ಜವಾಬ್ದಾರಿಯಿಂದ ಕೆಲಸ ಮಾಡಿ : ಜಿಲ್ಲಾಧಿಕಾರಿ


Team Udayavani, Dec 18, 2020, 7:57 PM IST

cb-tdy-1

ಚಿಕ್ಕಬಳ್ಳಾಪುರ: ಗ್ರಾಪಂ ಚುನಾವಣೆಗಳನ್ನು ಲಘುವಾಗಿ ಪರಿಗಣಿಸದೆ ಚುನಾವಣಾ ಆಯೋಗ ನೀಡಿರುವ ನಿರ್ದೇಶನ ಮತ್ತು ಮಾರ್ಗಸೂಚಿಗಳನ್ವಯ ಕಾರ್ಯನಿರ್ವಹಿಸಬೇಕೆಂದು ಜಿಲ್ಲಾಧಿಕಾರಿ ಆರ್‌.ಲತಾ ಸೂಚನೆ ನೀಡಿದರು.

ಶಿಡ್ಲಘಟ್ಟ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಗ್ರಾಪಂ ಚುನಾವಣೆಯ ಮತಗಟ್ಟೆಯ ಪಿಆರ್‌ ಒ-ಎಪಿಆರ್‌ಒಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಗ್ರಾಪಂಚುನಾವಣೆಯನ್ನುಸುಸೂತ್ರವಾಗಿ ನಡೆಸಲು ಆಯೋಗದಿಂದ ಮಾರ್ಗಸೂಚಿ ಮತ್ತು ಆದೇಶಗಳ ಕೈಪಿಡಿಯನ್ನು ಲೋಪದೋಷವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸ ಬೇಕೆಂದು ಸೂಚನೆ ನೀಡಿದರು.

ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪಿಆರ್‌ಒಗಳಾಗಿ ನೇಮಕಗೊಂಡಿರುವುದಕ್ಕೆ ಸ್ಪಷ್ಟಪಡಿಸಿ ಗಂಭೀರಆರೋಗ್ಯ ಸಮಸ್ಯೆ ಇರುವವರಿಗೆ ಪರಿಶೀಲಿಸಿ ಪರ್ಯಾಯ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು. ತಹಶೀಲ್ದಾರ್‌ ಕೆ.ಅರುಂಧತಿ, ಉಪ ತಹಶೀಲ್ದಾರ್‌ ಮಂಜುನಾಥ್‌,ಕ್ಷೇತ್ರ ಶಿಕ್ಷಣಾಧಿಕಾರಿಆರ್‌.ಶ್ರೀನಿವಾಸ್‌, ಚುನಾವಣಾ ಶಾಖೆಯಸಾದಿಕ್‌ಪಾಷ, ತಾಲೂಕು ಸರ್ಕಾರಿ ನೌಕರರಸಂಘದ ಅಧ್ಯಕ್ಷ ಕೆ.ಎನ್‌.ಸುಬ್ಟಾರೆಡ್ಡಿ, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಮುನಿರಾಜು, ತಾಲೂಕು ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬೆ„ರಾರೆಡ್ಡಿ, ತಾಲೂಕು ಎನ್‌.ಪಿ.ಎಸ್‌ನೌಕರರಸಂಘದಅಧ್ಯಕ್ಷಗಜೇಂದ್ರ,ಕಾರ್ಯದರ್ಶಿ ನರಸಿಂಹಮೂರ್ತಿ, ರಾಜಸ್ವ ನಿರೀಕ್ಷಕ ಪ್ರಶಾಂತ್‌ ಮತಗಟ್ಟೆಯ ಪಿಆರ್‌ಒ-ಎಪಿಆರ್‌ಒಗಳು ಉಪಸ್ಥಿತರಿದ್ದರು.

ತಹಶೀಲ್ದಾರ್ ಗ್ರೇಡ್‌-1, ಗ್ರೇಡ್‌-2 ವರ್ಗಾವಣೆ :

ಚಿಕ್ಕಬಳ್ಳಾಪುರ: ಗ್ರಾಮ ಪಂಚಾಯತಿ ಚುನಾವಣಾ ಮಾರ್ಗಸೂಚಿಗಳ ಅನ್ವಯ ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಸರ್ಕಾರ 89 ತಹಶೀಲ್ದಾರ್‌ ಗ್ರೇಡ್‌-1 ಮತ್ತು ಗ್ರೇಡ್‌-2 ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಗ್ರಾಪಂ ಚುನಾವಣೆಹಿನ್ನೆಲೆಯಲ್ಲಿ ತಹಶೀಲ್ದಾರ್‌ ಗ್ರೇಡ್‌-1ಮತ್ತುಗ್ರೇಡ್‌-2ಅವರನ್ನುವರ್ಗಾವಣೆ ಮಾಡಲಾಗಿದ್ದು, ಚುನಾವಣೆ ಪ್ರಕ್ರಿಯೆ ಮುಗಿದ ಬಳಿಕ ಹಿಂದಿನ ಹುದ್ದೆಗೆ ಹಾಜರಾಗತಕ್ಕದು ಎಂದು ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ರಶ್ಮಿ ಎಂ.ಎಸ್‌ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ತಹಶೀಲ್ದಾರ್‌ ಗ್ರೇಡ್‌-1 ಕೆ.ಅರುಂಧತಿ ಅವರನ್ನು ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ತಹಶೀಲ್ದಾರ್‌ ಗ್ರೇಡ್‌-1 ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಜಾಗ ದಲ್ಲಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ತಹಶೀಲ್ದಾರ್‌ ಗ್ರೇಡ್‌ -01 ಅನಂತರಾಮು ಜಿ.ಎಸ್‌ ಅವರನ್ನು ಶಿಡ್ಲಘಟ್ಟ ತಹಶೀಲ್ದಾರ್‌ ಗ್ರೇಡ್‌-01 ಆಗಿ ವರ್ಗಾವಣೆ ಮಾಡಲಾಗಿದೆ.

ಚಿಕ್ಕಬಳ್ಳಾಪುರ ತಾಲೂಕಿನ ತಹ ಶೀಲ್ದಾರ್‌ ಗ್ರೇಡ್‌-02 ತುಳಸಿ ಜಿ.ವಿ ಅವರನ್ನು ತುಮಕೂರು ತಾಲೂಕು ಕಚೇರಿಯ ತಹಶೀಲ್ದಾರ್‌ ಗ್ರೇಡ್‌ 02 ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ದಾವಣಗೆರೆ ಜಿಲ್ಲೆಯ ಗ್ರೇಡ್‌-2 ತಹಶೀಲ್ದಾರ್‌ ದೇವರಾಜು ಕೆ.ಆರ್‌. ಅವರನ್ನು ವರ್ಗಾವಣೆ ಮಾಡಲಾಗಿದೆ. ಜಿಲ್ಲೆಯ ಗುಡಿಬಂಡೆ ತಾಲೂಕಿನ ಗ್ರೇಡ್‌-2 ತಹಶೀಲ್ದಾರ್‌ ಸಿಬತ್ತುಲ್ಲಾ ಅವರನ್ನು ಮಧುಗರಿ ಉಪವಿಭಾಗಾಧಿಕಾರಿಗಳ ಕಚೇರಿಗೆ ವರ್ಗಾವಣೆ ಮಾಡಲಾಗಿದೆ. ಮಧುಗರಿ ಉಪ ವಿಭಾಗಾಧಿ ಕಾರಿಗಳ ಕಚೇರಿಯ ಗ್ರೇಡ್‌-2 ತಹಶೀಲ್ದಾರ್‌ ಡಿ.ಎನ್‌.ವರದರಾಜು ಗುಡಿಬಂಡೆ ತಾಲೂಕಿನ ತಹಶೀಲ್ದಾರ್‌ ಆಗಿ ವರ್ಗಾಯಿಸಲಾಗಿದೆ.

ಟಾಪ್ ನ್ಯೂಸ್

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.