ಜಿಲ್ಲೆಯ 52 ಗ್ರಾಪಂಗಳಿಗೆ ಸ್ವಚ್ಛಮೇವ ಜಾಥಾ
Team Udayavani, Sep 13, 2019, 12:17 PM IST
ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದ ಆವರಣದಲ್ಲಿ ಜಿಪಂ ಸಿಇಒ ಬಿ.ಫೌಜಿಯಾ ತರುನ್ನುಮ್ ಸ್ವಚ್ಛಮೇವ ಜಾಥಾಗೆ ಹಸಿರು ನಿಶಾನೆ ತೋರಿದರು.
ಚಿಕ್ಕಬಳ್ಳಾಪುರ: ಜಿಲ್ಲೆಯನ್ನು ತ್ಯಾಜ್ಯ ಮುಕ್ತ ಮತ್ತು ಸ್ವಚ್ಛ ಜಿಲ್ಲೆಯನ್ನಾಗಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರು ಸ್ವಚ್ಛತೆಗೆ ಕೈಜೋಡಿಸುವ ಮೂಲಕ ಪರಿಸರ ಹಾಗೂ ಜಲ ಸಂರಕ್ಷಣೆಗೆ ಮುಂದಾಗಬೇಕೆಂದು ಜಿಪಂ ಸಿಇಒ ಬಿ.ಫೌಜಿಯಾ ತರುನ್ನುಮ್ ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಗುರುವಾರ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ಸ್ವಚ್ಛಮೇವ ಜಯತೆ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಸ್ವಚ್ಛಮೇವ ಜಯತೆ ಜಿಲ್ಲೆಯ 52 ಗ್ರಾಪಂ ಕೇಂದ್ರಗಳಲ್ಲಿ ಸಂಚರಿಸಿ ಜನರಲ್ಲಿ ಜನ ಜಾಗೃತಿ ಮೂಡಿಸಲಿದೆ ಎಂದರು. ಬೀದಿ ನಾಟಕ ಪ್ರದರ್ಶನ:ಕೇಂದ್ರ ಸರ್ಕಾರ ಈಗಾಗಲೇ ಅಕ್ಟೋಬರ್ 2ರಿಂದ ಪ್ಲಾಸ್ಟಿಕ್ ಮುಕ್ತ ದೇಶವನ್ನಾಗಿಸಲು ಕರೆ ನೀಡಿದೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ನೈರ್ಮಲ್ಯ ಕಾಪಾಡುವ ಅಗತ್ಯ ಇದೆ. ಸ್ವಚ್ಛಮೇವ ಜಯತೆ ಜಾಗೃತಿ ಜಾಥಾದ ಭಾಗವಾಗಿ ಜಿಲ್ಲೆಯ 52 ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಜನರಲ್ಲಿ ಸ್ವಚ್ಛತೆ, ನೈರ್ಮಲ್ಯ, ಜಲಮೂಲಗಳ ಸಂರಕ್ಷಣೆ ಬಗ್ಗೆ ಕಲಾ ಜಾಥಾದ ಮೂಲಕ ಬೀದಿ ನಾಟಕ ಪ್ರದರ್ಶನ ನಡೆಯಲಿದೆ. ಈಗಾಗಲೇ ಜಿಲ್ಲೆಯಲ್ಲಿರುವ ಕಲ್ಯಾಣಿಗಳ ಸ್ವಚ್ಛತೆಗೆ ಜಿಲ್ಲಾಡಳಿತ ಮುಂದಾಗಿ 100 ಕ್ಕೂ ಹೆಚ್ಚು ಕಲ್ಯಾಣಿಗಳ ಸ್ವಚ್ಛತೆ ಮಾಡಲಾಗಿದೆ. ಉಳಿದ ಕಲ್ಯಾಣಿಗಳನ್ನು 10 ದಿನದೊಳಗೆ ಸ್ವಚ್ಛಗೊಳಿಸಬೇಕೆಂದು ಎಲ್ಲಾ ತಾಪಂ ಇಒಗಳಿಗೆ ಸೂಚಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲೆಯ ಚಿಂತಾಮಣಿ ನಗರ ಸಿದ್ದಾರ್ಥ ಕಲಾ ಮತ್ತು ಸಾಂಸ್ಕೃತಿಕ ಸಂಘದ ವತಿಯಿಂದ ಸ್ವಚ್ಛತೆ, ನೈರ್ಮಲ್ಯ ಹಾಗೂ ಪ್ಲಾಸ್ಟಿಕ್ ನಿಷೇಧದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಲಾವಿದರಾದ ಆರ್. ಡಿ. ಮಂಜುನಾಥ, ಗೊಲ್ಲಹಳ್ಳಿ ಕೃಷ್ಣಪ್ಪ, ಜುಂಜನಹಳ್ಳಿ ಸೀನಪ್ಪ, ತಿಮ್ಮಸಂದ್ರದ ಮಂಜುನಾಥ ಮತ್ತಿತರ ತಂಡ ಬೀದಿ ನಾಟಕ ಪ್ರದರ್ಶಿಸಿ ಗಮನ ಸೆಳೆಯಿತು. ಇದೇ ವೇಳೆ ಪರಿಸರ, ಜಲ, ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಗೀತೆ ಹಾಡಿದರು.
ಜಿಪಂ ಉಪ ಕಾರ್ಯದರ್ಶಿ ನೋಮೇಶ್ ಕುಮಾರ್, ಮುಖ್ಯ ಯೋಜನೆ ಅಧಿಕಾರಿ ಮಾಧುರಾವ್, ಗಿರಿಜಾಶಂಕರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯಪಾಲಕ ಅಭಿಯಂತರ ಶಿವಕುಮಾರ್ ಲಾಕೋರ್, ಕೃಷಿ ಇಲಾಖೆ ಜಂಟಿ ನಿರ್ದೇಶಕಿ ಎಲ್.ರೂಪಾ, ಉಪ ನಿರ್ದೇಶಕಿ ಡಾ.ಅನುರೂಪ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru; ಮದ್ಯ ಕುಡಿಸಿ ಅತ್ಯಾಚಾ*ರ: ಬಿಜೆಪಿ ಮುಖಂಡ ಜಿಮ್ ಸೋಮನ ವಿರುದ್ಧ ಕೇಸ್
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Gangavathi; ಸಿಲಿಂಡರ್ ಸ್ಪೋ*ಟಗೊಂಡು ಅಗ್ನಿ ಅವಘಡ: ವೈದ್ಯೆ ಸೇರಿ ಇಬ್ಬರಿಗೆ ತೀವ್ರ ಗಾಯ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.