ಸಚಿವರ ನಡುವೆ ಸಮನ್ವಯತೆಯೇ ಇಲ್ಲ
ಕೋವಿಡ್ ವಿಚಾರದಲ್ಲಿ ಬಿಜೆಪಿ ರಾಜಕಾರಣ: ಎಚ್.ಎಂ.ರೇವಣ್ಣ ಆರೋಪ
Team Udayavani, Apr 20, 2020, 6:28 PM IST
ಚಿಕ್ಕಬಳ್ಳಾಪುರ: ರಾಜ್ಯ ಸರ್ಕಾರದಲ್ಲಿ ಯಾವ ಸಚಿವರ ನಡುವೆಯು ಸಮನ್ವಯತೆ ಇಲ್ಲ. ಅವರ ಕಿತ್ತಾಟದಲ್ಲಿ ಜನ ಸಂಕಷ್ಟದಲ್ಲಿದ್ದಾರೆ. ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿಲ್ಲ. ಇದರಿಂದ ರೈತರು ಬೀದಿಗೆ ಬರುವಂತಾಗಿದೆ ಎಂದು ಎಂದು ಮಾಜಿ ಸಚಿವ ಎಚ್.ಎಂ. ರೇವಣ್ಣ ದೂರಿದರು. ನಗರದ ಹೊರ ವಲಯದ ಸಿವಿವಿ ಕ್ಯಾಂಪಸ್ ಆವರಣದಲ್ಲಿ ಭಾನುವಾರ ಮಧ್ಯಾಹ್ನ ಜಿಲ್ಲೆಯ ಕಾಂಗ್ರೆಸ್ ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕೋವಿಡ್-19 ಜಿಲ್ಲಾ ಕಾರ್ಯಪಡೆ ಸಭೆಯಲ್ಲಿ ಅವರು ಭಾಗವಹಿಸಿ ಮಾತನಾಡಿದರು.
ತಿರಸ್ಕಾರ ಮನೋಭಾವ: ಕೋವಿಡ್ ವೈರಸ್ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕಾರಣ ಮಾಡಬೇಡಿ ಎಂದು ಹೇಳುವ ಬಿಜೆಪಿ ನೇತೃತ್ವದ ಕೇಂದ್ರ, ರಾಜ್ಯ ಸರ್ಕಾರಗಳು ಕಾಂಗ್ರೆಸ್ ನಾಯಕರು ನೀಡುವ ಸಲಹೆ ಗಳನ್ನು ತಿರಸ್ಕರಿಸಲಾಗುತ್ತಿದೆ. ಕೇಂದ್ರ ಸರ್ಕಾರಕ್ಕೆ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತಿತರ ಅನೇಕ ನಾಯಕರು ಸಲಹೆ ನೀಡಿದರೂ ಅವುಗಳನ್ನು ಬಿಜೆಪಿ ನಾಯಕರು ಅನುಷ್ಠಾನಗೊಳಿಸುವುದರ ಬದಲು ತಿರಸ್ಕಾರ ಮನೋಭಾವದಿಂದ ನೋಡಲಾಗುತ್ತಿದೆ ಎಂದು ಕಿಡಿ ಕಾರಿದರು. ಬಿಜೆಪಿ ನಾಯಕಯರು ಕೋವಿಡ್ ವಿಚಾರದಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಜನರಿಗೆ ಅಗತ್ಯ ಸೌಲಭ್ಯ ಒದಗಿ ಸುತ್ತಿಲ್ಲ. ತಪಾ ಸಣೆಗೆ ಬೇಕಾದ ಕಿಟ್ ನೀಡುತ್ತಿಲ್ಲ. ಬರೀ ಲಾಕ್‌ಡೌನ್ ಘೋಷಣೆ ಮಾಡಿದರೆ ಸಾಕೆ ಎಂದು ರೇವಣ್ಣ ಸರ್ಕಾರದ ಧೋರಣೆಯನ್ನು ಪ್ರಶ್ನಿಸಿದರು.
ಮಾಜಿ ಸಚಿವ ಎನ್.ಎಚ್.ಶಿವಶಂಕರರೆಡ್ಡಿ ಮಾತನಾಡಿ, ಕೊರೊನಾ ತಡೆಯುವ ವಿಚಾರ ದಲ್ಲಿ ಕಾಂಗ್ರೆಸ್ ಪಕ್ಷ ಸರ್ಕಾರಕ್ಕೆ ಸಂಪೂರ್ಣ ಸಹಮತ ವ್ಯಕ್ತಪಡಿಸಿದೆ. ಆದರೂ ಸರ್ಕಾರದ ಸೂಕ್ತ ಕಾರ್ಯಕ್ರಮಗಳನ್ನು ರೂಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದರು. ರೈತರು ಬೆಳೆದ ಬೆಳೆಗಳನ್ನು ಸರ್ಕಾರವೇ ಖರೀದಿಸಬೇಕು ಎಂದು ಆಗ್ರ ಹಿಸಿದರು. ಈ ಸಂದರ್ಭ ದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಮಾಜಿ ಶಾಸಕ ಎಸ್.ಎಂ.ಮುನಿಯಪ್ಪ, ಜಿ. ಎಚ್.ನಾಗರಾಜ್, ನಂದಿ ಅಂಜಿನಪ್ಪ, ಯಲುವ ಹಳ್ಳಿ ರಮೇಶ್, ಕೆ.ವಿ.ನವೀನ್ ಕಿರಣ್, ಜಿಪಂ ಮಾಜಿ ಅಧ್ಯಕ್ಷ ಪಿ.ಎನ್. ಮುನೇಗೌಡ ಇದ್ದರು.
ಜನ ವಿರೋಧಿ ಸರ್ಕಾರ
ಮಾಜಿ ಸಚಿವ ಹಾಗೂ ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಲಾಕ್‌ಡೌನ್ ಘೋಷಣೆಯಾಗಿ ತಿಂಗಳು ಕಳೆಯುತ್ತಾ ಬಂದಿದೆ. ಆದರೆ ಬಡವರಿಗೆ ಊಟಕ್ಕೆ ಕನಿಷ್ಠ ಸರ್ಕಾರ ಇದುವರೆಗೂ ಏನು ಸಹಾಯ ಮಾಡಿಲ್ಲ. ಬಡವರೇನು ಬಿರಿಯಾನಿ ಕೊಡಿ ಎಂದು ಕೇಳುತ್ತಿಲ್ಲ. ಅನ್ನ, ಸಾಂಬಾರು ಕೊಟ್ಟರು. ಸಾಕು. ಆದರೆ ಸರ್ಕಾರ ಈ ಬಗ್ಗೆ ಕನಿಷ್ಠ ಕಾರ್ಯಕ್ರಮ ರೂಪಿಸುವ ಶಕ್ತಿಯನ್ನು ಕಳೆದುಕೊಂಡಿದೆ. ಇಂತಹ ಜನ ವಿರೋಧಿ, ಬಡವರ ವಿರೋಧಿ ಸರ್ಕಾರ ಮತ್ತೂಂದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.