ಜಿಲ್ಲೆಗೆ 247 ವಲಸೆ ಕಾರ್ಮಿಕರ ಆಗಮನ
Team Udayavani, May 23, 2020, 6:22 AM IST
ಚಿಕ್ಕಬಳ್ಳಾಪುರ: ಜಿಲ್ಲೆಗೆ ಕಳೆದ ಮೂರು ದಿನಗಳಿಂದ ಮಹಾರಾಷ್ಟ್ರದಿಂದ 247 ಮಂದಿ ವಲಸೆ ಕಾರ್ಮಿಕರು ಆಗಮಿಸಿದ್ದು ಎಲ್ಲರ ಆರೋಗ್ಯ ತಪಾಸಣೆಗೆ ಒಳಪಡಿಸಿದ್ದು, ಇಲ್ಲಿಯವರೆಗೆ 47 ಮಂದಿಗೆ ಕೋವಿಡ್ 19 ಸೋಂಕು ದೃಢಪಟ್ಟಿದೆ. 63 ಮಂದಿಯ ವರದಿ ನೆಗೆಟಿವ್ ಬಂದಿದೆ. ಉಳಿದ 137 ಮಂದಿ ವೈದ್ಯಕೀಯ ವರದಿಗಾಗಿ ಬರಬೇಕಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, ಮಹಾರಾಷ್ಟ್ರದಿಂದ ಜಿಲ್ಲೆಗೆ ಖಾಸಗಿ ಬಸ್‌ಗಳ ಮೂಲಕ 247 ಮಂದಿ ವಲಸೆ ಕಾರ್ಮಿಕರು ಆಗಮಿಸಿದ್ದು, ಹಳೆಯ 26 ಕೋವಿಡ್ 19 ಪ್ರಕರಣ ಹಾಗೂ ಇಂದಿನ ಹೊಸದಾಗಿ 47 ಪ್ರಕರಣ ಸೇರಿ ಒಟ್ಟಾರೆ ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ 73 ಕ್ಕೆ ಏರಿಕೆಯಾಗಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣ ಹೆಚ್ಚುತ್ತಿದ್ದು, ಹೊರ ರಾಜ್ಯಗಳಿಂದ ಬಂದವರಲ್ಲಿ ಮಾತ್ರ ಕೋವಿಡ್ 19 ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.
ಮಹಾರಾಷ್ಟ್ರದಿಂದ ಜಿಲ್ಲೆಗೆ ಆಗಮಿಸಿದ 247 ಜನರ ವಲಸೆ ಕಾರ್ಮಿಕರಲ್ಲಿ 138 ಜನ ಗೌರಿಬಿದನೂರು ತಾಲೂಕಿನವರು ಹಾಗೂ ಬಾಗೇಪಲ್ಲಿಗೆ 109 ಜನ ವಲಸೆ ಕಾರ್ಮಿಕರು ಆಗಮಿಸಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಉಪವಿಭಾಗಾಧಿಕಾರಿ ರಘುನಂದನ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.