ರಸ್ತೆ ಒತ್ತುವರಿ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರ ಒತ್ತಾಯ
Team Udayavani, Dec 11, 2022, 4:35 PM IST
ಬಾಗೇಪಲ್ಲಿ: ತಾಲೂಕಿನ ಪೊಲನಾಯಕ ನಹಳ್ಳಿ ಗ್ರಾಪಂ ವ್ಯಾಪ್ತಿ ಕಾಳಪ್ಪರಾಳ್ಳಪಲ್ಲಿ ಗ್ರಾಮದ ಬಳಿ ಖಾಸಗಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡಿರುವ ಸರ್ಕಾರಿ ಜಮೀನನ್ನು ಕಬಳಿಸಲು ನರೇಗಾ ಯೋಜನೆಯಡಿ ಸರ್ಕಾರಿ ಜಮೀನುನಲ್ಲಿ ನಿರ್ಮಿಸಿರುವ 2 ಲಕ್ಷ ರೂ. ವೆಚ್ಚದ ಮೋರಿ ಮತ್ತು ಕಟ್ಟಡ ಕಾಮಗಾರಿಯನ್ನು ಕಿತ್ತು ಹಾಕಿ ಸರ್ಕಾರಿ ಅಸ್ತಿಗೆ ನಷ್ಟ ಉಂಟು ಮಾಡಿರುವ ಘಟನೆ ನಡೆದಿದ್ದು, ಕ್ರಮಕ್ಕೆ ಆಗ್ರಹಿಸಿದ್ದಾರೆ.
ತಾಲೂಕಿನ ಪೋಲನಾಯಕನಹಳ್ಳಿ ಗ್ರಾಪಂನ ದುಗ್ಗಿನಾಯಕನಹಳ್ಳಿ ಗ್ರಾಮದ ಹೊಸಕೆರೆ ವ್ಯಾಪ್ತಿ ಸರ್ಕಾರಿ ಜಮೀನುನಲ್ಲಿ ಕೆರೆ ಕಾಲವೆಗೆ ಅಡ್ಡಲಾಗಿ 2019-20 ಹಾಗೂ 2020-21ನೇ ಸಾಲಿನಲ್ಲಿ 2 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಕಾಲುವೆ ಅಭಿವೃದ್ಧಿ ಹಾಗೂ ಮೋರಿ ನಿರ್ಮಾಣ ಕಾಮಗಾರಿ ಕೆಲ ದಿನಗಳ ಹಿಂದೆ ಕಿತ್ತು ಹಾಕಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಸಾರ್ವಜನಿಕ ರಸ್ತೆಗೆ ಅಡ್ಡಿಪಡಿಸಲಾಗಿದೆ. ರಸ್ತೆ ಒತ್ತುವರಿ ತೆರವಿನ ಬಗ್ಗೆ 2021 ಸೆ. 22ರಂದು ಬಾಗೇಪಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಕಾಳಪ್ಪರಾಳ್ಳಪಲ್ಲಿ ಗ್ರಾಮಸ್ಥರು ಒತ್ತುವರಿದಾರರ ವಿರುದ್ಧ ದೂರು ಸಲ್ಲಿಸಿದ್ದರು. ಅಧಿಕಾರಿಗಳು ಒತ್ತುವರಿ ತೆರವು ಕ್ರಮಕ್ಕೆ ಸೂಚಿಸಿ ಕೈ ತೊಳೆದುಕೊಂಡಿದ್ದಾರೆ.
ತಾಲೂಕು ಕಚೇರಿ ಅಧಿಕಾರಿಗಳ ಇಚ್ಚಾಶಕ್ತಿ ಕೊರತೆಯಿಂದ ರಸ್ತೆ ಒತ್ತುವರಿ ತೆರವಿಗೆ ಗ್ರಾಮಸ್ಥರು ಸಲ್ಲಿಸಿರುವ ಅರ್ಜಿ ಕಚೇರಿ ಕಡತಗಳಲ್ಲಿ ದೂಳು ಹಿಡಿಯುತ್ತಿದೆ. ಒಂದು ವರ್ಷವಾದರೂ ರಸ್ತೆ ಒತ್ತುವರಿ ಸಮಸ್ಯೆ ಬಗೆಹರಿಯದ ಕಾರಣ 2022ರ ಆ. 20 ರಂದು ಬಾಗೇಪಲ್ಲಿ ತಾಲೂಕಿನ ಜೂಲಪಾಳ್ಯ ಗ್ರಾಮಕ್ಕೆ ನೂತನ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಭೂಮಿಪೂಜೆಗೆ ಆಗಮಿಸಿದ್ದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹಾಗೂ ಶಾಸಕ ಎಸ್.ಎನ್.ಸುಬ್ಟಾರೆಡ್ಡಿಗೆ ಗ್ರಾಮಸ್ಥರು ರಸ್ತೆ ಸಮಸ್ಯೆ ಇತ್ಯರ್ಥಕ್ಕೆ ಮನವಿ ಮಾಡಿದ್ದು, ಒತ್ತುವರಿ ತೆರವುಗೊಳಿ ಸುವಂತೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.