ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ
Team Udayavani, Jan 8, 2022, 2:21 PM IST
ಚಿಕ್ಕಬಳ್ಳಾಪುರ: 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವಲ್ಲಿ ಜಿಲ್ಲೆಯು ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನಗಳಿಸಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
ಮಾಧ್ಯಮಗಳಿಗೆ ಮಾಹಿತಿ ನೀಡಿ ಮಾತನಾಡಿದ ಅವರು, ಜ.3ರಿಂದ 15 ರಿಂದ 17 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿಯೂ ಸಮಾರೋಪಾದಿಯಲ್ಲಿ ಕೈಗೆತ್ತಿಕೊಳ್ಳಲಾಗಿತ್ತು. 65,545 ಮಕ್ಕಳ ಪೈಕಿ 39,050 ಮಂದಿಗೆ ಕೊರೊನಾ ಲಸಿಕೆ ನೀಡಿದ್ದು, ಶೇ.60 ಸಾಧನೆ ಮಾಡಿ, ರಾಜ್ಯ ಮಟ್ಟದ ಪಟ್ಟಿಯಲ್ಲಿ ಪ್ರಥಮ ಸ್ಥಾನ ಗಳಿಸಿರುವುದಕ್ಕೆ ಜಿಲ್ಲಾಧಿಕಾರಿ ಹರ್ಷ ವ್ಯಕ್ತಪಡಿಸಿದರು.
ಅಧಿಕಾರಿ, ಸಿಬ್ಬಂದಿಗೆ ಅಭಿನಂದನೆ: ನಗರದ ಜೂನಿಯರ್ ಕಾಲೇಜಿನಲ್ಲಿ ಜ.5ರಂದು ಮಕ್ಕಳಿಗೆ ಲಸಿಕೆ ಹಾಕಿಸುವ ಮೂಲಕ ಮೇಳವನ್ನು ಜಿಲ್ಲಾ ಉಸ್ತುವಾರಿಸಚಿವ ಡಾ.ಕೆ.ಸುಧಾಕರ್ ಉದ್ಘಾಟಿಸಿದರು. ಆರೋಗ್ಯ, ಶಿಕ್ಷಣ ಇಲಾಖೆಯ ಅಧಿ ಕಾರಿಗಳು ವಿಶೇಷ ಆಸಕ್ತಿ ವಹಿಸಿ, ಮಕ್ಕಳು ಓದುವ ಶಾಲಾ ಕಾಲೇಜುಗಳಲ್ಲಿಯೇ ಲಸಿಕಾ ಸತ್ರಗಳನ್ನು ಯಶಸ್ವಿಯಾಗಿ ಆಯೋಜಿಸಿದ್ದರಿಂದರಾಜ್ಯ ಮಟ್ಟದ ಪಟ್ಟಿಯಲ್ಲಿ ಮೊದಲ ಸ್ಥಾನ ಗಳಿಸಲು ಸಾಧ್ಯವಾಗಿದೆ ಎಂದು ಹೇಳಿದರು.
2ನೇ ಡೋಸ್ ಲಸಿಕೆ ಹಾಕಿಸಿ: ಈ ಸಾಧನೆಗೆ ಸಹಕರಿಸಿದ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಿಗೆ ಮತ್ತು ಜಿಲ್ಲಾಡಳಿತದ ಅಧಿಕಾರಿಗಳು, ಸಿಬ್ಬಂದಿಗೆ ಅಭಿನಂದನೆ ತಿಳಿಸಿದ ಡೀಸಿ, ಈ ವಯೋಮಾನದ ಮಕ್ಕಳಿಗೆ ಲಸಿಕೆ ಹಾಕಿಸುವುದರಲ್ಲಿ ಹಾಗೂ ಮೊದಲ ಡೋಸ್ ಲಸಿಕೆ ಪಡೆದು 2ನೇ ಡೋಸ್ ಪಡೆಯಲು ಅರ್ಹರಿರುವ, ಬಾಕಿ ಇರುವ ಜಿಲ್ಲೆಯ ಜನರಿಗೆ ಲಸಿಕೆ ಹಾಕಿ ಶೇ.100 ಪ್ರಗತಿ ಸಾಧಿ ಸಬೇಕು ಎಂದು ವಿವರಿಸಿದರು.
ಈ ಮೂಲಕ ಎರಡೂ ಡೋಸ್‌ಗಳ ಲಸಿಕೆಯನ್ನು ರಾಜ್ಯದಲ್ಲಿಯೇ ಮೊದಲು ಪೂರ್ಣಗೊಳಿಸಿದ ಜಿಲ್ಲೆಯಾಗಿ ಚಿಕ್ಕಬಳ್ಳಾಪುರ ಜಿಲ್ಲೆ ಹೊರಹೊಮ್ಮಬೇಕು.ಆ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸಬೇಕು ಎಂದು ಸೂಚನೆ ನೀಡಿದರು.
ಸಚಿವರಿಂದ ಉತ್ತಮ ಸ್ಪಂದನೆ: ಜಿಲ್ಲೆಯಲ್ಲಿ ಲಸಿಕಾ ಉತ್ಸವ, ಅಭಿಯಾನ, ಮೇಳಗಳಲ್ಲಿ ಚಿಕ್ಕಬಳ್ಳಾಪುರ ಜನರು ಸದಾ ಸ್ಪಂದನಾಶೀಲರು ಎಂಬುದನ್ನು ಈ ಹಿಂದೆ ನಡೆದ ಮೇಳಗಳಲ್ಲಿ ತೋರಿಸಿಕೊಟ್ಟು ರಾಜ್ಯ ಮಟ್ಟದಲ್ಲಿ ಹಲವು ಬಾರಿ ಚಿಕ್ಕಬಳ್ಳಾಪುರ ಜಿಲ್ಲೆ ಪ್ರಥಮ ಸ್ಥಾನ ಗಳಿಸಲು ಕಾರಣಕರ್ತರಾಗಿದ್ದಾರೆ. ಅದೇ ರೀತಿಯಲ್ಲಿ 15ರಿಂದ 18 ರ ವಯೋಮಾನದ ಜಿಲ್ಲೆಯ ಮಕ್ಕಳು ಸ್ಪಂದನಾಶೀಲರೆಂದು ತೋರಿಸಿಕೊಟ್ಟಿದ್ದಾರೆ ಎಂದರು.
ಹಾಗೆಯೇ ಜಿಲ್ಲೆಯ ಸಮಸ್ತ ಜನರು ಮುಂದಿನ ದಿನಗಳಲ್ಲೂ ಸಹಕಾರ ನೀಡಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಕೋವಿಡ್ ನಿಯಂತ್ರಣಾ ಮಾರ್ಗಸೂಚಿ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಕೋವಿಡ್ 3ನೇ ಅಲೆ ಬರದಂತೆ ಸಹಕಾರ ನಿಡಬೇಕೆಂದು ಜಿಲ್ಲಾಧಿಕಾರಿಗಳು ಜನರಲ್ಲಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.