ಶಿಡ್ಲಘಟ್ಟ: ಕೌಟುಂಬಿಕ ಕಲಹ: ಒಂದೇ ಕುಟುಂಬದ ಮೂವರು ಸಾವು; ಮತ್ತೊಬ್ಬ ಅಸ್ವಸ್ಥ
Team Udayavani, Feb 22, 2023, 10:57 AM IST
ಶಿಡ್ಲಘಟ್ಟ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದು ಮತ್ತೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಯಣ್ಣೂರು ಗ್ರಾಮದಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.
ಗ್ರಾಮದ ನೇತ್ರಾ (35) ಪುತ್ರಿಯರಾದ ವರ್ಷಿತ( 7 ತರಗತಿ) ಮತ್ತು ಸ್ನೇಹ(4 ತರಗತಿ) ಮೂವರ ಮೃತದೇಹಗಳು ಸುಟ್ಟು ಕರಕಲಾಗಿದೆ.
ನೇತ್ರಾ ಅವರ ಪತಿ ಸೊಣ್ಣಪ್ಪ ಸಹ ವಿಶೇಷ ವಿಷ ಸೇವಿಸಿದ್ದು, ಅವರನ್ನು ಚಿಕಿತ್ಸೆಗಾಗಿ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಯಲ್ಲಿ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ತ್ರಿಮೂರ್ತಿ, ಇನ್ಸ್ ಪೆಕ್ಟರ್ ನಂದಕುಮಾರ್ ಮತ್ತು ಸಿಬ್ಬಂದಿ ಭೇಟಿ ನೀಡಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿಡ್ಲಘಟ್ಟ ತಾಲೂಕಿನ ಚೀಮಂಗಲ ಗ್ರಾಮ ಪಂಚಾಯಿತಿಯ ಯಣ್ಣೂರು ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು ಗ್ರಾಮಸ್ಥರೆಲ್ಲ ಸೇರಿ ಆತಂಕ ವ್ಯಕ್ತಪಡಿಸಿದ್ದಾರೆ. ಇದು ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವುದು ಪೊಲೀಸ್ ತನಿಖೆಯಿಂದ ಹೊರಬರಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು
Waqf ಬಗ್ಗೆ ಬಿವೈವಿ ಜತೆ ಮಾತಾಡುವ ಅವಶ್ಯಕತೆ ನನಗಿಲ್ಲ: ಯತ್ನಾಳ್
ರಾಜ್ಯದ ಅರಣ್ಯ ನಿಧಿಗಾಗಿ ಕೇಂದ್ರ ಸರಕಾರಕ್ಕೆ ನಿಯೋಗ: ಅರಣ್ಯ ಸಚಿವ ಖಂಡ್ರೆ
Bus Fare Hike: ಸರಕಾರದ ಹೊಟ್ಟೆಗೆ ಇನ್ನೆಷ್ಟು ತೆರಿಗೆ, ಶುಲ್ಕ ತೆರಬೇಕು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು
Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.