ಕ್ಷೇತ್ರದಲ್ಲಿವೆ 486 ಅತ್ಯಂತ ಕ್ಲಿಷ್ಟಕರ ಮತಗಟ್ಟೆ
Team Udayavani, Mar 17, 2019, 7:43 AM IST
ಚಿಕ್ಕಬಳ್ಳಾಪುರ: ಲೋಕಸಭಾ ಕ್ಷೇತ್ರದಲ್ಲಿ ಸುಗಮ ಹಾಗೂ ಪಾರದರ್ಶಕ ಚುನಾವಣೆ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿರುವ ಜಿಲ್ಲಾಡಳಿತ ಕ್ಷೇತ್ರದ ವ್ಯಾಪ್ತಿಯಲ್ಲಿ ಬರೋಬ್ಬರಿ 486 ಕ್ಕೂ ಅಧಿಕ ಮತಗಟ್ಟೆಗಳನ್ನು ಅತ್ಯಂತ ಅತ್ಯಂತ ಕ್ಲಿಷ್ಟಕರ ಎಂದು ಗುರುತಿಸಿ ಹೆಚ್ಚಿನ ಪೊಲೀಸ್ ಭದ್ರತೆ ಸೇರಿದಂತೆ ಕಾನೂನು ಸುವ್ಯವಸ್ಥೆ ಕಾಪಾಡಲು ಹದ್ದಿನ ಕಣ್ಣಿಟ್ಟಿದೆ.
ಮಾ.19 ರಂದು ಚುನಾವಣೆಯ ಆಧಿಸೂಚನೆ ಹೊರ ಬೀಳಲಿದ್ದು, ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಲು ಮುಹೂರ್ತ ನಿಗದಿಪಡಿಸಿಕೊಳ್ಳುತ್ತಿದ್ದಾರೆ. ಅಖಾಡಕ್ಕೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಬಳಕವಷ್ಟೇ ಕ್ಷೇತ್ರದಲ್ಲಿ ಚುನಾವಣ ಕಣ ರಂಗೇರಲಿದೆ.
ಅಹಿತಕರ ಘಟನೆಗಳು, ನಕಲಿ ಮತದಾನ, ರಾಜಕೀಯ ಪಕ್ಷಗಳ ಕಾರ್ಯಕರ್ತ ಸಂಘರ್ಷ, ಮತದಾನಕ್ಕೆ ಅಡ್ಡಿ, ಮರು ಮತದಾನ ಸೇರಿದಂತೆ ಹಲವು ಆಯಾಮಗಳಲ್ಲಿ ಕ್ಷೇತ್ರದಲ್ಲಿ ಹಲವು ಮತಗಟ್ಟೆ ಜಿಲ್ಲಾಡಳಿತ ಕ್ರಿಟಿಕಲ್ ಮತಗಟ್ಟೆಗಳೆಂದು ಪರಿಗಣಿಸಿ ಶಾಂತಿಯುತ ಚುನಾವಣೆಗೆ ಕ್ರಮ ಕೈಗೊಂಡಿದೆ.
ಅತ್ಯಂತ ಕ್ಲಿಷ್ಟಕರ ಮತಗಟ್ಟೆಗಳ ಪೈಕಿ ಬಿಜೆಪಿ ಅಭ್ಯರ್ಥಿಯಾಗಲಿರುವ ಬಿ.ಎನ್.ಬಚ್ಚೇಗೌಡರ ತವರು ಕ್ಷೇತ್ರ ಹೊಸಕೋಟೆ ಕ್ಷೇತ್ರ, ಬೆಂಗಳೂರಿನ ಯಲಹಂಕ, ಚಿಕ್ಕಬಳ್ಳಾಪುರ ಹಾಗೂ ಚಿಂತಾಮಣಿ ಕ್ಷೇತ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅತ್ಯಂತ ಕ್ಲಿಷ್ಟಕರ ಮತಗಟ್ಟೆಗಳು ಇವೆ.
ಎಲ್ಲೆಲ್ಲಿ ಅತ್ಯಂತ ಕ್ಲಿಷ್ಟಕರ ಮತಗಟ್ಟೆಗಳು: ಸದ್ಯಕ್ಕೆ ಜಿಲ್ಲಾಡಳಿತ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಒಟ್ಟು 2,284 ಮತಗಟ್ಟೆಗಳ ಪೈಕಿ ಬರೋಬ್ಬರಿ 486 ಅತ್ಯಂತ ಕ್ಲಿಷ್ಟಕರ ಎಂದು ಪರಿಗಣಿಸಿದ್ದರೆ, ಉಳಿದ 1,798 ಮತಗಟ್ಟೆಗಳನ್ನು ಸಾಮಾನ್ಯ ಮತಗಟ್ಟೆಗಳಾಗಿ ವಿಗಂಡಿಸಿದೆ.
ಗೌರಿಬಿದನೂರು ಕ್ಷೇತ್ರದಲ್ಲಿ ಒಟ್ಟು 261 ಮತಗಟ್ಟೆಗಳ ಪೈಕಿ 30 ಅತ್ಯಂತ ಕ್ಲಿಷ್ಟಕರವಾಗಿದ್ದರೆ 231 ಸಾಮಾನ್ಯ ಮತಗಟ್ಟೆಗಳಾಗಿವೆ. ಬಾಗೇಪಲ್ಲಿ ಕ್ಷೇತ್ರದಲ್ಲಿ ಗುಡಿಬಂಡೆ ತಾಲೂಕು ಸೇರಿಕೊಂಡು ಒಟ್ಟು 263 ಪೈಕಿ 50 ಸೂಕ್ಷ್ಮವಾಗಿದ್ದರೆ, ಉಳಿದ 213 ಮತಗಟ್ಟೆಗಳು ಸಾಮಾನ್ಯವಾಗಿವೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಒಟ್ಟು 254 ಮತಗಟ್ಟೆಗಳಿದ್ದು, ಆ ಪೈಕಿ 67 ಅತ್ಯಂತ ಕ್ಲಿಷ್ಟಕರೆ, 187 ಸಾಮಾನ್ಯ ಮತಗಟ್ಟೆಗಳಾಗಿವೆ. ಯಲಹಂಕ ಕ್ಷೇತ್ರದಲ್ಲಿ ಒಟ್ಟು 376 ಮತಗಟ್ಟೆಗಳನ್ನು ಸ್ಥಾಪಿಸಲಾಗಿದ್ದು, ಆ ಪೈಕಿ 88 ಅತ್ಯಂತ ಕ್ಲಿಷ್ಟಕರ ಹಾಗೂ 288 ಸಾಮಾನ್ಯ ಮತಗಟ್ಟೆಗಳಾಗಿ ಜಿಲ್ಲಾಡಳಿತ ಗುರುತಿಸಲಾಗಿದೆ.
ಹೊಸಕೋಟೆ ಕ್ಷೇತ್ರದಲ್ಲಿ ಒಟ್ಟು 286 ಮತಗಟ್ಟೆಗಳಿದ್ದು, ಆ ಪೈಕಿ 85 ಅತಿ ಸೂಕ್ಷ್ಮ ಹಾಗೂ ಉಳಿದ 201 ಸಾಮಾನ್ಯ ಮತಗಟ್ಟೆಗಳಾಗಿವೆ. ದೇವನಹಳ್ಳಿ ಕ್ಷೇತ್ರದಲ್ಲಿ ಒಟ್ಟು 292 ಮತಗಟ್ಟೆಗಳಿದ್ದು, ಆ ಪೈಕಿ 58 ಅತ್ಯಂತ ಕ್ಲಿಷ್ಟಕರ ಹಾಗೂ 234 ಸಾಮಾನ್ಯ ಮತಗಟ್ಟೆಗಳಾಗಿವೆ. ದೊಡ್ಡಬಳ್ಳಾಪುರ ಕ್ಷೇತ್ರದಲ್ಲಿ 276 ಮತಗಟ್ಟೆಗಳಿದ್ದು, ಆ ಪೈಕಿ 56 ಅತ್ಯಂತ ಕ್ಲಿಷ್ಟಕರ ಹಾಗೂ 220 ಸಾಮಾನ್ಯ ಮತಗಟ್ಟೆ ಮತ್ತು ನೆಲಮಂಗಲ ಕ್ಷೇತ್ರದಲ್ಲಿ 276 ಮತಗಟ್ಟೆಗಳಿದ್ದು, ಆ ಪೈಕಿ 52 ಅತ್ಯಂತ ಕಿಷ್ಟಕರ 224 ಸಾಮಾನ್ಯ ಮತಗಟ್ಟೆಗಳಾಗಿವೆ.
ಚಿಂತಾಮಣಿ 80, ಶಿಡ್ಲಘಟ್ಟದಲ್ಲಿ 57: ಕೋಲಾರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಸೇರುವ ಜಿಲ್ಲೆಯ ಜಿದ್ದಾಜಿದ್ದಿನ ರಾಜಕಾರಣಕ್ಕೆ ಹೆಸರಾಗಿರುವ ಚಿಂತಾಮಣಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 265 ಮತಗಟ್ಟೆಗಳಿದ್ದು ಆ ಪೈಕಿ 80 ಕ್ಕೂ ಹೆಚ್ಚು ಮತಗಟ್ಟೆಗಳು ಅತ್ಯಂತ ಅತ್ಯಂತ ಕ್ಲಿಷ್ಟಕರವಾಗಿದೆ.
ಶಿಡ್ಲಘಟ್ಟ ಕ್ಷೇತ್ರದಲ್ಲಿ 242 ಮತಗಟ್ಟೆಗಳಿದ್ದು, ಆ ಪೈಕಿ 57 ಮತಗಟ್ಟೆಗಳು ಮಾತ್ರ ಅತ್ಯಂತ ಕ್ಲಿಷ್ಟಕರವಾಗಿದ್ದು ಉಳಿದ 185 ಮತಗಟ್ಟೆಗಳು ಸಾಮಾನ್ಯ ಮತಗಟ್ಟೆಗಳಾಗಿವೆ. ಇಲ್ಲಿ ಕೂಡ ಅತ್ಯಂತ ಕ್ಲಿಷ್ಟಕರ ಮತಗಟ್ಟೆಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಸದ್ಯಕ್ಕೆ 486 ಮತಗಟ್ಟೆಗಳನ್ನು ಅತ್ಯಂತ ಅತ್ಯಂತ ಕ್ಲಿಷ್ಟಕರ ಮತಗಟ್ಟೆಗಳಾಗಿ ಗುರುತಿಸಲಾಗಿದೆ. ಸ್ಥಳೀಯವಾಗಿ ಕ್ಷೇತ್ರದಲ್ಲಿ ಯಾರ್ಯಾರು ಅಭ್ಯರ್ಥಿಗಳಾಗುತ್ತಾರೆ ಎಂಬುದನ್ನು ನೋಡಿಕೊಂಡು ಅತ್ಯಂತ ಕ್ಲಿಷ್ಟಕರ ಮತಗಟ್ಟೆಗಳು ಹೆಚ್ಚಾಗಬಹುದು ಅಥವಾ ಕಡಿಮೆ ಆಗಬಹುದು. ಅತ್ಯಂತ ಕ್ಲಿಷ್ಟಕರ ಮತಗಟ್ಟೆಗೂ ಸಿಆರ್‌ಪಿಎಫ್ ಯೋಧರನ್ನು ಹೆಚ್ಚುವರಿಯಾಗಿ ನಿಯೋಜಿಸುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದೆ. ಸಾಮಾನ್ಯ ಮತಗಟ್ಟೆಗೆ ಪೊಲೀಸ್ ಪೇದೆ ಅಥವಾ ಗೃಹ ರಕ್ಷಕರನ್ನು ನಿಯೋಜಿಸಲಾಗುವುದು.
-ಕೆ.ಸಂತೋಷ ಬಾಬು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಒಟ್ಟು 486 ಅತ್ಯಂತ ಕ್ಲಿಷ್ಟಕರ ಮತಗಟ್ಟೆಗಳಲ್ಲಿ ಮತದಾನದ ವೇಳೆ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ಕ್ಷಣ ಕ್ಷಣಕ್ಕೂ ತಿಳಿಯುವ ನಿಟ್ಟಿನಲ್ಲಿ ಪ್ರತಿ ಮತಗಟ್ಟೆಯಲ್ಲೂ ಕೂಡ ವೆಬ್‌ಕಾಸ್ಟಿಂಗ್ ಮಾಡಲು ಚಿಂತನೆ ನಡೆಸಲಾಗಿದೆ. ಪ್ರತಿ ಮತಗಟ್ಟೆಗೂ ಮೈಕ್ರೋ ವೀಕ್ಷಕರನ್ನು ಚುನಾವಣಾ ಕಾರ್ಯಗಳಿಗೆ ನಿಯೋಜಿಸಲಾಗುತ್ತಿದೆ. ಹೆಚ್ಚಿನ ಪೊಲೀಸ್ ಭದ್ರತೆಯನ್ನು ಈ ಮತಗಟ್ಟೆಗಳಲ್ಲಿ ನಿಯೋಜಿಸಲಾಗುವುದು.
-ಅನಿರುದ್ಧ್ ಶ್ರವಣ್, ಜಿಲ್ಲಾಧಿಕಾರಿ
* ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.