ಇಂದಿನಿಂದ ನಂದಿಗಿರಿಧಾಮ ಪ್ರವಾಸಿಗರಿಗೆ ಮುಕ್ತ
Team Udayavani, Dec 1, 2021, 5:32 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಪ್ರಸಿದ್ಧ ನಂದಿಗಿರಿಧಾಮದ ರಸ್ತೆ ದುರಸ್ತಿ ಕಾರ್ಯ ಮುಗಿದಿದ್ದು, ಬುಧವಾರದಿಂದ ಪ್ರವಾಸಿಗರಿಗೆ ಮುಕ್ತ ಪ್ರವೇಶ ಒದಗಿಸಲಾಗಿದೆ ಎಂದು ಜಿಲ್ಲಾ ಧಿಕಾರಿ ಆರ್.ಲತಾ ತಿಳಿಸಿದ್ದಾರೆ. ಭೂ ಕುಸಿತದಿಂದ ಶಿಥಿಲಗೊಂಡು ನಂತರ ಮರು ನಿರ್ಮಾಣಗೊಂಡಿರುವ ನಂದಿಗಿರಿಧಾಮದ ರಸ್ತೆ, ಸೇತುವೆಯನ್ನು ಅ ಧಿಕಾರಿಗಳೊಂದಿಗೆ ಖುದ್ದು ಪರಿವೀಕ್ಷಣೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್ಚಿನ ಮಳೆಯಿಂದಾಗಿ ಆಗಸ್ಟ್ ತಿಂಗಳಲ್ಲಿ ರಸ್ತೆ ಕುಸಿದಿತ್ತು.
ಈ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿ ಸಲಾಗಿತ್ತು. ಆದ್ಯತೆ ಮೇಲೆ ಈ ರಸ್ತೆ ದುರಸ್ತಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದು ಹೇಳಿದರು. ಬುಧವಾರದಿಂದಲೇ ನಂದಿಗಿರಿಧಾಮವು ಸಾರ್ವಜನಿಕರು, ಪ್ರವಾಸಿಗರ ಪ್ರವೇಶಕ್ಕೆ ಮುಕ್ತವಾ ಗಲಿದೆ. ಸೋಮವಾರದಿಂದ ಶುಕ್ರವಾರದವರೆಗೆ ಮಾತ್ರ ಗಿರಿಧಾಮದ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗುತ್ತಿದೆ. ಆದರೆ, ವಾರಾಂತ್ಯದ ಶನಿವಾರ, ಭಾನುವಾರದಂದು ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.
ಜಿಲ್ಲೆಯ ಅತ್ಯಮೂಲ್ಯವಾದ ಆಸ್ತಿ: ಗಿರಿಧಾಮದ ಹೋಟೆಲ್, ವಸತಿ ಗೃಹಗಳಲ್ಲಿ ಮುಂಗಡವಾಗಿ ಕೊಠಡಿಗಳನ್ನು ಕಾಯ್ದಿರಿಸಿದವರಿಗೆ ಮಾತ್ರ ವಾರಾಂತ್ಯದ ದಿನಗಳಂದು ಪ್ರವೇಶ ಇರುತ್ತದೆ. ಪ್ರಕೃತಿ ರಮಣೀಯತೆ, ಸಸ್ಯಗಳು, ಜೀವವೈವಿಧ್ಯತೆ ಕಾರಣದಿಂದ ಜಾಗತಿಕ ಮಟ್ಟದಲ್ಲಿ ಗಮನ ಸೆಳೆದು ವಿಶಿಷ್ಟವಾಗಿ ಗುರುತಿಸಿಕೊಂಡಿರುವ ನಂದಿಗಿರಿಧಾಮ ಜಿಲ್ಲೆಯ ಅತ್ಯಮೂಲ್ಯವಾದ ಆಸ್ತಿ ಮತ್ತು ಹೆಮ್ಮೆಯಾಗಿದೆ.
ನೈರ್ಮಲ್ಯಕ್ಕೆ ಆದ್ಯತೆ ನೀಡಿ: ಈ ಸುಪ್ರಸಿದ್ಧ ಪ್ರವಾಸಿ ತಾಣದಲ್ಲಿ ಸಾರ್ವಜನಿಕರು, ಪ್ರವಾಸಿಗರು ಸ್ವತ್ಛತೆ ಕಾಪಾಡುವ ಮೂಲಕ ಗಿರಿಧಾಮದ ನೈರ್ಮಲ್ಯಕ್ಕೆ ಆದ್ಯತೆ ನೀಡಬೇಕು. ಜಿಲ್ಲಾಡಳಿತ ಈಗಾಗಲೇ ನಂದಿಗಿರಿಧಾಮದಲ್ಲಿ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಅನ್ನು ನಿಷೇಧಿ ಸಿ ಆದೇಶ ಹೊರಡಿಸಿದೆ. ಗಿರಿಧಾಮಕ್ಕೆ ಬರುವವರೆಲ್ಲರೂ ಈ ಎಲ್ಲಾ ನಿಯಮ ಕಡ್ಡಾಯವಾಗಿ ಪಾಲಿಸಬೇಕು ಎಂದು ಮನವಿ ಮಾಡಿದರು.
ಕೋವಿಡ್ ಮಾರ್ಗಸೂಚಿ ಪಾಲಿಸಿ: ಅಲ್ಲದೆ, ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪಾಲಿಸು ವುದು ಕಡ್ಡಾಯವಾಗಿದೆ. ಮಾಸ್ಕ್ ಧರಿಸುವುದು, ವ್ಯಕ್ತಿಗತ ಅಂತರ ಪಾಲಿಸಬೇಕಾಗಿದೆ ಎಂದು ಜಿಲ್ಲಾ ಧಿಕಾರಿ ಆರ್.ಲತಾ ಮನವಿ ಮಾಡಿದ್ದಾರೆ.
ವಾಹನಗಳಿಗೆ ಮಿತಿ: ಗಿರಿಧಾಮಕ್ಕೆ ಬರುವ ವಾಹನಗಳ ಸಂಖ್ಯೆಗೆ ಮಿತಿ ಹೇರಲಾಗಿದೆ. ಗಿರಿಧಾಮದ ವಾಹನ ನಿಲುಗಡೆ ಪ್ರದೇಶದಲ್ಲಿನ ಸ್ಥಳಾವಕಾಶಕ್ಕೆ ಅನುಗುಣವಾಗಿ 350 ನಾಲ್ಕು ಚಕ್ರ, 1500 ದ್ವಿಚಕ್ರ ವಾಹನವನ್ನು ಗಿರಿಧಾಮದ ಕೆಳಭಾಗದಲ್ಲಿರುವ ಮುಖ್ಯ ಪ್ರವೇಶದ್ವಾರದಲ್ಲಿಯೇ ತಪಾಸಣೆ ನಡೆಸಿ, ಪಾಸ್ ಹೊಂದಿರುವವರಿಗೆ ಮಾತ್ರ ಬಿಡಲಾಗುವುದು. ಗಿರಿಧಾಮದ ಪ್ರವೇಶ ಬಯಸುವವರು ಪಾಸ್‌ಗಳನ್ನು ಹೊಂದುವುದು ಕಡ್ಡಾಯವಾಗಿದೆ. ಪಾಸ್ ವಿತರಿಸಲು ಆನ್‌ಲೈನ್, ಆಫ್‌ಲೈನ್ ಎರಡೂ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದರು.
ಮಾರ್ಗಸೂಚಿ ಉಲ್ಲಂಘಿಸಿದ್ರೆ ದಂಡ: ಎಸ್ಪಿ ಜಿ. ಕೆ.ಮಿಥುನ್‌ಕುಮಾರ್ ಮಾತನಾಡಿ, ಈ ಹಿಂದೆ ನಂದಿಗಿರಿಧಾಮದಲ್ಲಿ ಜಾರಿಯಲ್ಲಿದ್ದ ಪೊಲೀಸ್ ಗಸ್ತನ್ನು ಬುಧವಾರದಿಂದ ಮುಂದುವರಿಸ ಲಾಗುವುದು. ವಾರಾಂತ್ಯ ಸೇರಿ ಎಲ್ಲಾ ದಿನಗಳಲ್ಲಿಯೂ ನಂದಿಗಿರಿಧಾಮದಲ್ಲಿ ಪೊಲೀಸ್ ಬಂದೋಬಸ್ತ್ ಇರಲಿದೆ. ಕೋವಿಡ್ ನಿಯಂತ್ರಣ ಮಾರ್ಗಸೂಚಿ ಉಲ್ಲಂಘಿಸುವವರ ವಿರುದ್ಧ ದಂಡ ವಿ ಧಿಸಲಾಗುವುದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ನೀತಿ ನಿಯಮ ಪಾಲಿಸಿ: ಗಿರಿಧಾಮದ ತಪ್ಪಲಿನ ಪ್ರವೇಶ ದ್ವಾರದಲ್ಲಿಯೂ ಈ ಹಿಂದಿನಂತೆ ವಾಹನಗಳ ತಪಾಸಣೆ ನಡೆಯಲಿದೆ. ಗಿರಿಧಾಮದ ಪ್ರವೇಶಕ್ಕೆ ಸರ್ಕಾರ ನೀಡಿರುವ ಎಲ್ಲಾ ನೀತಿ ನಿಯಮಗಳನ್ನು ಪೊಲೀಸ್ ಇಲಾಖೆ ಕಟ್ಟುನಿಟ್ಟಾಗಿ ಜಾರಿಗೊಳಿಸಲಿದೆ ಎಂದು ತಿಳಿಸಿದರು. ತಹಶೀಲ್ದಾರ್ ಗಣಪತಿಶಾಸ್ತ್ರಿ, ಪಿಡಬ್ಲೂéಡಿ ಕಾರ್ಯಪಾಲಕ ಅಭಿಯಂತರ ತಿಮ್ಮರಾಯಪ್ಪ, ನಂದಿಗಿರಿಧಾಮದ ವಿಶೇಷ ಅಧಿಕಾರಿ ಗೋಪಾಲ್, ವಿವಿಧ ಇಲಾಖೆ ಅ ಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.