ಗ್ರಾಮ ಪಂಚಾಯ್ತಿ ಕಚೇರಿಗೆ ಬೀಗ ಹಾಕಿ ಆಕ್ರೋಶ
Team Udayavani, Apr 10, 2021, 1:42 PM IST
ಚಿಕ್ಕಬಳ್ಳಾಪುರ: ಜಿಲ್ಲೆಯ ಹೊಸಹುಡ್ಯ ಗ್ರಾಪಂನಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು,ಪಿಡಿಒ ಪ್ರತಿ ಕೆಲಸಕ್ಕೂ ಹಣ ಕೇಳಿ ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಕಚೇರಿಗೆ ಬೀಗ ಹಾಕಿ ಪ್ರತಿಭಟಿಸಿದರು.
ಗ್ರಾಪಂನಲ್ಲಿ ಇ ಖಾತೆ ಮಾಡಲು ಬಡವರು ಸಲ್ಲಿಸಿದ ಅರ್ಜಿಗಳಿಗೆ ಬೆಲೆ ಇಲ್ಲದಂತಾಗಿದೆ. ಬಡಾವಣೆ ಮಾಲಿಕರು ಸಲ್ಲಿಸುವ ಅರ್ಜಿಗಳಿಗೆತ್ವರಿತವಾಗಿ ಸ್ಪಂದಿಸುವ ಅಧಿಕಾರಿಗಳು, ಬಡವರು,ಕೂಲಿಕಾರ್ಮಿಕರು ಇಖಾತೆ ಮಾಡಿಸಿಕೊಳ್ಳಲುಬಂದರೆ 20 ಸಾವಿರ ರೂ.ಗೆ ಲಂಚಕ್ಕೆ ಪೀಡಿಸುತ್ತಿದ್ದಾರೆ. ಇಲಾಖೆಯ ಹಿರಿಯ ಅಧಿಕಾರಿಗಳುತನಿಖೆ ನಡೆಸಿ ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮಜರುಗಿಸಬೇಕೆಂದು ಪ್ರತಿಭಟನಾಕಾರರರು ಒತ್ತಾಯಿಸಿದರು.
ಹಿರಿಯ ಅಧಿಕಾರಿಗಳು ಭಾಗಿ ಆರೋಪ: ಪಿಡಿಒ ಮಂಜುನಾಥ್ ಗ್ರಾಪಂ ಅನ್ನು ಭ್ರಷ್ಟಾಚಾರದ ಕೇಂದ್ರವನ್ನಾಗಿಸಿದ್ದಾರೆ. ಇಲ್ಲಿ ಪ್ರತಿ ಕೆಲಸಕ್ಕೂ ಲಂಚ ನೀಡುವ ಪರಿಸ್ಥಿತಿ ನಿರ್ಮಾ ಣವಾಗಿದೆ. ಇ ಖಾತೆ ಮಾಡಿಕೊಡಲು ಹಿರಿಯ ಅಧಿಕಾರಿಗಳಿಗೆ ಹಣ ನೀಡಬೇಕೆಂದು ನೇರವಾಗಿಹೇಳುತ್ತಾರೆ. ಈ ಲಂಚಾವತಾರದಲ್ಲಿ ಯಾವ ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂಬುದರ ಬಗ್ಗೆ ತನಿಖೆ ನಡೆಸಿ ಬಡವರ ಇ ಖಾತೆಮಾಡಲು ಕ್ರಮ ಕೈಗೊಳ್ಳಬೇಕೆಂದು ಗ್ರಾಪಂಸದಸ್ಯ ಮಂಜುನಾಥ್ ಒತ್ತಾಯಿಸಿದ್ದಾರೆ. ಪಿಡಿಒ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಗ್ರಾಮಸ್ಥರು, ಕೂಡಲೇ ಈ ಅಧಿಕಾರಿಯ ಮೇಲೆ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ವಿಷಯ ತಿಳಿದ ಕೂಡಲೇ ಜಿಪಂ ಯೋಜನಾ ನಿರ್ದೇಶಕ ಗಿರಿಜಾ ಶಂಕರ್, ತಾಪಂ ಇಒಹರ್ಷವರ್ಧನ್ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಸಮಾಲೋಚನೆ ನಡೆಸಿ ಈ ಸಂಬಂಧತನಿಖೆ ನಡೆಸುವುದಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆದುಕೊಂಡರು. ವೆಂಕಟಕೃಷ್ಣಪ್ಪ, ಗಿಡ್ನಹಳ್ಳಿ ಗಂಗಾಧರ್, ಹೊಸಹುಡ್ಯ ನಾರಾಯಣಸ್ವಾಮಿ, ವೆಂಕಟರಾಜು, ನರಸಿಂಹಪ್ಪ, ಗಂಗರಾಜಮ್ಮ, ಜಯಮ್ಮ, ಪ್ರಭಾವತಿ ಮತ್ತಿತರರು ಉಪಸ್ಥಿತರಿದ್ದರು
ಗ್ರಾಪಂ ವ್ಯಾಪ್ತಿಯಲ್ಲಿ ಸಮುದಾಯ ಶೌಚಾಲಯ ನಿರ್ಮಿಸುವ ವಿಚಾರದಲ್ಲಿ ಬಿಲ್ ಮಾಡಿಕೊಟ್ಟರೂ ಹೆಚ್ಚುವರಿಯಾಗಿ ಮಾಡಿಕೊಡಲು ಒತ್ತಾಯಿಸಿ ಗಲಾಟೆ ಮಾಡಿದ್ದಾರೆ. ಆ ಘಟನೆ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಗ್ರಾಮ ಪಂಚಾಯಿತಿಯಲ್ಲಿ ಯಾವ ರೀತಿಯ ಭ್ರಷ್ಟಾಚಾರ ಮಾಡುತ್ತಿಲ್ಲ, ಆರೋಪ ನಿರಾಧಾರ. – ಮಂಜುನಾಥ್, ಪಿಡಿಒ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.