ವಿವಿಧತೆಯಲ್ಲಿ ಏಕತೆಯೇ ಭಾರತದ ಶ್ರೇಷ್ಠತೆ
Team Udayavani, Jan 27, 2019, 9:01 AM IST
ಚಿಂತಾಮಣಿ: ನಗರದ ಹೊರವಲಯದ ಕಾವಲಗಾನಹಳ್ಳಿಯ ಜೈನ್ ಪಬ್ಲಿಕ್ ಶಾಲೆಯಲ್ಲಿ 70 ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯಅತಿಥಿಯಾಗಿ ಭಾಗವಹಿಸಿದ್ದ ಮೇಜರ್ ಸುಬೇದಾರ್ ವಿಲಾಸ್ ರಮ್‌ಗುಡೆ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ವಿವಿಧತೆಯಲ್ಲಿ ಏಕತೆಯನ್ನು ಹೊಂದಿರುವ ಭಾರತ ವಿಶ್ವದ ಅತಿದೊಡ್ಡ ಗಣತಂತ್ರ ದೇಶ. ಭಾರತೀಯರಾದ ನಾವೆಲ್ಲರೂ ನಮ್ಮ ಹಿರಿಯರ ತ್ಯಾಗ ಬಲಿದಾನಗಳಿಂದ ದೊರೆತ ಸ್ವಾತಂತ್ರ್ಯದ ಮೌಲ್ಯಗಳನ್ನು ಅರಿಯುವುದರ ಜೊತೆಗೆ ನಮ್ಮ ಸಂವಿಧಾನದ ಆಶಯಗಳನ್ನು ಮೈಗೂಡಿಸಿಕೊಂಡು ಏಕತೆ ಹಾಗೂ ಸಮಗ್ರತೆಗಳ ರಕ್ಷಣೆಗೆ ಪಣತೊಡಬೇಕೆಂದು ಸಲಹೆ ನೀಡಿದರು.
ವಿದ್ಯಾರ್ಥಿಗಳು ಮಹಾತ್ಮರ ತತ್ವಾದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಸತøಜೆಗಳಾಗಿ ದೇಶದ ಪ್ರಗತಿಗೆ ಸಹಕರಿಸಬೇಕು. ಮಕ್ಕಳನ್ನು ಸತøಜೆಗಳನ್ನಾಗಿ ಮಾಡುವುದು ಶಿಕ್ಷಕರ ಹಾಗೂ ಪೋಷಕರ ಜವಾಬ್ದಾರಿಯಾಗಿದೆ. ಕೇವಲ ರಾಷ್ಟ್ರೀಯ ಹಬ್ಬಗಳಂದು ಮಾತ್ರ ದೇಶಾಭಿಮಾನ ತೋರುವುದಲ್ಲ, ಸದಾ ಮಕ್ಕಳಲ್ಲಿ ಶಿಕ್ಷಕರು ಹಾಗೂ ಪೋಷಕರು ದೇಶಭಕ್ತಿಯನ್ನು ತುಂಬಬೇಕೆಂದು ಸಲಹೆ ನೀಡಿದರು.
ಗಣರಾಜ್ಯೋತ್ಸವದ ಕುರಿತು ಉಪನ್ಯಾಸ ನೀಡಿದ ಶಾಲೆಯ ಪ್ರಾಂಶುಪಾಲ ಎನ್.ಮಂಜುನಾಥ್‌ರವರು ಗಣರಾಜ್ಯದ ಅರ್ಥವನ್ನು ವಿವರಿಸಿದರಲ್ಲದೆ, ಬ್ರಿಟಿಷರ ದಾಸ್ಯ ಸಂಕೋಲೆ ಬಿಡಿಸಿಕೊಂಡ ಭಾರತ ತನ್ನದೇ ಸಂವಿಧಾನವನ್ನು ರೂಪಿಸಿ ಜಾರಿಗೆ ತಂದ ಶುಭ ದಿನವೇ ಗಣರಾಜ್ಯೋತ್ಸವ ಎಂದು ಹೇಳಿದರು. ಶಾಲಾ ವಿದ್ಯಾರ್ಥಿಗಳ ಕಂಠಸಿರಿಯಿಂದ ಮೂಡಿಬಂದ ಹಲವು ದೇಶಭಕ್ತಿಗೀತೆಗಳು ದೇಶ ಭಕ್ತಿಯ ಸುಧೆಯನ್ನು ಹರಿಸಿದರೆ, ವಿದ್ಯಾರ್ಥಿಗಳು ನಡೆಸಿಕೊಟ್ಟ ದೇಶ ಪ್ರೇಮ ಸಾರುವ ನೃತ್ಯವು ನೋಡುಗರ ಕಣ್ಮನ ಸೆಳೆಯಿತು. ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾಥಿಗಳಿಗೆ ಬಹುಮಾನ ವಿತರಿಸಲಾಯಿತು.
ಶಾಲೆಯ ಮುಖ್ಯಸ್ಥರಾದ ಎಂ.ಪಾರ್ಥಸಾರಥಿ, ಉಪನ್ಯಾಸಕರಾದ ಚಂದ್ರಶೇಖರ್ ಸುಳ್ಳದ್ ಉಪಸ್ಥಿತರಿದ್ದರು. ಶಾಲೆಯ ಶಿಕ್ಷಕಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರೆ, ಶಿಕ್ಷಕಿ ಆರ್.ವಿ.ಭಾರತಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.