ತಂಬಾಕು: 184 ಪ್ರಕರಣ, ದಂಡ
Team Udayavani, Feb 23, 2020, 3:25 PM IST
ಚಿಕ್ಕಬಳ್ಳಾಪುರ: ತಂಬಾಕು ಉತ್ಪನ್ನಗಳ ಸೇವನೆಯಿಂದ ಮಾನವನ ಆರೋಗ್ಯದ ಮೇಲೆ ಉಂಟಾಗುತ್ತಿರುವ ದುಷ್ಪರಿಣಾಮಗಳ ಹಿನ್ನೆಲೆಯಲ್ಲಿ ತಾಲೂಕಿನ ನಂದಿ ಪ್ರಾಥಮಿಕ ಆರೋಗ್ಯ ಕೇಂದ್ರ ವತಿಯಿಂದ ಕೋಟ್ಪಾ ಕಾಯ್ದೆಯಡಿ ಗ್ರಾಮದ ವಿವಿಧ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಬುರೆಡ್ಡಿ ಹಾಗೂ ತಾಲೂಕು ಅರೋಗ್ಯಾಧಿಕಾರಿ ಡಾ.ಮಂಜುಳಾ ಅವರ ನೇತೃತ್ವದಲ್ಲಿ ತಾಲೂಕಿನ ನಂದಿ ಗ್ರಾಮ ವ್ಯಾಪ್ತಿಯಲ್ಲಿ ವಿವಿಧ ಅಂಗಡಿಗಳ ಮಳಿಗೆಗಳ ಮೇಳೆ ದಾಳಿ ನಡೆಸಿ ನಿಷೇಧಿತ ಪ್ರದೇಶದಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದ ಮಾಲಿಕರಿಗೆ ದಂಡ ವಿಧಿಸಲಾಯಿತು.
ಗ್ರಾಮದ ಚಹಾದ ಅಂಗಡಿ, ಕಾಂಡಿ ಮೆಂಟ್ಸ್, ಸರಕು ಮಾರಾಟ ಅಂಗಡಿಗಳ ಮೇಲೆ ಆಂದೋಲನದ ರೀತಿಯಲ್ಲಿ ಕಾರ್ಯಕ್ರಮ ನಡೆಸಲಾ ಯಿತು. ತನಿಖಾ ತಂಡದ ಜೊತೆ ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು. ಈ ವೇಳೆ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಸೇವನೆ ಬಗ್ಗೆ ಕಾನೂನು ತಿಳಿವಳಿಕೆ ನೀಡಿ ಶಾಲಾ, ಕಾಲೇಜುಗಳ ಸಮೀಪ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಬಾರದು. 18 ವರ್ಷದೊಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನ ಮಾರಾಟ ಮಾಡಬಾರದೆಂದು ಎಚ್ಚರಿಕೆ ನೀಡಲಾಯಿತು. ತಂಬಾಕು ಉತ್ಪನ್ನಗಳು ಕ್ಯಾನ್ಸರ್‌ಗೆ ಮಾರಕ ಎಂಬುದನ್ನು ದೊಡ್ಡ ದೊಡ್ಡ ನಾಮಫಲಕಗಳಲ್ಲಿ ಮಳಿಗೆಗಳ ಮುಂದೆ ಕಡ್ಡಾಯ ವಾಗಿ ಪ್ರದರ್ಶಿಸಬೇಕು, ಶಾಲಾ, ಕಾಲೇಜುಗಳ ಸಮೀಪ ಕನಿಷ್ಠ 100 ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟಕ್ಕೆ ಅವಕಾಶವಿಲ್ಲ ಎಂದರು.
184 ಪ್ರಕರಣ ದಾಖಲು: ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಬಾಬುರೆಡ್ಡಿ ನೇತೃತ್ವದಲ್ಲಿ ತಂಬಾಕು ನಿಯಂತ್ರಣ ಪ್ರಾಧಿಕಾರದ ಸದಸ್ಯರು, ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ತಂಬಾಕು ಉತ್ಪನ್ನಗಳ ಸೇವನೆ ದುಷ್ಪರಿಣಾಮದ ಬಗ್ಗೆ ತಿಳಿವಳಿಕೆ ಕಾನೂನು ಉಲ್ಲಂಘಟಿಸಿ ತಂಬಾಕು ಮಾರಾಟ ಮಾಡುತ್ತಿದ್ದವರ ಮೇಲೆ ಬರೋಬ್ಬರಿ ಒಟ್ಟು 184 ಪ್ರಕರಣಗಳನ್ನು ದಾಖಲಿಸಿ ಸಾವಿರಾರು ರೂ, ದಂಡ ವಿಧಿಸಿ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.