ಚಿಕ್ಕಬಳ್ಳಾಪುರ ಅಭಿವೃದ್ಧಿಗೆ ದಳಕ್ಕೆ ಮತ ನೀಡಿ


Team Udayavani, Feb 6, 2020, 3:00 AM IST

chikkballa

ಚಿಕ್ಕಬಳ್ಳಾಪುರ: ನಗರಸಭೆ ಸಾರ್ವತ್ರಿಕ ಚುಣಾವಣೆಯಲ್ಲಿ ಕಾಂಗ್ರೆಸ್‌, ಬಿಜೆಪಿ ರಾಷ್ಟ್ರೀಯ ಪಕ್ಷಗಳ ಎದುರು ಜೆಡಿಎಸ್‌ ಪಕ್ಷ ಪ್ರಬಲ ಪೈಪೋಟಿಗೆ ಇಳಿದಿದ್ದು, ನಗರಸಭೆಯಲ್ಲಿ ಜೆಡಿಎಸ್‌ 14 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು ಎಲ್ಲದರಲ್ಲೂ ಗೆಲುವು ಸಾಧಿಸಲಿದೆ ಎಂದು ಮಾಜಿ ಶಾಸಕ ಕೆ.ಪಿ. ಬಚ್ಚೇಗೌಡ ಭವಿಷ್ಯ ನುಡಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 31 ಸ್ಥಾನಗಳ ಪೈಕಿ ಕೇವಲ 14 ಕ್ಷೇತ್ರಗಳಲ್ಲಿ ಮಾತ್ರ ಜೆಡಿಎಸ್‌ ಪಕ್ಷ ಅರ್ಹರಾದ ಸೂಕ್ತ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗಿದ್ದು, 14 ಕ್ಷೇತ್ರಗಳಲ್ಲಿ ಜೆಡಿಎಸ್‌ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಸಾಕಷ್ಟು ಅಕ್ರಮಗಳು: ಕಳೆದ ಆರು ವರ್ಷದಲ್ಲಿ ನಗರಸಭೆ ದುರಾಡಳಿತಕ್ಕೆ ಸಾಕ್ಷಿಯಾಗಿದೆ. ಸಾಕಷ್ಟ ಅಕ್ರಮಗಳು ನಡೆದಿವೆ. ನಗರಸಭೆಯಲ್ಲಿ ಏನೇ ಕೆಲಸ ಆಗಬೇಕಾದರೂ ಸಾರ್ವಜನಿಕರಿಂದ ಲಂಚ ಸ್ಪೀಕರಿಸದೇ ಅಧಿಕಾರಿಗಳು ಏನು ಕೆಲಸ ಮಾಡುತ್ತಿರಲಿಲ್ಲ. ಇ-ಖಾತೆಗಳಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ ಎಂದರು.

ಜನರಿಗೆ ತೀವ್ರ ತೊಂದರೆ: ಕಳೆದ ಎರಡು, ಮೂರು ವರ್ಷಗಳ ಹಿಂದೆ ಟೆಂಡರ್‌ ಪ್ರಕ್ರಿಯೆ ಮುಗಿದಿರುವ ಕಾಮಗಾರಿಗಳು ಇನ್ನೂ ಚಾಲನೆಯಲ್ಲಿವೆ. ನಿಗದಿತ ಅವಧಿಯಲ್ಲಿ ಕಾಮಗಾರಿಗಳು ಮುಗಿಯದೇ ಜನ ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ತಿಳಿಸಿದರು.

ಸ್ವತ್ಛ ಆಡಳಿತ ನೀಡುವ ಗುರಿ: ನಗರದ ಜನತೆಗೆ ಸ್ವತ್ಛ ಆಡಳಿತ ನೀಡುವುದು ಜೆಡಿಎಸ್‌ ಗುರಿ. ಭ್ರಷ್ಟಾಚಾರ ರಹಿತವಾಗಿ ಜನರಿಗೆ ಉತ್ತಮ ಕುಡಿಯುವ ನೀರು, ರಸ್ತೆ, ಬೀದಿ ದೀಪಗಳನ್ನು ಒದಗಿಸುವುದು ಜೆಡಿಎಸ್‌ ಆದ್ಯತೆಯಾಗಿದೆ. ಕಳೆದ ಮೂರು ವರ್ಷಗಳಿಂದ ಎಂ.ಜಿ. ರಸ್ತೆ ಕಾಮಗಾರಿ ಆಮೆಗತಿಯಲ್ಲಿ ಸಾಗಿದೆ. ಇಡೀ ರಸ್ತೆಗಳು ಧೂಳುನಿಂದ ಕೂಡಿಸಿದ್ದರೂ ಯಾರು ಹೇಳ್ಳೋರು ಕೇಳ್ಳೋರು ಲ್ಲವಾವಾಗಿದೆ ಎಂದು ಆರೋಪಿಸಿದರು.

ಅರ್ಹರಿಗೆ ಮತ ನೀಡಿ: ಕಳೆದ ಚುನಾವಣೆಯಲ್ಲಿ ಮತದಾರರು ಯಾವುದೇ ಪಕ್ಷಕ್ಕೂ ಸ್ಪಷ್ಟಬಹುಮತ ಕೊಟ್ಟಿಲ್ಲ. ಈ ಬಾರಿ ಮತದಾರರು ಜೆಡಿಎಸ್‌ಗೆ ಹೆಚ್ಚು ಸ್ಥಾನಗಳಲ್ಲಿ ಗೆಲುವು ತಂದುಕೊಡುವ ವಿಶ್ವಾಸ ಇದೆ. ಹಿಂದಿನ ಆಡಳಿತ ಮಂಡಳಿ ಬಗ್ಗೆ ಜನರಲ್ಲಿ ಬೇಸರ ಇದ್ದು, ಜಕ್ಕಲಮಡಗು ಜಲಾಶಯದ ಸಮಸ್ಯೆ ಎದುರಾದಾಗ ಈ ಹಿಂದೆ ಅಲಂಗೂರು ಶ್ರೀನಿವಾಸ್‌ ನಗರಾಭಿವೃದ್ಧಿ ಸಚಿವರಾಗಿದ್ದಾಗ ಸಮಸ್ಯೆ ಬಗೆಹರಿಸಿದರು. ಅದೇ ನಾನು ಶಾಸಕನಾಗಿದ್ದ ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು.

ವಾಣಿಜ್ಯ ಮಳಿಗೆಗಳ ಹಂಚಿಕೆ ಆಗಿದೆ. ನಗರದ ಜನತೆ ಯಾವುದೇ ಆಸೆ, ಅಮಿಷಗಳಿಗೆ ಬಲಿಯಾಗದೇ ತಮ್ಮ ಮತವನ್ನು ಅರ್ಹರಿಗೆ ನೀಡಬೇಕೆಂದು ಮನವಿ ಮಾಡಿದರು. ಜೆಡಿಎಸ್‌ ಕಾರ್ಯಾಧ್ಯಕ್ಷ ಅವುಲುಕೊಂಡರಾಯಪ್ಪ, ಜಿಪಂ ಸದಸ್ಯರಾದ ಕೆ.ಸಿ.ರಾಜಾಕಾಂತ್‌, ಕೆ.ಎಂ.ಮುನೇಗೌಡ, ಮಾಜಿ ನಗರಸಭಾ ಅಧ್ಯಕ್ಷರಾದ ಭಾಸ್ಕರ್‌, ಅಭ್ಯರ್ಥಿಗಳಾದ ಆರ್‌.ಮಟಮಪ್ಪ, ಕಿಸಾನ್‌ ಕೃಷ್ಣಪ್ಪ, ವೀಣಾ, ಹಿರಿಯ ಮುಖಂಡರಾದ ಸಾಧಿಕ್‌, ಅನ್ವರ್‌, ವೆಂಕಟೇಶ್‌ ಇತರರು ಇದ್ದರು.

ಒಳ ಒಪ್ಪಂದ ಇಲ್ಲ, ಬಹಿರಂಗವಾಗಿ ಸೀಟು ಹೊಂದಾಣಿಕೆ: ಕಾಂಗ್ರೆಸ್‌, ಜೆಡಿಎಸ್‌ ಪಕ್ಷಗಳು ನಗರಸಭಾ ಚುನಾವಣೆಯಲ್ಲಿ ಒಳ ಒಪ್ಪಂದ ಮಾಡಿಕೊಂಡಿರುವ ಕುರಿತು ಶಾಸಕ ಡಾ.ಕೆ.ಸುಧಾಕರ್‌ ಟೀಕೆ ಕುರಿತು ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯೆ ನೀಡಿದ ಕೆ.ಪಿ.ಬಚ್ಚೇಗೌಡ, ಒಳ ಒಪ್ಪಂದವೇನು ಇಲ್ಲ. ಎಲ್ಲರಿಗೂ ಗೊತ್ತಿರುವ ವಿಚಾರ.

ನಮ್ಮ ಪಕ್ಷ ಜಾತ್ಯತೀತ ಪಕ್ಷ. ನಾವು 14 ಕಡೆ ಮಾತ್ರ ಸ್ಪರ್ಧಿಸಿದ್ದೇವೆ. ಉಳಿದ ಕಡೆ ಕಾಂಗ್ರೆಸ್‌ ಮತ ಕೊಡಿ ಎಂದು ನಾವೇ ಹೇಳುತ್ತಿದ್ದೇವೆ. ಬಹಳಷ್ಟು ವಾರ್ಡ್‌ಗಳಲ್ಲಿ ಅವರು ನಮಗೆ ಸಹಾಯ ಮಾಡುತ್ತಿದ್ದಾರೆ. ನಾವು ಅವರಿಗೆ ಕೆಲವು ವಾರ್ಡ್‌ಗಳನ್ನು ಬಿಟ್ಟುಕೊಂಡಿದ್ದೇವೆ. ಇದು ಒಳ್ಳ ಒಪ್ಪಂದ ಅಲ್ಲ. ಇದು ಬಹಿರಂಗ ವಿಚಾರ ಎಂದರು.

ಟಾಪ್ ನ್ಯೂಸ್

kolahara-TV

By Election: ಮೂರೂ ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

kolahara-TV

By Election: ಮೂರೂ ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

7

Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Udupi: ಕಾರು ಡಿಕ್ಕಿ ಹೊಡೆದು ಸ್ಕೂಟರ್ ಸವಾರನಿಗೆ ಗಾಯ… ಕಾರು ಚಾಲಕ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.