ಜಿಲ್ಲೆಗಿಲ್ಲ ಕೋವಿಡ್ 19 ಪ್ರಯೋಗಾಲಯ
Team Udayavani, May 11, 2020, 8:02 AM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಆದರೆ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿಯೇ ಕೋವಿಡ್ ಪರೀಕ್ಷೆಗೆ ಅಗತ್ಯವಾದ ಪ್ರಯೋಗಾಯಲಯ ಸ್ಥಾಪನೆ ಕನಾಸಗಿಯೇ ಇದೆ.
ಜಿಲ್ಲೆಯಲ್ಲಿ ಕೋವಿಡ್ 19 ಪ್ರಯೋಗಾಲಯ ಸ್ಥಾಪನೆಗೆ ಜಿಲ್ಲಾ ಆರೋಗ್ಯ ಇಲಾಖೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೂ ಸರ್ಕಾರ ಮಾತ್ರ ಸ್ಪಂದಿಸಿಲ್ಲ. ಹೀಗಾಗಿ ಕೋವಿಡ್ ವೈದ್ಯಕೀಯ ಪರೀಕ್ಷೆಗೆ ಜಿಲ್ಲೆಯ ಆರೋಗ್ಯ ಇಲಾಖೆ ನಿತ್ಯ ಬೆಂಗಳೂರಿಗೆ ಸುತ್ತಾಡಬೇಕಿದೆ.
ಅಸಮಾಧಾನ: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದು, ಸರ್ಕಾರ ಈಗಾಗಲೇ ಮಂಡ್ಯ ಮತ್ತಿತರ ಜಿಲ್ಲೆ ಗಳಲ್ಲಿ ಕೋವಿಡ್ 19 ವೈದ್ಯಕೀಯ ಪರೀಕ್ಷೆಗಾಗಿ ಸುಸಜ್ಜಿತ ಪ್ರಯೋಗಾಲಯಗಳ ಸ್ಥಾಪನೆಗೆ ಮುಂದಾ ಗಿದೆ. ಆದರೆ ವಿಪರ್ಯಾಸ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರು ಜಿಲ್ಲೆಯವರೇ ಆದರೂ ಜಿಲ್ಲೆಯಲ್ಲಿ ಕೊರೊನಾ ಪ್ರಯೋಗಾಲಯಕ್ಕೆ ಸರ್ಕಾರ ಗ್ರೀನ್‌ಸಿಗ್ನಲ್ ನೀಡದಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.
ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರು ಒಂದೆಡೆ ಚೇತರಿಕೆ, ಮತ್ತೂಂದು ಕಡೆ ಸೋಂಕಿತರ ಸಂಖ್ಯೆ ಕೂಡ ಅಷ್ಟೇ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಹೀಗಾಗಿ ಜಿಲ್ಲೆಗೆ ಕೋವಿಡ್ 19 ಸೋಂಕು ಪತ್ತೆಗೆ ಅಗತ್ಯವಾದ ಪ್ರಯೋಗಾಲಯ ಅವಶ್ಯಕವಾದರೂ ಸರ್ಕಾರ ಮಾತ್ರ ಸ್ಪಂದಿಸುತ್ತಿಲ್ಲ.
ಜಿಲ್ಲೆಗೆ ಕೋವಿಡ್ ಪ್ರಯೋಗಾಲಯ ಬೇಕೆಂದು ಸರ್ಕಾರಕ್ಕೆ ಆರಂಭದಲ್ಲಿಯೇ ಆರೋಗ್ಯ ಇಲಾಖೆಯಿಂದ ಪ್ರಸ್ತಾವನೆ ಕಳಿಸಿ ದ್ದೇವೆ. ಆದರೆ ಸರ್ಕಾರ ಅದಕ್ಕೆ ಬೇಕಾದ ಯಂತ್ರೋ ಪಕರಣ ಒದಗಿಸಬೇಕು. ಸದ್ಯಕ್ಕೆ ಬೆಂಗ ಳೂರಿಗೆ ವರದಿಗಳನ್ನು ಕಳುಹಿಸಿ ಕೊಡಲಾಗುತ್ತಿದೆ. –ಡಾ.ಯೋಗೇಶ್‌ಗೌಡ, ಜಿಲ್ಲಾ ಆರೋಗ್ಯಾಧಿಕಾರಿ
–ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…
Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ
Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.