ಸರ್ಕಾರದ ಯೋಜನೆ ಪ್ರತಿಯೊಬ್ಬರಿಗೂ ತಲುಪಲಿ
Team Udayavani, Feb 20, 2019, 7:29 AM IST
ಚಿಕ್ಕಬಳ್ಳಾಪುರ: ಜನರ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ಧಿಯ ಮಹತ್ವಕಾಂಕ್ಷೆ ಹೊತ್ತು ಸರ್ಕಾರಗಳು ರೂಪಿಸುವ ಪ್ರತಿಯೊಂದು ಯೋಜನೆಗಳ ಹಾಗೂ ಕಾರ್ಯಕ್ರಮಗಳ ಲಾಭ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಿಕ್ಕಾಗ ಮಾತ್ರ ಉತ್ತಮ ಸಮಾಜ ನಿರ್ಮಾಣವಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಆರತಿ ಹೇಳಿದರು.
ನಗರದ ಸಾರ್ವಜನಿಕ ಬಸ್ ನಿಲ್ದಾಣದಲ್ಲಿ ಮಂಗಳವಾರ ರಾಜ್ಯ ಮೈತ್ರಿ ಸರ್ಕಾರದ ಏಳು ತಿಂಗಳಲ್ಲಿ ರೂಪಿಸಿರುವ ಅಭಿವೃದ್ಧಿ ಕಾರ್ಯಕ್ರಮಗಳ ಪಕ್ಷಿನೋಟವನ್ನು ಜಿಲ್ಲೆಯ ರೈತಾಪಿ ಕೃಷಿ ಕೂಲಿಕಾರರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ನಾಗರಿಕರಿಗೆ ಅರಿವು ಮೂಡಿಸಲು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಮ್ಮಿಕೊಂಡಿದ್ದ ಮಾಹಿತಿ ಫಲಕಗಳ ವಸ್ತು ಪ್ರದರ್ಶನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಜನಸಮಾನ್ಯರಿಗೆ ಅರಿವು: ಬಹಳಷ್ಟು ಸಂದರ್ಭಗಳಲ್ಲಿ ಸರ್ಕಾರದ ಜನಪರ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಅರಿವು ಇಲ್ಲದೇ ಸರ್ಕಾರದ ಉದ್ದೇಶಿತ ಗುರಿ ಮುಟ್ಟಲು ಸಾಧ್ಯವಾಗುವುದಿಲ್ಲ. ವಸ್ತು ಪ್ರದರ್ಶನಗಳ ಮೂಲಕ ಜನ ಸಾಮಾನ್ಯರಲ್ಲಿ ಸರ್ಕಾರದ ಯೋಜನೆಗಳ ಬಗ್ಗೆ ಅರಿವು ಮೂಡಿಸಿದರೆ ಬಡ ಜನರಿಗೆ ಅನುಕೂಲವಾಗುತ್ತದೆ. ಜಿಲ್ಲೆಯ ಜನತೆ ಮೂರು ದಿನಗಳ ವಸ್ತು ಪ್ರದರ್ಶನವನ್ನು ವೀಕ್ಷಿಸಿ ಸರ್ಕಾರದ ಯೋಜನೆಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದು ಮನವಿ ಮಾಡಿದರು.
ಮೂರು ದಿನ ಪ್ರದರ್ಶನ: ಸರ್ಕಾರದ ವಿವಿಧ ಕಾರ್ಯಕ್ರಮಗಳನ್ನು ಜನ ಸಾಮಾನ್ಯರಲ್ಲಿ ಅರಿವು ಮೂಡಿಸುವ ಮಹತ್ವಕಾಂಕ್ಷೆಯನ್ನು ಹೊತ್ತು ವಾರ್ತಾ ಇಲಾಖೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ವಸ್ತು ಪ್ರದರ್ಶನದ ಮೂಲಕ ನಾಗರಿಕರಲ್ಲಿ ಅರಿವು ಮೂಡಿಸುತ್ತಿದ್ದು, ಮಂಗಳವಾರದಿಂದ ಗುರುವಾರದವರೆಗೂ ಮೂರು ದಿನಗಳ ಕಾಲ ವಸ್ತು ಪ್ರದರ್ಶನ ಚಿಕ್ಕಬಳ್ಳಾಫುರದಲ್ಲಿ ನಡೆಯಲಿದೆ ಎಂದು ಜಿಲ್ಲಾ ವಾರ್ತಾ ಅಧಿಕಾರಿ ಎಂ.ಜುಂಜಣ್ಣ ತಿಳಿಸಿದರು.
ನಗರಸಭೆಯ ಅಧ್ಯಕ್ಷ ಮುನಿಕೃಷ್ಣ, ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜು, ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕರಾದ ಆರ್, ಶಿವಣ್ಣರೆಡ್ಡಿ, ಪೌರಾಯುಕ್ತರಾದ ಉಮಾಕಾಂತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಎಂ.ಜುಂಜಣ್ಣ, ವಾರ್ತಾ ಸಹಾಯಕಿ ಮೈನಾಶ್ರೀ ಇದ್ದರು.
ಛಾಯಾಚಿತ್ರಗಳ ಪ್ರದರ್ಶನ: ವಸ್ತು ಪ್ರದರ್ಶನದಲ್ಲಿ ರಾಜ್ಯ ಮೈತ್ರಿ ಸರ್ಕಾರ ಏಳು ತಿಂಗಳಲ್ಲಿ ರೂಪಿಸಿ ಅನುಷ್ಠಾನಗೊಳಿಸುತ್ತಿರುವ ಬಡವರ ಬಂಧು, ಹಸಿರು ಕರ್ನಾಟಕ, ಜನತಾದರ್ಶನ, ಋಣಮುಕ್ತ ಪರಿಹಾರ ಕಾಯ್ದೆ, ಬೆಳೆ ಸಮೀಕ್ಷೆ, ಶಾಲಾ ಕಾಲೇಜುಗಳಿಗೆ ಮೂಲ ಸೌಕರ್ಯ, ದಿಶಾ, ಬಡ್ಡಿರಹಿತ ಸಾಲ ನೀಡುವ ಕಾರ್ಯ ಯೋಜನೆ, ಕೈಗಾರಿಕಾ ಕ್ಲಸ್ಟರ್ ಯೋಜನೆ, ಮುಖ್ಯಮಂತ್ರಿ ಮಾತೃಶ್ರೀ ಯೋಜನೆ ಸೇರಿದಂತೆ ಇನ್ನಿತರ ಯೋಜನೆಗಳ ಬಗ್ಗೆ ಸಾರ್ವಜನಿಕರಲ್ಲಿ ಮಾಹಿತಿ ಒದಗಿಸುವ ಆಕರ್ಷಕ ಛಾಯಾಚಿತ್ರಗಳ ಪ್ರದರ್ಶನ ವಸ್ತು ಪ್ರದರ್ಶನದಲ್ಲಿ ಅನಾವರಣಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಮುಂಬೈ ದೋಣಿ ದುರಂತ: ನಾಪತ್ತೆಯಾಗಿದ್ದ ಬಾಲಕನ ಶವ ಪತ್ತೆ, ಮೃತರ ಸಂಖ್ಯೆ 15ಕ್ಕೆ ಏರಿಕೆ
Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.