ಮಹಿಳಾ ಕಾಲೇಜು ಕಟ್ಟಡಕ್ಕೆ ಅನುದಾನ ನೀಡಲು ಒತ್ತಾಯ
Team Udayavani, Nov 1, 2019, 3:55 PM IST
ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದಲ್ಲಿ ಕಳೆದಆರೇಳು ವರ್ಷಗಳಿಂದ ಅನುದಾನ ಇಲ್ಲದೇ ಕಾಮಗಾರಿ ಕುಂಟುತ್ತಾ ಸಾಗಿರುವ ಸರ್ಕಾರಿ ಮಹಿಳಾ ಪದವಿ ಕಾಲೇಜು ಕಟ್ಟಡಕ್ಕೆ ಅಗತ್ಯ ಅನುದಾನ ನೀಡುವಂತೆ ಕೋರಿ ಎಬಿವಿಪಿ ಮುಖಂಡರು ಜಿಲ್ಲಾ ಉಸ್ತುವಾರಿ ಹಾಗೂ ಉನ್ನತ ಶಿಕ್ಷಣ ಸಚಿವಡಾ.ಸಿ.ಎನ್.ಅಶ್ವತ್ಥನಾರಾಯಣಗೆ ಮನವಿ ಸಲ್ಲಿಸಿದರು.
ಇತ್ತೀಚೆಗೆ ಜಿಲ್ಲೆಗೆ ಆಗಮಿಸಿದ್ದ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣಗೆ, ಎಬಿವಿಪಿ ಮುಖಂಡರು ಮನವಿ ಸಲ್ಲಿಸಿ ಸರ್ಕಾರಿ ಮಹಿಳಾ ಕಾಲೇಜು ಕಟ್ಟಡ ಅನುದಾನ ಇಲ್ಲದೇ ನೆನಗುದಿಗೆಬಿದ್ದಿರುವುದನ್ನು ಗಮನಕ್ಕೆ ತಂದರು.
ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಮಹಿಳಾ ಪದವಿ ಕಾಲೇಜಿನಲ್ಲಿಸಾವಿರಾರು ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದರೂ ಕಟ್ಟಡ ಮತ್ತಿತರ ಮೂಲ ಸೌಕರ್ಯಗಳ ಕೊರತೆಯಿಂದ ಕಾಲೇಜಿನ ಶೈಕ್ಷಣಿಕ ಚಟುವಟಿಕೆಗಳಿಗೆ ತೀವ್ರ ತೊಂದರೆ ಆಗಿದ್ದು, ಸರ್ಕಾರ ಈ ಬಗ್ಗೆಗಮನ ಹರಿಸಿ ಕಾಲೇಜಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಿ ಕಾಲಮಿತಿಯೊಳಗೆ ಕಟ್ಟಡ ಕಾಮಗಾರಿಪೂರ್ಣಗೊಳಿಸಬೇಕು. ಇದರಿಂದ ಜಿಲ್ಲೆಯ ಗ್ರಾಮೀಣ ಭಾಗದ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುತ್ತದೆ ಎಂದು ಎಬಿವಿಪಿ ಮುಖಂಡರು ಸಚಿವರ ಗಮನ ಸೆಳೆದರು. ವಿದ್ಯಾರ್ಥಿಮುಖಂಡರ ಮನವಿಗೆ ಸ್ಪಂದಿಸಿದಸಚಿವರು ಈ ಬಗ್ಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.