ಕಠಿಣ ಲಾಕ್ ಡೌನ್ 3ನೇ ದಿನ 38 ವಾಹನ ಜಪ್ತಿ
Team Udayavani, May 23, 2021, 5:54 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೊರೊನಾ ಸೋಂಕುತಡೆಗಟ್ಟಲು ಜಿಲ್ಲಾಡಳಿತ ಕಠಿಣ ಲಾಕ್‌ಡೌನ್‌ಘೋಷಣೆ ಮಾಡಿದ್ದು, 3ನೇ ದಿನವೂ ರೇಷ್ಮೆ ನಾಡ ಸಂಪೂರ್ಣ ಸ್ತಬ್ಧವಾಗಿತ್ತು.
ಕೊರೊನಾ ಸೋಂಕು ನಿಯಂತ್ರಿಸಲು ಸರ್ಕಾರಹಲವು ಕ್ರಮಗಳನ್ನು ಕೈಗೊಂಡರೂ ನಾಗರಿಕರ ಅಸಹಕಾರದಿಂದ ಸೋಂಕು ನಿಯಂತ್ರಣಕ್ಕೆ ಬಂದಿರಲಿಲ್ಲ. ಬೆಳಗ್ಗೆ 6ರಿಂದ 10ಗಂಟೆವರೆಗೆ ದಿನಸಿಸೇರಿ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ್ದನ್ನೇ ದುರ್ಬಳಕೆ ಮಾಡಿಕೊಂಡ ಜನರು ಕೊರೊನಾನಿಯಮ ಪಾಲಿಸದೇ, ರಸ್ತೆಗಳಲ್ಲಿ, ಮಾರುಕಟ್ಟೆಗಳಲ್ಲಿ,ಅಂಗಡಿಗಳ ಮುಂದೆ ಗುಂಪಾಗಿ ನಿಲ್ಲುತ್ತಿದ್ದರು.
ಇದರಿಂದ ಸೋಂಕು ಮತ್ತಷ್ಟು ಹೆಚ್ಚುವ ಆತಂಕಎದುರಾಗಿತ್ತು. ಹೀಗಾಗಿ, ಜಿಲ್ಲಾಡಳಿತ ಮೇ 23 ತನಕಅಗತ್ಯ ವಸ್ತುಗಳ ಖರೀದಿಗೂ ಅವಕಾಶವಿಲ್ಲದಂತೆಕಠಿಣ ಲಾಕ್‌ಡೌನ್ ಘೋಷಣೆ ಮಾಡಿದೆ. ಇದರಿಂದ ಜಿಲ್ಲಾದ್ಯಂತ ಜನ ಮತ್ತು ವಾಹನ ಸಂಚಾರ ಇಲ್ಲದೇಪ್ರಮುಖ ಬೀದಿಗಳು ಬಿಕೋ ಎನ್ನುತ್ತಿವೆ.
ಮಾರುಕಟ್ಟೆ ನಿಯಮ ಉಲ್ಲಂಘನೆ: ಜಿಲ್ಲೆಯಶಿಡ್ಲಘಟ್ಟ ನಗರದ ಸರ್ಕಾರಿ ರೇಷ್ಮೆ ಗೂಡಿನಮಾರುಕಟ್ಟೆಯಲ್ಲಿ ಎಂದಿನಂತೆ ಮೂರನೇ ದಿನವೂವ್ಯಾಪಾರ ವಹಿವಾಟು ನಡೆದಿದೆ. ರೇಷ್ಮೆ ಬೆಳೆಗಾರರುಮತ್ತು ನೂಲು ಬಿಚ್ಚಾಣಿಕೆದಾರರು ಇ ಹರಾಜುಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು.
ಸಾಮಾಜಿಕಅಂತರಕ್ಕೆ ತಿಲಾಂಜಲಿ ಇಟ್ಟು ವ್ಯಾಪಾರ ವಹಿವಾಟುನಡೆಯುತ್ತಿದೆ ಎಂದು ದೂರುಗಳು ಕೇಳಿ ಬರುತ್ತಿದೆ. ಜಿಲ್ಲೆಯಲ್ಲಿ ಲಾಕ್‌ಡೌನ್‌ಗೆ ಸಹಕಾರ ನೀಡಿರುವನಾಗರಿಕರು, ದಿನಸಿಗಾಗಿ ಪರದಾಡುವಂತಹ ಪರಿಸ್ಥಿತಿನಿರ್ಮಾಣವಾಗಿದೆ.ಜಿಲ್ಲೆಯಲ್ಲಿ ಹಾಲಿನ ಮಳಿಗೆಗಳಿಗೆ ಬೆಳಗ್ಗೆ 6ರಿಂದ10 ಗಂಟೆವರೆಗೆ ಹಾಲು ಮಾರಾಟ ಮಾಡಲುಅನುಮತಿ ನೀಡಿರುವ ಮಾದರಿಯಲ್ಲಿ ಕನಿಷ್ಠ 1ಗಂಟೆಯಾದರೂದಿನಸಿ ಸಾಮಗ್ರಿಗಳನ್ನು ಖರೀದಿಸಲುಜಿಲ್ಲಾಡಳಿತ ಅನುಕೂಲ ಮಾಡಿಕೊಡಬೇಕೆಂದುಸಾರ್ವಜನಿಕರು ಒತ್ತಾಯಿಸಿದ್ದರು.
ಒಂದು ವೇಳೆಯಲ್ಲಿ ಅದು ಸಾಧ್ಯವಾಗದಿದ್ದರೇ, ದಿನಸಿ ಅಂಗಡಿಗಳ ವ್ಯಾಪಾರಿಗಳಿಗೆ ಕನಿಷ್ಠಮನೆಗಳಿಗೇ ಅಗತ್ಯ ವಸ್ತುಗಳನ್ನು ಪೂರೈಕೆ ಮಾಡಲು ಅವಕಾಶ ಕಲ್ಪಿಸಬೇಕೆಂದು ವಿನಂತಿಸಿದ್ದಾರೆ.
ಪೊಲೀಸ್ ಬಂದೋಬಸ್ತ್: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ಕುಮಾರ್ ಅವರು ಜಿಲ್ಲೆಯ ವಿವಿಧಭಾಗಗಳಿಗೆ ಭೇಟಿ ನೀಡಿ ಲಾಕ್‌ಡೌನ್ ಯಶಸ್ವಿಗೊಳಿಸಲು ಕೈಗೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು.ಅದೇ ರೀತಿಯಲ್ಲಿ ಚಿಕ್ಕಬಳ್ಳಾಪುರ ಡಿವೈಎಸ್ಪಿ ರವಿಶಂಕರ್, ಚಿಂತಾಮಣಿ ಡಿವೈಎಸ್ಪಿ ಲಕ್ಷ್ಮಯ್ಯ ಹಾಗೂ ಜಿಲ್ಲೆಯ ಪೊಲೀಸ್ ಅಧಿಕಾರಿಗಳು ಗಸ್ತು ನಡೆಸಿದ್ದಾರೆ.
ಆದರೂ, ಪೊಲೀಸರ ಕಣ್ಣುತಪ್ಪಿಸಿ ಆರೋಗ್ಯದಸಮಸ್ಯೆಯೆಂದು ನೆಪವೊಡ್ಡಿ ಕೆಲವರು ಅನಗತ್ಯವಾಗಿವಾಹನಗಳಲ್ಲಿ ಸಂಚರಿಸುತ್ತಿರುವ ದೂರುಗಳು ಸಹಕೇಳಿಬಂದಿದೆ. ಈ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿಗಳುಕ್ರಮಕೈಗೊಳ್ಳಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Tollywood: ‘ಗೇಮ್ ಚೇಂಜರ್ʼಗೆ ರಾಮ್‌ಚರಣ್ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.