾಗುತ್ತದೆ. ಖರೀದಿ ಕೇಂದ್ರಗಳಲ್ಲಿ ರಾಗಿ ಖರೀದಿಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಕೈಗೊಂಡಿದ್ದಾರೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

: ಸಿಎಂ ಸಿದ್ದರಾಮಯ್ಯ

Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Kunigal: ಹಳ್ಳಕ್ಕೆ ಉರುಳಿ ಬಿದ್ದ ಟ್ರ್ಯಾಕ್ಟರ್… ತಂದೆ ಮಗ ಸಾವು

Shimoga; Omini caught fire while filling with petrol

Shimoga; ಪೆಟ್ರೋಲ್ ಹಾಕುವಾಗ ಹೊತ್ತಿ ಉರಿದ ಓಮಿನಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಬಿಗ್‌ಬಾಸ್‌ ಮನೆಗೆ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

ಸಂಸದ ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

MP ಡಾ. ಸುಧಾಕರ್‌ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್‌

13-bng

Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!

ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ: ಒಬ್ಬ ಮೃತ

Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

Bengaluru: ಕಾರಿನೊಳಗೆ ಬೆಂಕಿ ಹಚ್ಚಿಕೊಂಡು ಉದ್ಯಮಿ ಆತ್ಮಹತ್ಯೆ

2(1)

AI ಆರೋಗ್ಯ ರಕ್ಷಣೆಯ ವ್ಯವಸ್ಥೆಯಲ್ಲಿ ಸ್ವೀಕಾರದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.