ಜ್ಞಾನ ವಿಕಾಸಕ್ಕೆ ಗ್ರಂಥಾಲಯಗಳ ಅಗತ್ಯ: ಬಚ್ಚೇಗೌಡ
Team Udayavani, Aug 17, 2019, 3:00 AM IST
ಚಿಕ್ಕಬಳ್ಳಾಪುರ: ಶಾಲೆಗಳಲ್ಲಿ ಓದುವ ಪಠ್ಯ ಪುಸ್ತಕಗಳ ಜೊತೆಗೆ ಮಕ್ಕಳು ಗ್ರಂಥಾಲಯಗಳಲ್ಲಿ ಸಿಗುವ ಸಾಮಾನ್ಯ ವಿಷಯಗಳ ಕುರಿತಾದ ಪುಸ್ತಕಗಳನ್ನು ಓದುವುದರಿಂದ ಜ್ಞಾನ ವಿಕಾಸವಾಗುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರದಲ್ಲಿ ಸ್ಥಾಪಿಸಲಾಗಿರುವ ಜಿಲ್ಲಾ ಮಕ್ಕಳ ಗ್ರಂಥಾಲಯವನ್ನು ಜಿಲ್ಲೆಯ ಮಕ್ಕಳು ಸದ್ಬಳಕೆ ಮಾಡಿಕೊಳ್ಳಬೇಕೆಂದು ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.
ಮಕ್ಕಳಿಗೆ ಜ್ಞಾನ ವೃದ್ಧಿ: ನಗರದ ಜಿಲ್ಲಾ ಕೇಂದ್ರ ಗ್ರಂಥಾಲಯ ಪಕ್ಕ ಹಳೆ ಕಟ್ಟಡವನ್ನು ನವೀಕರಿಸಿ ಸ್ಥಾಪಿಸಲಾಗಿರುವ ನೂತನ ಜಿಲ್ಲಾ ಮಕ್ಕಳ ಗ್ರಂಥಾಲವನ್ನು ಜಿಲ್ಲೆಗೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ವಿಶ್ವೇಶ್ವರಯ್ಯ, ಸಿ.ಎನ್.ಆರ್.ರಾವ್ ಇಬ್ಬರು ಭಾರತ ರತ್ನರು ಜನಿಸಿದಂತ ಹೆಮ್ಮೆಯ ಜಿಲ್ಲೆ ನಮ್ಮದು. ಮಕ್ಕಳ ಜ್ಞಾನದ ವೃದ್ಧಿಗಾಗಿ ಮಕ್ಕಳ ಗ್ರಂಥಾಲಯವನ್ನು ತೆರೆಯಲಾಗಿದ್ದು, ಜಿಲ್ಲಾಧಿಕಾರಿಗಳ ಕಾರ್ಯವನ್ನು ಶ್ಲಾಘಿಸಿದರು.
5 ಲಕ್ಷ ರೂ. ಅನುದಾನ: ಮಕ್ಕಳ ಗ್ರಂಥಾಲಯದಲ್ಲಿ ಸಮಾಜ, ವಿಜ್ಞಾನ, ಇತಿಹಾಸ, ಸಾಮಾನ್ಯ ಜ್ಞಾನ ಸೇರಿದಂತೆ ವಿವಿಧ ಪುಸ್ತಕಗಳು ಲಭ್ಯವಿದೆ. ಮಕ್ಕಳು ಗ್ರಂಥಾಲಯಕ್ಕೆ ಭೇಟಿ ನೀಡಿ, ವಿವಿಧ ಪುಸ್ತಕಗಳನ್ನು ಓದುವ ಮೂಲಕ ಜ್ಞಾನ ವೃದ್ಧಿಸಿಕೊಂಡು ದೇಶದ ಉತ್ತಮ ಪ್ರಜೆಯಾಗಬೇಕು. ಗ್ರಂಥಾಲಯ ಅಭಿವೃದ್ಧಿಗಾಗಿ ಸಂಸದರ ನಿಧಿಯಿಂದ ಐದು ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು.
ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ: ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್ ಮಾತನಾಡಿ, ದೇಶದ ಪ್ರಥಮ ಪ್ರಧಾನಿ ನೆಹರು ಅವರು ಜಿಲ್ಲೆಗೆ ಭೇಟಿ ನೀಡಿ ಗ್ರಂಥಾಲಯವನ್ನು ಉದ್ಘಾಟಿಸಿದ್ದಾರೆ. ಇದು ಹೆಮ್ಮೆಯ ಸಂಗತಿ. ಪಾರಂಪರಿಕ ಕಟ್ಟಡವಾದ ಇದನ್ನು ಉಳಿಸಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ. ನವೀಕರಣಗೊಳಿಸಿ ಮಕ್ಕಳ ಗ್ರಂಥಾಲಯವನ್ನಾಗಿಸಲಾಗಿದೆ. ಮಕ್ಕಳು ಇದರ ಸದುಪಯೋಗ ಪಡಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಚ್.ವಿ.ಮಂಜುನಾಥ್, ಸಿಇಒ ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ಆರತಿ, ಸಾವರ್ಜನಿಕ ಗ್ರಂಥಾಲಯ ಇಲಾಖೆಯ ನಿರ್ದೇಶಕ ಡಾ.ಸತೀಶ್ ಕುಮಾರ್ ಹೊಸಮನಿ, ಜಿಲ್ಲಾ ನಗರಾಭಿವೃದ್ಧಿ ಕೋಶಾದ ಯೋಜನಾ ನಿರ್ದೇಶಕಿ ರೇಣುಕಾ, ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ಜಿಲ್ಲಾ ಮುಖ್ಯ ಗ್ರಂಥಾಲಯ ಅಧಿಕಾರಿ ಶಂಕರಪ್ಪ ಎಂ. ಇದ್ದರು.
ಬಾಲ ನಂದಿ ತ್ರೈಮಾಸಿಕ ಪತ್ರಿಕೆ ಬಿಡುಗಡೆ: ಇದಕ್ಕೂ ಮೊದಲು ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದೊಂದಿಗೆ ಇದೇ ಮೊದಲ ಬಾರಿಗೆ ಜಿಲ್ಲಾಡಳಿತದ ವತಿಯಿಂದ ಹೊರ ತರಲಾದ ಜಿಲ್ಲೆಯ ಮಕ್ಕಳು ಬರೆದಿರುವ ಕವಿತೆ, ಕಥೆ, ಲೇಖನ ಹಾಗೂ ಜಿಲ್ಲೆಯ ಮಕ್ಕಳ ಪ್ರತಿಭೆಯನ್ನು ಗುರುತಿಸುವ ಬಾಲ ನಂದಿ ತ್ತೈಮಾಸಿಕ ಪತ್ರಿಕೆಯನ್ನು ಸಂಸದ ಬಿ.ಎನ್.ಬಚ್ಚೇಗೌಡ, ಜಿಲ್ಲಾಡಳಿತ ಹಮ್ಮಿಕೊಂಡಿದ್ದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.