Chikkaballapura; ಪುತ್ರ ವ್ಯಾಮೋಹದಿಂದ ದೇವೇಗೌಡರ ಮೋದಿ ಜಪ: ವೀರಪ್ಪ ಮೊಯ್ಲಿ
Team Udayavani, Jan 23, 2024, 3:22 PM IST
ಚಿಕ್ಕಬಳ್ಳಾಪುರ: ಕುಮಾರಸ್ವಾಮಿರನ್ನು ಕೇಂದ್ರದಲ್ಲಿ ಮಂತ್ರಿ ಮಾಡಬೇಕೆಂಬ ಪುತ್ರ ವ್ಯಾಮೋಹದಿಂದ ದೇವೇಗೌಡರು ಮೋದಿ ಜಪ ಮಾಡುತ್ತಿದ್ದಾರೆಂದು ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಟೀಕಿಸಿದರು.
ಚಿಕ್ಕಬಳ್ಳಾಪುರ ನಗರದಲ್ಲಿ ಮಂಗಳವಾರ ಕಾಂಗ್ರೆಸ್ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ದೇವೇಗೌಡರು ಈ ಹಿಂದೆ ಮೋದಿ ಪ್ರಧಾನಿಯಾದರೆ ದೇಶ ಬಿಟ್ಟು ಹೋಗುವುದಾಗಿ ಹೇಳಿದ್ದರು. ಇದೀಗ ಮೋದಿಯೆ ಮತ್ತೆ ದೇಶದ ಪ್ರಧಾನಿ ಮಂತ್ರಿ ಆಗುತ್ತಾರೆಂದು ಹೇಳುತ್ತಿದ್ದಾರೆ. ಕೇಂದ್ರದಲ್ಲಿ ಕುಮಾರಸ್ವಾಮಿಯವರನ್ನು ಮಂತ್ರಿ ಮಾಡಬೇಕೆಂಬ ವ್ಯಾಮೋಹ ದೇವೇಗೌಡರದು ಎಂದರು.
2024 ರಲ್ಲಿ ಮೋದಿ ಮಾಜಿ ಆಗಲಿದ್ದಾರೆ. ಜನ ಮೋದಿ ವಿರುದ್ಧ ರೋಸಿ ಹೋಗಿದ್ದಾರೆ. ಬೆಲೆ ಏರಿಕೆ, ಭ್ರಷ್ಟಾಚಾರ, ಆನ್ಯಾಯದಿಂದ ಜನ ಮೋದಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು. ಹತಾಶೆಯಿಂದ ರಾಹುಲ್ ಗಾಂಧಿ ನ್ಯಾಯ ಯಾತ್ರೆಯನ್ನು ತಡೆಯುವ ಕೆಲಸವನ್ನು ಮೋದಿ ಮಾಡುತ್ತಿದ್ದಾರೆ ಎಂದರು.
ಪ್ರಧಾನಿ ಮೋದಿ 11 ದಿನ ಕಠಿಣ ವ್ರತಾಚರಣೆ ಬಗ್ಗೆ ಮೋಯ್ಲಿ ಇದೇ ವೇಳೆ ಅನುಮಾನ ವ್ಯಕ್ತಪಡಿಸಿದರು. 11 ದಿನ ಉಪವಾಸ ಮಾಡುವುದು ಕಷ್ಟ. ವ್ರತ ಆಚರಣೆ ಮಾಡಿದ್ದರೆ ಮೋದಿ ಬದುಕುಳಿದಿರುವುದೇ ಪವಾಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್ ನಿಲ್ದಾಣ
Gudibande: ಹೆಸರಿಗಷ್ಟೇ ಬಸ್ ನಿಲ್ದಾಣ; ಬಸ್‌ಗಳೇ ಬರಲ್ಲ
Cyclone Fengal: ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಯ ಶಾಲೆ, ಕಾಲೇಜಿಗೆ ಡಿ.2ರಂದು ರಜೆ
MUST WATCH
ಹೊಸ ಸೇರ್ಪಡೆ
Year ender: ಈ ವರ್ಷ ನಕ್ಕು ನಗಿಸಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದ ವಿಡಿಯೋಗಳಿವು..
Meditation: ವರ್ಧಿತ ಶೈಕ್ಷಣಿಕ ಕಾರ್ಯಕ್ಷಮತೆಗೆ ಧ್ಯಾನ
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
ತೀವ್ರ ಸ್ವರೂಪ ಪಡೆದ ಅತಿಥಿ ಶಿಕ್ಷಕರ ಪ್ರತಿಭಟನೆ; ಶಿಕ್ಷಕ ಅಸ್ವಸ್ಥ, ಆಸ್ಪತ್ರೆಗೆ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.