ಆರು ತಿಂಗಳೊಳಗೆ ಈ ಸರ್ಕಾರ ಪತನ
Team Udayavani, May 24, 2018, 12:58 PM IST
ಚಿಂತಾಮಣಿ: ರಾಜ್ಯದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಖಂಡಿಸಿ ನಗರದಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಬುಧವಾರ ಕಪ್ಪುಪಟ್ಟಿ ಕಟ್ಟಿಕೊಂಡು ಕರಾಳ ದಿನ ಆಚರಿಸಿದರು. ನಗರದ ಪ್ರಮುಖ ಬೀದಿಗಳಲ್ಲಿ ಕಪ್ಪು ಪಟ್ಟಿ ಧರಿಸಿ ಮೆರವಣಿಗೆ ನಡೆಸಿದ ಕಾರ್ಯಕರ್ತರು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಧಿಕ್ಕಾರ ಕೂಗಿದರು.
ಜನತೆಗೆ ದ್ರೋಹ:ಈ ವೇಳೆ ಮಾತನಾಡಿದ ಬಿಜೆಪಿ ತಾಲೂಕು ಅಧ್ಯಕ್ಷ ಆಂಜನೇಯರೆಡ್ಡಿ, ರಾಜ್ಯದಲ್ಲಿ 104 ಶಾಸಕರನ್ನು ಹೊಂದಿರುವ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ರಾಜ್ಯದ ಜನತೆಯ ಆಶಯವಾಗಿತ್ತು. ಆದರೆ, ಚುನಾವಣೆಯಲ್ಲಿ ಜನರಿಂದ ತಿರಸ್ಕೃತಗೊಂಡಿರುವ ಕಾಂಗ್ರೆಸ್ ಹಾಗೂ ಜೆಡಿಎಸ್ ಅಪವಿತ್ರ ಮೈತ್ರಿ ಮಾಡಿಕೊಂಡು ರಾಜ್ಯದ ಜನತೆಗೆ ದ್ರೋಹ ಬಗೆದಿವೆ. ಈ ಸಮ್ಮಿಶ್ರ ಸರ್ಕಾರ ಬಹುಕಾಲ ಉಳಿಯುವುದಿಲ್ಲ. ಮೂರರಿಂದ ಆರು ತಿಂಗಳಲ್ಲಿ ಸರ್ಕಾರ ಪತನವಾಗಿ, ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣಾ ಪೂರ್ವದಲ್ಲಿ ಸರ್ಕಾರ ರಚನೆಗೆ ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದ ಕಾಂಗ್ರೆಸ್ ನಾಯಕರು, ಇದೀಗ ಜೆಡಿಎಸ್ ಜೊತೆ ಕೈಜೋಡಿಸಿ ಮಾತು ತಪ್ಪಿದ್ದಾರೆ ಎಂದು ಕಿಡಿಕಾರಿದರು.
ಮುಖಂಡ ನಾ. ಶಂಕರ್ ಮಾತನಾಡಿ, ಈ ಮೈತ್ರಿ ಸರ್ಕಾರ ಹೆಚ್ಚು ಆಯಸ್ಸು ಇಲ್ಲ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕೇಂದ್ರದಲ್ಲಿ ಗದ್ದುಗೆ ಅತಿ ಹೆಚ್ಚು ಸಂಸದರನ್ನು ಗೆಲ್ಲಿಸಲಾಗುವುದು. ಕರ್ನಾಟಕದಲ್ಲೂ ಮತ್ತೆ ಕಮಲ ಅರಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ರಾದ ಮಾಡಿಕೇರಿ ಅರುಣ ಬಾಬು, ಟಿ.ಸಿ.ವೆಂಕಟೇಶ್ ರೆಡ್ಡಿ, ಸದಾಶಿವರೆಡ್ಡಿ, ಸತ್ಯನಾರಾಯಣ, ಮಹೇಶ್, ಬತ್ಲಹಳ್ಳಿ ಶ್ರೀನಿವಾಸ್, ಶ್ರೀಧರ್ ಮೂರ್ತಿ, ಶಿವಣ್ಣ, ವೆಂಕಟರವಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.