ಪಕ್ಷಗಳು ನೀರಾವರಿ ಯೋಜನೆ ಪರಿಗಣಿಸಿಲ್ಲ


Team Udayavani, May 8, 2023, 2:58 PM IST

ಪಕ್ಷಗಳು ನೀರಾವರಿ ಯೋಜನೆ ಪರಿಗಣಿಸಿಲ್ಲ

ಚಿಕ್ಕಬಳ್ಳಾಪುರ: ವಿಧಾನಸಭಾ ಚುನಾವಣೆ ವೇಳೆ ರಾಜಕೀಯ ಪಕ್ಷಗಳು ಜಿಲ್ಲೆಯ ಶಾಶ್ವತ ನೀರಾವರಿ ಯೋಜನೆಗಳ ಬಗ್ಗೆ ಪ್ರಣಾಳಿಕೆಯಲ್ಲಿ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಜಿಲ್ಲಾ ಶಾಶ್ವತ ನೀರಾವರಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಆರ್‌. ಆಂಜನೇಯರೆಡ್ಡಿ ಹೇಳಿದರು.

ನಗರದಲ್ಲಿ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಯಲುಸೀಮೆ ಭಾಗದ ದಶಕಗಳ ಬೇಡಿಕೆ ಈಡೇರಿಸುವಂತೆ ಹೋರಾಟ ಸಮಿತಿಯಿಂದ ಅನೇಕ ಪ್ರತಿಭಟನೆಗಳ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡುತ್ತಿದ್ದರೂ ಗಮನ ಹರಿಸಲಿಲ್ಲ ಎಂದರು.

ಸಮಸ್ಯೆ ಪರಿಹರಿಸಲು ಕ್ರಮ ಕೈಗೊಂಡಿಲ್ಲ: ಈ ಭಾಗದ ಅಂತರ್ಜಲದಲ್ಲಿ ಅಪಾಯಕಾರಿ ಯುರೇನಿಯಂ ಪತ್ತೆಯಾಗಿರುವ ಕುರಿತು ಕೇಂದ್ರ ಸಚಿವ ಗಜೇಂದ್ರಸಿಂಗ್‌ ಶೇಖಾವತ್‌ ಕಳವಳ ವ್ಯಕ್ತಪಡಿಸಿದ್ದು, ಗಂಭೀರವಾಗಿ ಪರಿಗಣಿಸಬೇಕಾದ ಈ ಭಾಗದ ಜನಪ್ರತಿನಿಧಿಗಳು, ಸರ್ಕಾರವಾಗಲಿ ಸಮಸ್ಯೆ ಪರಿಹರಿಸುವ ಕ್ರಮ ಕೈಗೊಂಡಿಲ್ಲ. ಕೇಂದ್ರದ ಸರ್ಕಾರಿ ಸಂಸ್ಥೆಗಳೇ ಇಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿ ಈ ಭಾಗದ ನೀರಾವರಿ ಸಮಸ್ಯೆ ಬಗೆಹರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸರ್ಕಾರಗಳಿಗೆ ವರದಿ ಸಲ್ಲಿಸಿದ್ದರೂ ನಿರ್ಲಕ್ಷಿಸಿದ್ದು, ಎತ್ತಿನಹೊಳೆ ಯೋಜನೆಯಿಂದ ಹನಿ ನೀರು ಜಿಲ್ಲೆಗಳಿಗೆ ಬರುವುದಿಲ್ಲ ಎಂಬ ವರದಿಯನ್ನೂ ಪರಿಗಣಿಸಿಲ್ಲ. ವಿಜ್ಞಾನಿಗಳು ನೀಡಿರುವ ವರದಿ ಬದಿಗಿಟ್ಟು, ಗುತ್ತಿಗೆದಾರರು ನೀಡುವ ಯೋಜನೆಗಳನ್ನು ಜಾರಿಗೊಳಿಸಿ ತನ್ನ ಜೇಬು ತುಂಬಿಸಿಕೊಳ್ಳುವ ಕೆಲಸಕ್ಕೆ ಕೈಹಾಕಿವೆ ಎಂದು ಆರೋಪಿಸಿದರು.

ಸಾಮರ್ಥ್ಯ ಕಳೆದುಕೊಂಡಿವೆ: ಎಚ್‌ಎನ್‌, ಕೆಸಿ ವ್ಯಾಲಿ ಯೋಜನೆಗಳಿಂದ ಕೆರೆಗಳು ತನ್ನ ಮೂಲ ಸ್ವರೂಪವನ್ನೇ ಕಳೆದುಕೊಂಡಿದ್ದು, ಅಂತರ್ಜಲವು ಕಲುಷಿತಗೊಳ್ಳುತ್ತಿದೆ. ಈ ಯೋಜನೆಯಿಂದಲೇ ಅಂತರ್ಜಲ ವೃದ್ಧಿಯಾಗಿದೆ ಎಂಬ ಸುಳ್ಳನ್ನು ವ್ಯವಸ್ಥಿತವಾಗಿ ಹರಡಿಸಲಾಗುತ್ತಿದೆ. ಆದರೆ ಕಳೆದ 3 ವರ್ಷಗಳಿಂದ ನಿರೀಕ್ಷೆಗೂ ಮೀರಿ ಮಳೆಯಾಗುತ್ತಿದ್ದು, ಇದರಿಂದ 40 ವರ್ಷಗಳ ಬಳಿಕ ಎಲ್ಲ ಕೆರೆ ಕುಂಟೆಗಳು ಕೋಡಿ ಹರಿದಿವೆ. ಆದರೆ ಮಳೆ ನೀರನ್ನು ಹಿದಿಟ್ಟುಕೊಳ್ಳುವ ಸಾಮರ್ಥ್ಯವು ಕೆರೆಗಳು ಕಳೆದುಕೊಂಡಿವೆ ಎಂದು ನುಡಿದರು.

ಸುದ್ದಿಗೋಷ್ಠಿಯಲ್ಲಿ ಕಾಮ್ರೇಡ್‌ ಲಕ್ಷ್ಮಯ್ಯ, ಲೋಕೇಶ್‌ ಗೌಡ, ಹಡಗಲಿ ಪ್ರಕಾಶ್‌, ನಾರಾಯಣಸ್ವಾಮಿ, ಶ್ರೀನಿವಾಸ್‌, ಗೋಪಾಲಗೌಡ, ಚೀಮಾಕಲಹಳ್ಳಿ ರಮೇಶ್‌, ರಾಮಕೃಷ್ಣಪ್ಪ, ಪ್ರಮೋದ್‌, ಆನಂದ್‌, ಬಾಬು, ಉಷಾರೆಡ್ಡಿ ಇದ್ದರು.

ಟಾಪ್ ನ್ಯೂಸ್

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

DKS-BGv

Congress Session: ನಾನಿನ್ನೂ ಸತ್ತಿಲ್ಲ, ಅಧ್ಯಕ್ಷನಾಗಿ ಇನ್ನೂ ಬದುಕಿದ್ದೇನೆ: ಡಿಕೆಶಿ

ಶ್ವೇತಭವನ ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

White House; ಎಐ ಹಿರಿಯ ಸಲಹೆಗಾರರಾಗಿ ಭಾರತ ಮೂಲದ ವ್ಯಕ್ತಿ ನೇಮಕ

1-shaba

Sabarimala: ತಂಗಅಂಗಿ ಶೋಭಾಯಾತ್ರೆ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

HD-Kumaraswmy

Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್‌.ಡಿ.ಕುಮಾರಸ್ವಾಮಿ

1-koteshwara

Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್‌ 2ನೇ ಪಂದ್ಯ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

Enforcement Directorate: ಕ್ರಿಮಿನಲ್‌ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ

1-huli

Pilikula: 2 ಮರಿಗಳಿಗೆ ಜನ್ಮ ನೀಡಿದ ಹುಲಿ ರಾಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.