ಹೊಸ ವರ್ಷಕ್ಕೂ ಮೊದಲೇ ನಂದಿಗಿರಿಧಾಮದಲ್ಲಿ ಪ್ರವಾಸಿಗರಿಗೆ ಪ್ರವೇಶ ನಿಷೇಧ:ಜಿಲ್ಲಾಧಿಕಾರಿ ಆದೇಶ
Team Udayavani, Dec 26, 2020, 8:45 PM IST
ಚಿಕ್ಕಬಳ್ಳಾಪುರ: ಹೊಸ ವರ್ಷವನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಗಿರಿಧಾಮದಲ್ಲಿ ಮಾಡಲು ಯೋಜನೆ ಹಾಕಿಕೊಂಡಿದ್ದೀರಾ? ಒಂದು ವೇಳೆ ಹಾಕಿಕೊಂಡಿದ್ದರೇ ಕೂಡಲೇ ತಮ್ಮ ಪ್ಲಾನ್ ಬದಲಾಯಿಸಿಕೊಳ್ಳಿ. ಹೌದು ಜಿಲ್ಲೆಯಲ್ಲಿ ಕೋವಿಡ್ ಸೋಂಕು ನಿಯಂತ್ರಿಸಲು ಚಿಕ್ಕಬಳ್ಳಾಪುರ ಜಿಲ್ಳಾಧಿಕಾರಿ ಆರ್.ಲತಾ ಅವರು ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಇದೇ ಮೊದಲ ಬಾರಿಗೆ ಮೂರುದಿನಗಳ ಕಾಲ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಇಂಗ್ಲೆಂಡ್ ಇತರೆ ರಾಷ್ಟ್ರಗಳಲ್ಲಿ ರೂಪಾಂತರಗೊಂಡಿರುವ ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್. ಲತಾ ಅವರು ಇದೇ ಮೊದಲ ಬಾರಿಗೆ ಅಂದರೇ ಕರ್ನಾಟಕದ ಊಟಿಯೆಂದು ಖ್ಯಾತಿ ಹೊಂದಿರುವ ನಂದಿಗಿರಿಧಾಮದಲ್ಲಿ ಡಿ 30 ರಂದು ಬೆಳಿಗ್ಗೆ 6 ಗಂಟೆಯಿಂದ ಜನವರಿ 02 ಬೆಳಿಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು, ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಕೋವಿಡ್ ಸೋಂಕು ನಿಯಂತ್ರಿಸಲು ಜಿಲ್ಲಾಡಳಿತ ಕೈಗೊಂಡಿರುವ ಕ್ರಮವನ್ನು ಹಲವರು ಸ್ವಾಗತಿಸಿದ್ದಾರೆ. ಆದರೇ ಕೋವಿಡ್ ಸೋಂಕಿನ ನೆಪದಲ್ಲಿ ಜಿಲ್ಲೆಯಲ್ಲಿ ಪ್ರವಾಸಿ ತಾಣದಲ್ಲಿ ಮೂರು ದಿನಗಳ ಕಾಲ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿರುವುದಕ್ಕೆ ಪ್ರವಾಸಿಗರು ಬೇಸರ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಈಗಾಗಲೇ ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ನಂದಿಗಿರಿಧಾಮದಲ್ಲಿ ಪ್ರವೇಶ ಕಲ್ಪಿಸಿತ್ತು ಆದರೇ ಇದೀಗ ದಿಡೀರ್ ಎಂದು ಮೂರು ದಿನಗಳ ಕಾಲ ಪ್ರವೇಶವನ್ನು ನಿಷೇಧಿಸಿ ಆದೇಶ ಹೊರಡಿಸಿರುವುದಕ್ಕೆ ಅಚ್ಚರಿ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ತಮಿಳುನಾಡಿನಲ್ಲಿ ವ್ಯಕ್ತಿಗತ ರಾಜಕಾರಣ ನಡೆಯಲ್ಲ, ಈಗ ಅಂತಹ ನಾಯಕರೂ ಇಲ್ಲ: ಅಣ್ಣಾಮಲೈ
ಸಾಮಾನ್ಯವಾಗಿ ಜಿಲ್ಲೆಯ ನಂದಿಗಿರಿಧಾಮದಲ್ಲಿ ಹೊಸ ವರ್ಷದಲ್ಲಿ ಸಂಭ್ರಮಾಚರಣೆಯ ಹೆಸರಿನಲ್ಲಿ ಕೆಲ ಪ್ರವಾಸಿಗರು ಪಾನಮತ್ತರಾಗಿ ವಾಹನಗಳನ್ನು ಚಲಾಯಿಸಿ ಅಪಘಾತಗಳು ಸಂಭವಿಸುವ ಜೊತೆಗೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಬರುವುದರಿಂದ ಕೋವಿಡ್ ಸೋಂಕು ಹರಡುವ ಸಾಧ್ಯತೆಯಿದೆ ಎಂದು ಚಿಕ್ಕಬಳ್ಳಾಪುರ ಸರ್ಕಲ್ ಇನ್ಸೆಪೆಕ್ಟರ್ ಅವರ ಕೋರಿಕೆಯನ್ನು ಪರಿಗಣಿಸಿ ನಂದಿಗಿರಿಧಾಮದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ಸಂಭವಿಸದಂತೆ ಮತ್ತು ಸಾರ್ವಜನಿಕರಿಗೆ ಕೊರೊನಾ ಸೋಂಕು ಹರಡದಂತೆ ತಡೆಗಟ್ಟುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಸಾರ್ವಜನಿಕರ ಹಿತದೃಷ್ಠಿಯಿಂದ ಡಿ.30 ರಿಂದ ಬೆಳಿಗ್ಗೆ 6 ಗಂಟೆಯಿಂದ ಜನವರಿ02 ಬೆಳಿಗ್ಗೆ 6 ಗಂಟೆಯವರೆಗೆ ಸಾರ್ವಜನಿಕರು/ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆರ್.ಲತಾ ಆದೇಶಿಸಿದ್ದಾರೆ.
ಒಟ್ಟಾರೇ ಚಿಕ್ಕಬಳ್ಳಾಪುರ ಜಿಲ್ಲೆಯ ಇತಿಹಾಸದಲ್ಲಿ ಸಾಮಾನ್ಯವಾಗಿ ಡಿ.31 ರಂದು ರಾತ್ರಿ ನಂದಿಗಿರಿಧಾಮದಲ್ಲಿ ಪ್ರವೇಶವನ್ನು ನಿಷೇಧದ ಆದೇಶವನ್ನು ಜಾರಿಗೊಳಿಸಲಾಗುತ್ತಿತ್ತು ಆದರೇ ಇದೇ ಮೊದಲ ಬಾರಿಗೆ ಜಿಲ್ಲಾಧಿಕಾರಿ ಆರ್.ಲತಾ ಅವರು ಖಡಕ್ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ.
ಇದನ್ನೂ ಓದಿ: ಕೋವಿಡ್ ಆತಂಕದ ನಡುವೆಯೂ ಕೊಡಗಿನ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ದಂಡು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
MUST WATCH
ಹೊಸ ಸೇರ್ಪಡೆ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.