ಕುಡಿವ ನೀರು ಸಮಸ್ಯೆ ಆಗದಂತೆ ನಿಗಾ ವಹಿಸಿ


Team Udayavani, Apr 5, 2020, 12:16 PM IST

ಕುಡಿವ ನೀರು ಸಮಸ್ಯೆ ಆಗದಂತೆ ನಿಗಾ ವಹಿಸಿ

ಚಿಕ್ಕಬಳ್ಳಾಪುರ: ಬೇಸಿಗೆ ಶುರುವಾಗಿರುವುದರಿಂದ ಜಿಲ್ಲೆಯಲ್ಲಿ ಕುಡಿಯವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಿ ಕಾರ್ಯನಿರ್ವಹಿಸಬೇಕು. ಎಲ್ಲೂ ಕುಡಿಯುವ ನೀರಿಗೆ ಜನ ತೊಂದರೆ ಎದುರಿಸಬಾರದು ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲಾ ಪಂಚಾಯತ್‌ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಲಾಗಿದ್ದು, ಸಾರ್ವಜ ನಿಕರು ಕೊರೊನಾ ತಡೆಗೆ ಸಂಪೂರ್ಣ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ನೀರು ಸರಬರಾಜು ಮಾಡಿ: ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಿಸದಂತೆ ಅಗತ್ಯ ಇರುವ ಕಡೆ ಖಾಸಗಿ ಕೊಳವೆ ಬಾವಿಗಳ ಮೂಲಕ ಅಥವಾ ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡಬೇಕೆಂದು ಜಿಲ್ಲೆಯ ಗ್ರಾಮೀಣ ಹಾಗೂ ಕುಡಿಯುವ ನೀರು ಸರಬರಾಜು ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಾಮಾಜಿಕ ಅಂತರ ಇರಲಿ: ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಆರ್‌.ಲತಾ, ಪ್ರಧಾನ ಮಂತ್ರಿ ಕಿಸಾನ್‌, ಬರ ಪರಿಹಾರ ಹಾಗೂ ಬೆಳೆ ವಿಮೆಗೆ ಸಂಬಂಧಿಸಿದ ಅನುದಾನ ಸರ್ಕಾರದಿಂದ ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ. ರೈತರು ಬ್ಯಾಂಕ್‌ನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಹಣ ಪಡೆದುಕೊಳ್ಳಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ದಿನಸಿ ಅಂಗಡಿ, ರಸಗೊಬ್ಬರ, ಕೀಟನಾಶಕ ಔಷಧಿ ಹಾಗೂ ಬಿತ್ತನೆ ಬೀಜ ಮಾರಾಟ ಅಂಗಡಿ ಗಳು ತೆರೆಯಲು ಯಾವುದೇ ಸಮಯ ನಿಗದಿ ಇಲ್ಲ. ಕೃಷಿ ಹಾಗೂ ತೋಟಗಾರಿಕೆ, ರೇಷ್ಮೆ ಬೆಳೆ ಸೂಕ್ತ ಮಾರಾಟಕ್ಕಾಗಿ ಈಗಾಗಲೇ ಸ್ಥಾಪಿಸಿರುವ ಸ್ಥಳಗಳಲ್ಲಿ ಅಂತರ ಕಾಯ್ದುಕೊಳ್ಳುವಂತೆ ಹಾಗೂ ಸರಕು ಸುಲಭವಾಗಿ ಸರಬರಾಜು ಮಾಡಲು ಸೂಕ್ತ ಕ್ರಮ ವಹಿಸಬೇಕು ಎಂದು ಸೂಚಿಸಿದರು.

ಮೂಲ ಸೌಲಭ್ಯ: ಅಪರ ಜಿಲ್ಲಾಧಿಕಾರಿ ಆರತಿ ಆನಂದ್‌ ಮಾತನಾಡಿ, ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್‌ ಕಾರ್ಯಾಚರಣೆಗಾಗಿ ರಚಿಸಿರುವ ಅಂತರ್‌ ಜಿಲ್ಲಾ, ಅಂತರ್‌ ರಾಜ್ಯ ಹಾಗೂ ಅಂತರ್‌ ತಾಲೂಕು ಚೆಕ್‌ಪೋಸ್ಟ್‌ಗಳಿಗೆ ಬೇಕಾ ಗಿರುವ ಮತ್ತು ನಿರ್ಗತಿ ಕರಿಗೆ, ವಸತಿ ರಹಿತರಿಗೆ, ವಲಸೆ ಬಂದ ಕಾರ್ಮಿಕರಿಗೆ ವಸತಿ, ಊಟದ ವ್ಯವಸ್ಥೆ, ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌, ಉಪವಿಭಾಗಾಧಿಕಾರಿ ರಘುನಂದನ್‌, ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಯಲ್ಲಾ ರಮೇಶ್‌ ಬಾಬು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.