ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಂಜೆ ಉಪಾಹಾರ ಕೊಡುವ ಚಿಂತನೆ

Team Udayavani, Jan 5, 2020, 3:00 AM IST

sslc-vid

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮುಂದಿನ ಎರಡು ತಿಂಗಳ ಕಾಲ ಸಂಜೆ ಸಮಯದಲ್ಲಿ ಶಾಲೆಯಲ್ಲಿಯೇ ಉಪಾಹಾರ ವ್ಯವಸ್ಥೆ ಕಲ್ಪಿಸಿಕೊಡಲು ಚಿಂತನೆ ನಡೆಸಲಾಗುವುದು ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಭಾಂಗಣದಲ್ಲಿ ಶನಿವಾರ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ ಮುಖ್ಯ ಶಿಕ್ಷಕರ ಹಾಗೂ ವಸತಿ ನಿಲಯಗಳ ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸರ್ಕಾರಿ ಬಸ್‌ ವ್ಯವಸ್ಥೆ: ಜಿಲ್ಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆಗಳು ಎದುರಾದರೂ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರು ಬಗೆಹರಿಸಬೇಕು. ಬೆಳಗ್ಗೆ ಹಾಗೂ ಸಂಜೆ ಸಮಯದಲ್ಲಿ ಸರ್ಕಾರಿ ಬಸ್‌ ವ್ಯವಸ್ಥೆ ಕಲ್ಪಿಸಿಕೊಡಲಾಗುತ್ತದೆ. ಈ ನಿಟ್ಟಿನಲ್ಲಿ ಆಯಾ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆ ನೀಡಿ ಉತ್ತೇಜಿಸಬೇಕು ಎಂದರು.

ಉತ್ತಮ ಫ‌ಲಿತಾಂಶ ನಿರೀಕ್ಷೆ: ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್‌ ಮಾತನಾಡಿ, ಶಾಲಾ ಶಿಕ್ಷಕರು ಸಮಾಜವನ್ನು ನಿರ್ಮಾಣ ಮಾಡುವ ನಿರ್ಮಾಪಕರು. ಪ್ರಸ್ತುತ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯ 287 ಶಾಲೆಗಳಲ್ಲಿಯೂ ಉತ್ತಮ ಫ‌ಲಿತಾಂಶದ ಗುರಿ ಹೊಂದಿರುವ ನಿರೀಕ್ಷೆಯಿದ್ದು, ಗುರಿ ಸಾಧಿಸಲು ಶಿಕ್ಷಕರ ಸಹಕಾರ ಅತ್ಯಗತ್ಯ ಎಂದರು. ಸಭೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿತಾದೃಷ್ಟಿಯಿಂದ ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೋಸ್ಕರ ಪ್ರತಿ ದಿನ ಅನುಸರಿಸುವ ಹೊಸ ದಿನಚರಿಯೊಂದನ್ನು ಬಿಡುಗಡೆಗೊಳಿಸಿದರು.

ಸಭೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗೇಶ್‌, ಕೆಎಸ್‌ಆರ್‌ಟಿಸಿ ಜಿಲ್ಲಾ ಅಧಿಕಾರಿ ಬಸವರಾಜು, ಸಾರ್ವಜನಿಕ ಶಿಕ್ಷಣ ಇಲಾಖೆ ಪರೀಕ್ಷಾ ನೋಡಲ್‌ ಅಧಿಕಾರಿ ಶಿವಲಿಂಗಯ್ಯ, ಡಯಟ್‌ ಪ್ರಾಂಶುಪಾಲ ಕೃಷ್ಣಪ್ಪ, ಚಿಕ್ಕಬಳ್ಳಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಆರ್‌.ಶಾಂತಲ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಅಶೋಕ್‌ ಸೇರಿದಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮೂಲ ಸೌಕರ್ಯಕ್ಕೆ ನರೇಗಾ ಬಳಸಿಕೊಳ್ಳಿ: ಜಿಲ್ಲೆಯ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು ಆಯಾ ಗ್ರಾಪಂಗಳ ಅಧ್ಯಕ್ಷರೊಂದಿಗೆ ಮಾತನಾಡಿ ಉದ್ಯೋಗ ಖಾತ್ರಿ ಯೋಜನೆಯಡಿ ಮೂಲ ಸೌಕರ್ಯಗಳಿಲ್ಲದ ಶಾಲೆಗಳಲ್ಲಿ ಕಾಂಪೌಂಡ್‌ ಕಟ್ಟಡ ನಿರ್ಮಾಣ, ಶೌಚಾಲಯ ನಿರ್ಮಾಣ ಹಾಗೂ ಕೈ ತೋಟಗಳನ್ನು ನಿರ್ಮಾಣ ಮಾಡುವುದಕ್ಕೆ ಕ್ರಮ ಜರುಗಿಸಬೇಕು ಎಂದು ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ತಿಳಿಸಿದರು. ಎಸ್ಸೆಸ್ಸೆಲ್ಸಿ ಫ‌ಲಿತಾಂಶದ ನಂತರ 3 ಸರ್ಕಾರಿ ಶಾಲೆಗಳು, 1 ವಸತಿ ಶಾಲೆ ಹಾಗೂ 1 ಅನುದಾನಿತ ಶಾಲೆಗಳಿಗೆ ತಲಾ 50 ಸಾವಿರ ರೂ. ಮೊತ್ತದ ಬಹುಮಾನವನ್ನು ನಾನು ವೈಯುಕ್ತವಾಗಿ ನೀಡುತ್ತೇನೆ ಎಂದರು.

ಟಾಪ್ ನ್ಯೂಸ್

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Priyank Kharge: ಎಲ್ಲವನ್ನೂ ನ್ಯಾಯಾಂಗವೇ ಮಾಡೋದಾದ್ರೆ ಶಾಸಕಾಂಗ ಏಕೆ?

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

Krishna Byre Gowda: 16.5 ಸಾವಿರ ಗ್ರಾಮಗಳು ಈಗ ಪೋಡಿ ಮುಕ್ತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Rain-1

Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್‌ಗಳಿಗೆ ಸೂಚನೆ: ಸಚಿವ ಕೆ.ಎನ್‌. ರಾಜಣ್ಣ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

“ಟೋಲ್‌ಗ‌ಳಲ್ಲಿ ಸೌಲಭ್ಯವಿಲ್ಲ’: ಮಂಜುನಾಥ ಭಂಡಾರಿ

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

MUDA Scam: ಕೇಸ್‌ ವಾಪಸ್‌ಗೆ ಹಣದ ಆಮಿಷ? ಸ್ನೇಹಮಯಿ ಕೃಷ್ಣ ಲೋಕಾಯುಕ್ತಕ್ಕೆ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.