ಅರಣ್ಯೀಕರಣಕ್ಕೆ ನರೇಗಾ ಬಳಸಿಕೊಳ್ಳಿ
Team Udayavani, Jul 19, 2020, 10:23 AM IST
ಚಿಕ್ಕಬಳ್ಳಾಪುರ: ಬರಪೀಡಿತ ಜಿಲ್ಲೆಯಲ್ಲಿ ಉತ್ತಮ ಮಳೆ ಬೆಳೆ ಆಗಬೇಕಾದರೆ ಪರಿಸರ ಸಂರಕ್ಷಣೆ ಜೊತೆಗೆ ಅರಣ್ಯೀಕರಣಕ್ಕೆ ಒತ್ತು ಕೊಡಬೇಕಿರುವುದರಿಂದ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಸಾಮಾಜಿಕ ಅರಣ್ಯೀಕರಣಕ್ಕೆ ಒತ್ತು ಕೊಡುವಂತೆ ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ಸಾಮಾಜಿಕ ಅರಣ್ಯ ಇಲಾಖೆ ವತಿಯಿಂದ ನರೇಗಾ ಯೋಜನೆಯಡಿಯಲ್ಲಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಾಮಾಜಿಕ ಅರಣ್ಯವನ್ನು ಅಭಿವೃದ್ಧಿಪಡಿಸುವ ಸಲುವಾಗಿ ಗಿಡಗಳನ್ನು ನೆಟ್ಟು ಪೋಷಿಸಲು ಕ್ರಮ ವಹಿಸಿರುವಕುರಿತು ಶನಿವಾರ ವಿವಿಧ ಗುಂಡು ತೋಪುಗಳಿಗೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು.
ಪರಿಸರ ಸಂರಕ್ಷಣೆ ಅಗತ್ಯವಾಗಿದ್ದು, ಮಳೆಗಾಲ ಶುರುವಾಗಿರುವುದರಿಂದ ಜಿಲ್ಲೆಯಲ್ಲಿ ಸಾಮಾಜಿಕ ಅರಣ್ಯವನ್ನು ಹೆಚ್ಚಾಗಿ ಬೆಳೆಸಲು ಅಧಿಕಾರಿಗಳು ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಸಾರ್ವಜನಿಕರ ಸಹಭಾಗಿತ್ವದಲ್ಲಿ ಅರಣ್ಯೀಕರಣಕ್ಕೆ ಒತ್ತು ಕೊಡಬೇಕೆಂದು ಸಲಹೆ ನೀಡಿದ ಅವರು, ನರೇಗಾ ಯೋಜನೆಯಡಿ ಸಸಿ ನೆಡಲು ಸಾಕಷ್ಟು ಅವಕಾಶಗಳುಇರುವುದರಿಂದ ಅಧಿಕಾರಿಗಳು ನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕೆಂದರು. ಇದೇ ವೇಳೆ ಜಿಲ್ಲೆಯ ಚಿಕ್ಕಬಳ್ಳಾಪುರ ಹಾಗೂ ಗುಡಿಬಂಡೆ ತಾಲೂಕುಗಳಿಗೆ ಬೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದರು. ಸಾಮಾಜಿಕ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಜೆ.ಶ್ರೀನಾಥ್ ಸೇರಿದಂತೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ಸಿಬ್ಬಂದಿ ಹಾಗೂ ಚಿಕ್ಕಬಳ್ಳಾಪುರ, ಗುಡಿಬಂಡೆ ತಾಲೂಕುಗಳ ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.