ನೀಲಗಿರಿ ತೆರವುಗೊಳಿಸಿ ಪ್ರವಾಸೋದ್ಯಮಕ್ಕೆ ಅನುವು ಮಾಡಿಕೊಡಿ : ಸಾರ್ವಜನಿಕರ ಒತ್ತಾಯ
ಸರ್ಕಾರದ ಆದೇಶವಿದ್ದರು ತೆರವುಗೊಳ್ಳದ ನೀಲಗಿರಿ
Team Udayavani, Aug 27, 2021, 10:27 AM IST
ಗುಡಿಬಂಡೆ ಪಟ್ಟಣದ ಅಮಾನಿಬೈರಸಾಗರ ಕೆರೆಗೆ ಅಂಟಿಕೊಂಡಿರುವ ಸರ್ಕಾರಿ ಜಾಗದಲ್ಲಿನ ನೀಲಗಿರಿ ಮರಗಳು.
ಗುಡಿಬಂಡೆ : ಪಟ್ಟಣದ ಅಮಾನಿಬೈರಸಾಗರ ಕೆರೆಯ ಸಮೀಪ ಸುಮಾರು ೧೦೦ ಕೂ ಹೆಚ್ಚು ನೀಲಗಿರಿ ಗಿಡಗಳನ್ನು ತೆರವುಗೊಳಿಸಿ ಪ್ರವಾಸೋದ್ಯಮಕ್ಕೆ ಅನುವು ಮಾಡಿಕೊಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಗುಡಿಬಂಡೆ ಪಟ್ಟಣದ ಅಮಾನಿಬೈರಸಾಗರ ಕೆರೆಗೆ ಅಂಟಿಕೊಂಡಂತೆ ಸರ್ಕಾರಿ ಜಾಗದಲ್ಲಿ ಸುಮಾರು ೧ ಎಕರೆ ಪ್ರದೇಶದಲ್ಲಿ ನೀಲಗಿರಿ ಮರಗಳಿದ್ದು, ಸರ್ಕಾರದಲ್ಲಿ ನೀಲಗಿರಿ ಮರಗಳನ್ನು ತೆರವುಗೊಳಿಸುವಂತೆ ಆದೇಶವಿದ್ದರು ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ ತೋರುತ್ತಿದ್ದಾರೆ, ಈ ನೀಲಗಿರಿ ಮರಗಳನ್ನು ತೆರವುಗೊಳಿಸಿದರೆ ವಾಹನ ನಿಲುಗಡೆ ಸ್ಥಳವಕಾಶವಾಗಿ, ಪ್ರವಾಸೋದ್ಯಮ ಅಭಿವೃದ್ಧಿಯಾಗಿ ಸರ್ಕಾರಕ್ಕೆ ಒಂದಷ್ಟು ಅದಾಯ ಬರುವಂತಾಗುತ್ತದೆ, ಎಂದು ಸಿ.ಪಿ.ಐ.ಎಂ.ನ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಹೇಳಿದರು.
ಇದನ್ನೂ ಓದಿ : ಇಂದು ಅಜೇಯ್ ರಾವ್ ಅಭಿನಯದ ‘ಕೃಷ್ಣ ಟಾಕೀಸ್’ ಮರುಬಿಡುಗಡೆ
ಸರ್ಕಾರದ ಆದೇಶದಂತೆ ನೀಲಗಿರಿ ತೆರವು ಇಲ್ಲ: ಪ್ರತಿ ವರ್ಷ ರಾಜ್ಯ ಸರ್ಕಾರ ಸಂಪೂರ್ಣ ನೀಲಗಿರಿ ತೆರವಿಗಾಗಿ ಆದೇಶ ಮಾಡುತ್ತಿದ್ದಾರು ಅಧಿಕಾರಿಗಳು ಮಾತ್ರ, ಆದೇಶವನ್ನು ದಿಕ್ಕರಿಸಿ, ನಮಗೇನು ಎಂಬಂತೆ ಕಣ್ಣು ಮುಚ್ಚಿಕುಳಿತ್ತಿದ್ದಾರೆ.
ಸರ್ಕಾರಕ್ಕೆ ಆದಾಯ: ಅಮಾನಿಬೈರಸಾಗರ ಕೆರೆಗೆ ಅಂಟಿಕೊಂಡಿರುವ ಸರ್ಕಾರಿ ಜಾಗದಲ್ಲಿರುವ ನೀಲಗಿರಿ ಮರಗಳನ್ನು ತೆರವುಗೊಳಿಸಿ, ಸುಮಾರು ೧ ಎಕರೆಗೂ ಹೆಚ್ಚು ಜಾಗದಲ್ಲಿ ಪ್ರವಾಸಿಗರ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸುವುದರಿಂದ ಆ ಪ್ರದೇಶದ ಗ್ರಾಮ ಪಂಚಾಯಿತಿ ಅಥವಾ ಜವಾಬ್ದಾರಿವಹಿಸುವ ಇಲಾಖೆಗೆ ಆದಾಯ ಬರುತ್ತದೆ.
ಪ್ರವಾಸೋದ್ಯಮಕ್ಕೆ ಅನುಕೂಲ: ಪಟ್ಟಣದ ಅಮಾನಿಬೈರಸಾಗರ ಕೆರೆಯ ಸಮೀಪ ವಾಹನಗಳಿಗೆ ಸರಿಯಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವ ಕಾರಣ, ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸಿ, ಕಿರಿ ಕಿರಿಗೆ ಒಳಗಾಗುತ್ತಿದ್ದಾರೆ, ಈ ನೀಲಗಿರಿ ಮರಗಳನ್ನು ತೆರವುಗೊಳಿಸಿದರೆ ಕೆರೆಯ ಸಮೀಪ ಪಾರ್ಕಿಂಗ್ ವ್ಯವಸ್ಥೆಯಾಗಿ ಪ್ರವಾಸೋದ್ಯಮಕ್ಕೆ ಅನುಕೂಲವಾಗಲಿದೆ.
ಇನ್ನಾದರೂ ಅಧಿಕಾರಿಗಳು ಹೆಚ್ಚೆತ್ತುಕೊಂಡು ಸರ್ಕಾರದ ಆದೇಶದಂತೆ ಅಮಾನಿಬೈರಸಾಗರ ಕೆರೆಯ ಬಳಿ ನೀಲಗಿರಿ ಮರಗಳನ್ನು ತೆರವುಗೊಳಿಸಿ, ಪ್ರವಾಸೋದ್ಯಮಕ್ಕೆ ಅನುವು ಮಾಡಿಕೊಡುತ್ತಾರೆಯೇ ಕಾದು ನೋಡಬೇಕಾಗಿದೆ.
ಇದನ್ನೂ ಓದಿ : ಮೈಸೂರು ದರೋಡೆ ಶೂಟೌಟ್ ಪ್ರಕರಣ ಭೇದಿಸಿದ ಪೊಲೀಸರು: ಪುಣೆಯಲ್ಲಿ ಇಬ್ಬರು ಆರೋಪಿಗಳ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Promotion: ಕೊಡಗಿನ ಮಧು ಮೊಣ್ಣಪ್ಪ ಸುಬೇದಾರ್ ಮೇಜರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.