ಎತ್ತಿನಹೊಳೆ ನೀರು ಹರಿಸುವವರೆಗೂ ವಿರಮಿಸಲ್ಲ


Team Udayavani, Apr 16, 2019, 4:42 PM IST

chk
ಸೋಮೇನಹಳ್ಳಿ: ಎತ್ತಿನಹೊಳೆ ನೀರನ್ನು ಚಿಕ್ಕಬಳ್ಳಾಪುರ ಜಿಲ್ಲೆಗೆ ಹರಿಸುವವರೆಗೂ ವಿರಮಿಸುವುದಿಲ್ಲ. ಈ ಭಾಗದ ಜನರಿಗೆ ಎತ್ತಿಹೊಳೆ ನೀರನ್ನು ಕೊಟ್ಟು ಶುದ್ಧ ಕುಡಿಯುವ ನೀರಿಗೆ ಅನುಕೂಲ ಮಾಡಿಕೊಡುವುದಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಭರವಸೆ ನೀಡಿದರು.
ಸೋಮೇನಹಳ್ಳಿ ಬಸ್‌ ನಿಲ್ದಾಣದಲ್ಲಿ ರೋಡ್‌ ಶೋ ನಡೆಸಿ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಐದು ವರ್ಷ ಆಡಳಿತ ಪೂರ್ಣಗೊಳಿಸಿದರೂ ರೈತರ ಸಾಲ ಮನ್ನಾ ಮಾಡಲಿಲ್ಲ ಎಂದು ದೂರಿದ ಅವರು, ಮೋದಿ ಸುಳ್ಳು ಹೇಳುವವರೇ ಹೊರೆತು ಕೆಲಸ ಮಾಡುವವರಲ್ಲ ಎಂದು ಆರೋಪಿಸಿದರು.
ಆಲೋಚಿಸಬೇಕಿದೆ: ರಾಹುಲ್‌ ಗಾಂಧಿ ಪ್ರಧಾನಿಯಾದರೆ ಬಡತನ ರೇಖೆಯೊಳಗಿನ ಕುಟುಂಬದವರ ಖಾತೆಗೆ ವರ್ಷಕ್ಕೆ 72 ಸಾವಿರ ರೂ. ಹಾಕುತ್ತಾರೆ. ಕಾಂಗ್ರೆಸ್‌ ಸರ್ಕಾರ ಏನೇನು ಅಭಿವೃದ್ಧಿ ಕಾರ್ಯ ಮಾಡಿದೆ, ಬಿಜೆಪಿ ಏನು ಮಾಡಿದೆ ಎಂಬುದನ್ನು ಮತದಾರರು ಆಲೋಚಿಸಬೇಕಿದೆ. 2020-21ರೊಳಗಾಗಿ ಎತ್ತಿನಹೊಳೆ ನೀರು ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳಿಗೆ ಹರಿಯಲಿದೆ. ಕೃಷ್ಣಾ ನದಿ ನೀರು ಈಗಾಗಲೇ ನಗರಗೆರೆ ಹೋಬಳಿಯ ಕೆಲವು ಗ್ರಾಮಗಳಲ್ಲಿ ಹರಿಯುತ್ತಿದೆ. ಈ ನೀರು ಹರಿಸಲು ಮುಂದಾಗುತ್ತೇವೆ ಎಂದು ಹೇಳಿದರು.
3ನೇ ಬಾರಿಗೆ ಗೆಲ್ಲಿಸಿ ಕಳುಹಿಸಿದರೆ ಶುದ್ಧ ಕುಡಿಯುವ ನೀರು ನೀಡುವ ಜೊತೆಗೆ ಕ್ಷೇತ್ರದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದಾಗಿ ನಿರುದ್ಯೋಗ ಸಮಸ್ಯೆ ಪರಿಹರಿಸಲಾಗುವುದು. ರೈತರಿಗೆ ಹಾಲಿಗೆ ಪ್ರೋತ್ಸಾಹ ಧನವನ್ನು 5 ರೂ. ಗಳಿಂದ 6 ರೂ.ಗೆ ಹೆಚ್ಚಿಸಿದ್ದೇವೆ. ಬಿಜೆಪಿ ಅಭ್ಯರ್ಥಿ ಬಿ.ಎನ್‌.ಬಚ್ಚೇಗೌಡ ಚುನಾವಣೆಗೆ ಸ್ಪರ್ಧಿಸಿದಾಗ ಮಾತ್ರ ಕ್ಷೇತ್ರದಲ್ಲಿ ಕಾಣಿಸಿಕೊಳ್ಳುತ್ತಾರೆ. ಇತ್ತ ತಲೆ ಹಾಕುವುದಿಲ್ಲ ಎಂದು ದೂರಿದರು.
ಪಿಯು ಕಾಲೇಜು ಮಂಜೂರು ಭರವಸೆ: ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್‌.ಎನ್‌.ಸುಬ್ಟಾರೆಡ್ಡಿ ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ಕಾಂಗ್ರೆಸ್‌ ಪಕ್ಷದಿಂದ ಮಾತ್ರ ಸಾಧ್ಯ. ಸೋಮೇನಹಳ್ಳಿ ಚಿತ್ರಾವತಿ ನದಿಯ ಹತ್ತಿನ ಒಂದು ಚೆಕ್‌ ಡ್ಯಾಂ ನಿರ್ಮಾಣ, ಸಮುದಾಯ ಭವನ, ಶುದ್ಧ ಕುಡಿಯುವ ನೀರಿನ ಘಟಕ, ರಸ್ತೆ ದುರಸ್ತಿ ಕಾಮಗಾರಿ ಮುಂತಾದವುಗಳನ್ನು ಮಾಡಲಾಗಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಪಿಯು ಕಾಲೇಜು ಮತ್ತು ಆಸ್ಪತ್ರೆಗೆ ಮುಂಜೂರು ಮಾಡಿಸುತ್ತೇವೆ. ಗುಡಿಬಂಡೆ ಮತ್ತು ಬಾಗೇಪಲ್ಲಿ ತಾಲೂಕುಗಳಲ್ಲಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮೈತ್ರಿ ಸರ್ಕಾರ ಮಾಡಿದ್ದು, ಮೈತ್ರಿ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂದು ಹೇಳಿದರು.
ಜಿಲ್ಲಾ ಪಂಚಾಯಿತು ಸದಸ್ಯೆ ಗಾಯತ್ರಿ, ಜಿಪಂ ಮಾಜಿ ಸದಸ್ಯ ಕೃಷ್ಣಪ್ಪ, ತಾಪಂ ಉಪಾಧ್ಯಕ್ಷ ಜಿ.ಬಿ.ಭೆ„ರಾರೆಡ್ಡಿ, ಕೃಷ್ಣೇಗೌಡ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.