ಅಧಿಕಾರಕ್ಕಾಗಿ ಕಾಂಗ್ರೆಸ್‌ನಿಂದ ಸುಳ್ಳು ಭರವಸೆ
Team Udayavani, Mar 20, 2023, 4:23 PM IST
ಶಿಡ್ಲಘಟ್ಟ: ಕರ್ನಾಟಕ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಇನ್ನಿಲ್ಲದ ಕಸರತ್ತು ಮಾಡು ತ್ತಿರುವ ಕಾಂಗ್ರೆಸ್ ನಾಯಕರು, ಸುಳ್ಳು ಆಶ್ವಾಸನೆ ನೀಡುವ ಮೂಲಕ ಜನರನ್ನು ದಿಕ್ಕು ತಪ್ಪಿಸುವ ಕೆಲಸ ವನ್ನು ಮಾಡುತ್ತಿದ್ದಾರೆ. ಅದು ಫಲಿಸುವುದಿಲ್ಲ. ಕರ್ನಾಟಕದಲ್ಲಿ ಮತ್ತೂಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು.
ನಗರದ ಸೇವಾ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಮಹಿಳಾ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ ಗೃಹಿಣಿಯರಿಗೆ ಮಾಸಿಕ 2 ಸಾವಿರ ರೂ., ಮತ್ತು ಒಂದು ಮನೆಗೆ 200 ಯೂನಿಟ್ ವಿದ್ಯುತ್ ಹಾಗೂ 10 ಕೆ.ಜಿ. ಅಕ್ಕಿ ನೀಡುವುದಾಗಿ ಸುಳ್ಳು ಆಶ್ವಾಸನೆಗಳನ್ನು ಜನಗಳಿಗೆ ನೀಡಿ ದಿಕ್ಕು ತಪ್ಪಿಸುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಅವರು ನೀಡಿರುವ ಭರವಸೆಗಳು ನಮ್ಮ ರಾಜ್ಯದ ಬಜೆಟ್‌ಗಿಂತಲೂ ದುಪ್ಪಟ್ಟು ಆಗಿದೆ. ಅದು ಅನುಷ್ಠಾನಗೊಳಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ ಅವರು, ಜನಗಳ ಮೇಲೆ ಅವರಿಗೆ ಅಷ್ಟು ಕಾಳಜಿ ಅಥವಾ ವಿಶ್ವಾಸ ಇದ್ದರೆ ಮೊದಲು ಈ ಯೋಜನೆ ಗಳನ್ನು ನಿಮ್ಮದೇ ಸರ್ಕಾರ ಇರುವ ರಾಜಸ್ಥಾನದಲ್ಲಿ ಅನುಷ್ಠಾನಗೊಳಿಸಿ ನಂತರ ಕರ್ನಾಟಕದಲ್ಲಿ ಅನುಷ್ಠಾನಗೊಳಿಸಿ ಎಂದು ಸವಾಲೆಸೆದರು.
ಬಿಜೆಪಿಯಿಂದ ಜನರಿಗೆ ಸಾಮಾಜಿಕ ನ್ಯಾಯ: ಕರ್ನಾಟಕ ರಾಜ್ಯದಲ್ಲಿ 100 ವರ್ಷದಲ್ಲಿ ಯಾವುದೇ ಪಕ್ಷ ಮಾಡದೆ ಇರುವಂತಹ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿದೆ. ಕಾಂಗ್ರೆಸ್ ನಾಯಕರು ಕೇವಲ ಜನಗಳಿಗೆ ಸುಳ್ಳು ಹೇಳಿ ದಿಕ್ಕುತಪ್ಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಆದರೆ, ಭಾರತೀಯ ಜನತಾ ಪಾರ್ಟಿ ನುಡಿದಂತೆ ನಡೆದು ಜನರಿಗೆ ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ಫಲಾನುಭವಿಗಳಿಗೆ ಮನೆ ಹಂಚಿಕೆ: ಕರ್ನಾಟಕದಲ್ಲಿ 1 ಕೋಟಿ 10 ಲಕ್ಷ ಮನೆಗಳಿವೆ. ಸ್ವಾತಂತ್ರ ಬಂದ ನಂತರ ಅಧಿಕಾರ ನಡೆಸಿದ ಕಾಂಗ್ರೆಸ್ ಪಕ್ಷವು ಕೇವಲ 24 ಲಕ್ಷ ಮನೆಗಳಿಗೆ ನಲ್ಲಿ ಸಂಪರ್ಕವನ್ನು ನೀಡಿತ್ತು. ಆದರೆ, ಕರ್ನಾಟಕದಲ್ಲಿ 2019ರ ನಂತರ ರಾಜ್ಯ ಬಿಜೆಪಿ ಸರ್ಕಾರ 40 ಲಕ್ಷ ಮನೆಗಳಿಗೆ ನಲ್ಲಿ ನೀರು ಸಂಪರ್ಕ ಕಲ್ಪಿಸಿದೆ. ಇದು ಬಿಜೆಪಿ ಸರ್ಕಾರದ ಸಾಧನೆ ಎಂದ ಅವರು, ಕರ್ನಾಟಕ ರಾಜ್ಯದಲ್ಲಿ 7.5 ಲಕ್ಷಗಳ ಮನೆಗಳು ನಿರ್ಮಾಣ ಮಾಡುವ ಯೋಜನೆಯೊಂದಿಗೆ ಈಗಾಗಲೇ ಮೂರು ಲಕ್ಷ ಮನೆಗಳ ನಿರ್ಮಾಣ ಮಾಡಿ ವಸತಿಹೀನರ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದರು.
1 ಲಕ್ಷ ರೂ.ವರೆಗೆ ಬಡ್ಡಿರಹಿತ ಸಾಲ: ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸಲು ಮಹಿಳಾ ಸ್ವಸಹಾಯ ಸಂಘಗಳ ಮೂಲಕ ನೀಡುತ್ತಿರುವ ಸಾಲವನ್ನು ನಮ್ಮ ಸರ್ಕಾರ 5 ಲಕ್ಷ ರೂ. ವರೆಗೆ ಏರಿಸಲು ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಮತ್ತೂಮ್ಮೆ ಅಧಿಕಾರಕ್ಕೆ ಬಂದರೆ ಸ್ವಸಹಾಯ ಸಂಘದ ಓರ್ವ ಮಹಿಳೆಗೆ ಒಂದು ಲಕ್ಷ ರೂ.ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯವನ್ನು ನೀಡುವುದಾಗಿ ಭರವಸೆ ನೀಡಿದರು.
ಬಿಜೆಪಿ ತಾಲೂಕು ಮುಖಂಡ ಸೀಕಲ್ ರಾಮಚಂದ್ರಗೌಡ, ಮಾಜಿ ಶಾಸಕ ಎಂ. ರಾಜಣ್ಣ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯದರ್ಶಿ ಪದ್ಮಪ್ರಕಾಶ್, ನಿಶ್ಚಿತ ರೆಡ್ಡಿ, ಜಿಲ್ಲಾಧ್ಯಕ್ಷ ಲೀಲಾವತಿ ಶ್ರೀನಿವಾಸ್, ಪ್ರಧಾನ ಕಾರ್ಯದರ್ಶಿ ನರ್ಮದಾ ರೆಡ್ಡಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಮಲಿಂಗಪ್ಪ, ಮುಖಂಡ ಮುನಿರಾಜು, ಜಿಲ್ಲಾ ಉಪಾಧ್ಯಕ್ಷ ಅರುಣ ಬಾಬು, ಮಿಟ್ಟಹಳ್ಳಿ ಮಂಜು, ಶಿಡ್ಲಘಟ್ಟ ತಾಲೂಕು ಬಿಜೆಪಿ ಮಹಿಳಾ ಮೋರ್ಚಾ ಗ್ರಾಮಾಂತರ ಅಧ್ಯಕ್ಷ ಕಮಲಾ, ನಗರ ಅಧ್ಯಕ್ಷ ತ್ರಿವೇಣಿ, ಶಿಡ್ಲಘಟ್ಟ ಗ್ರಾಮಾಂತರ ಮಂಡಳ ಅಧ್ಯಕ್ಷ ಸುರೇಂದ್ರ ಗೌಡ, ನಗರ ಮಂಡಲ ಅಧ್ಯಕ್ಷ ರಘು, ಭಾಜಪ ಮುಖಂಡ ಆನಂದಗೌಡ ಹಾಗೂ ಮತ್ತಿತರರು ಇದ್ದರು.
ಬಿಜೆಪಿ ಅಧಿಕಾರಕ್ಕೆ ತರಲು ಸಹಕರಿಸಿ: ಭಾರತಿ ಶೆಟ್ಟಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶ ಪ್ರಗತಿಪಥದತ್ತ ಸಾಗುತ್ತಿದೆ. ಪ್ರಧಾನಮಂತ್ರಿಗಳು ಕೇವಲ ಒಂದು ವ್ಯಕ್ತಿಯಲ್ಲ, ಅವರೊಂದು ಶಕ್ತಿ. ಯೋಗಿ ಆಗಿದ್ದಾರೆ. ದೇಶದ ಎಲ್ಲರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಹಿಳೆಯರ ಅಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಹೀಗಾಗಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವನ್ನು ಬೆಂಬಲಿಸಿ ಕರ್ನಾಟಕದಲ್ಲಿ ಮತ್ತು ಕೇಂದ್ರದಲ್ಲಿ ಭಾಜಪ ಸರ್ಕಾರವನ್ನು ಅಧಿಕಾರಕ್ಕೆ ತರಲು ಬೆಂಬಲಿಸಿ ಸಹಕರಿಸಬೇಕು ಎಂದು ವಿಧಾನ ಪರಿಷತ್ತಿನ ಸದಸ್ಯೆ ಭಾರತಿ ಶೆಟ್ಟಿ ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.