ಅನಧಿಕೃತ ವಾಹನಗಳ ಸಂಚಾರಕ್ಕೆ ಬ್ರೇಕ್
ಕಾರ್ಯಾಚರಣೆಗಿಳಿದ ಸಾರಿಗೆ ಇಲಾಖೆ ಅಧಿಕಾರಿಗಳಿಂದ ಎರಡು ಕ್ರೂಸರ್ ವಾಹನ ವಶ
Team Udayavani, Sep 17, 2021, 4:12 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಮರಿನಾಯಕನಹಳ್ಳಿ ಬಳಿ ನಡೆದ ಭೀಕರ ಅಪಘಾತಕ್ಕೆ ಸಾರಿಗೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳು ಗುರುವಾರ ಕಾರ್ಯಾಚರಣೆ ನಡೆಸಿ ಎರಡು ಜೀಪ್ ವಶಕ್ಕೆ ಪಡೆದು, ಅನಧಿಕೃತ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಿದ್ದಾರೆ.
ಆಟೋ ಜೀಪ್‌ಗಳಲ್ಲೇ ಪ್ರಯಾಣಿಕರ ಸಂಚಾರ, ಅನಧಿಕೃತ ವಾಹನಗಳ ಓಡಾಟಕ್ಕಿಲ್ಲ ಕಡಿವಾಣ ಎಂಬ ತಲೆಬರಹದಡಿಯಲ್ಲಿ ಉದಯವಾಣಿ ಯಲ್ಲಿ ಪ್ರಕಟವಾದ ವಿಶೇಷ ವರದಿಯಿಂದ ಎಚ್ಚೆತ್ತುಕೊಂಡಿರುವ ಆರ್‌ಟಿಒ ಅಧಿಕಾರಿಗಳು, ನಗರದಲ್ಲಿ ಕಾರ್ಯಾಚರಣೆ ನಡೆಸಿ ಎರಡು ಕ್ರೂಸರ್ ವಾಹನ ವಶಕ್ಕೆ ಪಡೆದುಕೊಂಡಿದ್ದಾರೆ.
ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಬಾಗೇಪಲ್ಲಿ, ಅಗಲಗುರ್ಕಿ ಮಾರ್ಗದಲ್ಲಿ ಪ್ರಾಯಾಣಿಕರನ್ನು ಸಾಗಿಸುತ್ತಿದ್ದ ಎರಡು ಕ್ರೂಸರ್ ವಾಹನ ತಡೆದು, ಅದರಲ್ಲಿದ್ದ ಪ್ರಯಾಣಿಕರನ್ನು ಕೆಳಗೆ ಇಳಿಸಿ ವಾಹನ ವಶಕ್ಕೆ ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ:ಸರ್ಕಾರಿ ಪಿಯು ಕಾಲೇಜು ಪ್ರವೇಶಕ್ಕೆ ದುಬಾರಿ ಶುಲ್ಕ ವಸೂಲಿ ಸರಿನಾ?
ಅಧಿಕಾರಿಗಳು ಮತ್ತು ಸಿಬ್ಬಂದಿಯ ಕೊರತೆಯ ನಡುವೆಯೂ ಆರ್‌ಟಿಒ ಅಧಿಕಾರಿಗಳು ಅನಧಿಕೃತ ವಾಹನಗಳ ಸಂಚಾರಕ್ಕೆ ಬ್ರೇಕ್ ಹಾಕಲು
ಮುಂದಾಗಿದ್ದಾರೆ. ಚಿಂತಾಮಣಿಯಲ್ಲಿ ನಡೆದ ಘಟನೆ ಆಧರಿಸಿ ಕಾರ್ಯಾಚರಣೆಯನ್ನು ಸೀಮಿತಗೊಳಿಸದೆ, ಜಿಲ್ಲೆಯಲ್ಲಿ ಅನಧಿಕೃತ ವಾಹನಗಳ ಸಂಚಾರಕ್ಕೆ ಸಂಪೂರ್ಣ ಕಡಿವಾಣ ಹಾಕಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅನಧಿಕೃತ ವಾಹನಗಳ ಸಂಚಾರ ನಿರಾತಂಕವಾಗಿ ನಡೆಯುತ್ತಿದ್ದು, ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತಷ್ಟು ಬಿಗಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.