ಮತದಾರರ ಪಟ್ಟಿ ಪರಿಷ್ಕರಣೆ ಅತ್ಯವಶ್ಯಕ
Team Udayavani, Sep 2, 2019, 3:00 AM IST
ಚಿಕ್ಕಬಳ್ಳಾಪುರ: ದೇಶದ ಪೌರತ್ವ ಸಾಭೀತುಪಡಿಸಲು ಚುನಾವಣಾ ಆಯೋಗ ನೀಡುವ ಗುರುತಿನ ಚೀಟಿ ನಾಗರಿಕರಿಗೆ ಅಮೂಲ್ಯವಾದದ್ದು. ಇರುವ ಕಡೆಯೇ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಗೊಳಿಸಿಕೊಳ್ಳುವ ಮೂಲಕ ಸರ್ಕಾರದ ಶಿಕ್ಷಣ, ವಸತಿ, ಅರೋಗ್ಯ ಮತ್ತಿತರ ಮೂಲಭೂತ ಸೌಲಭ್ಯಗಳನ್ನು ಪಡೆದುಕೊಳ್ಳಬೇಕೆಂದು ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶ ಎಸ್.ಎಚ್.ಕೋರಡ್ಡಿ ತಿಳಿಸಿದರು.
ನಗರದ ತಾಲೂಕು ಕಚೇರಿ ಆವರಣದಲ್ಲಿ ಭಾನುವಾರ ರಾಜ್ಯ ಚುನಾವಣಾ ಆಯೋಗ, ಜಿಲ್ಲಾಡಳಿತ ಹಾಗೂ ಜಿಪಂ ಮತ್ತು ಜಿಲ್ಲಾ ಸ್ವೀಪ್ ಸಮಿತಿಯಿಂದ ಆಯೋಜಿಸಲಾಗಿದ್ದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರು ಮತದಾನದಲ್ಲಿ ಪಾಲ್ಗೊಂಡಾಗ ಮಾತ್ರ ಪ್ರಜಾಪ್ರಭುತ್ವ ಯಶಸ್ವಿಗೊಳ್ಳುತ್ತದೆ ಎಂದರು. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಸರ್ವರಿಗೂ ಅನುಕೂಲಕರವಾದ ಪ್ರಭುತ್ವವನ್ನು ನಿರ್ಮಾಣ ಮಾಡುವ ಹಕ್ಕು ಇರುವುದರಿಂದ ಮತದಾರರು ತಮ್ಮ ಮತ ಪಟ್ಟಿಯನ್ನು ಪರಿಷ್ಕರಿಸಿಕೊಳ್ಳವುದು ಅತ್ಯವಶ್ಯಕವಾಗಿದೆ.
ಅ.15 ರವರೆಗೆ ಸಮಗ್ರ ಮತದಾರರ ಪಟ್ಟಿ: ಜಿಲ್ಲಾದ್ಯಂತ ಮತದಾರರ ಪಟ್ಟಿಯಲ್ಲಿ 18 ವರ್ಷ ಮೇಲ್ಪಟ್ಟವರನ್ನು ನೂತನವಾಗಿ ಸೇರ್ಪಡೆ ಮಾಡುವುದು, ಮರಣ ಹೊಂದಿದವರ ಹೆಸರನ್ನು ಪಟ್ಟಿಯಿಂದ ತೆಗೆದು ಹಾಕುವುದು ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು, ವಿಳಾಸ, ಭಾವಚಿತ್ರ, ವಯಸ್ಸು ಮುಂತಾದ ತಪ್ಪುಗಳನ್ನು ತಿದ್ದುಪಡಿ ಮಾಡಿ ಮತದಾರರ ವಿವರಗಳನ್ನು ಸರಿಪಡಿಸುವುದಕ್ಕೆ ಸೆ.01 ರಿಂದ ಅ.15 ರವರೆಗೆ ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯನ್ನು ನಡೆಸಲಾಗುತ್ತ ಎಂದರು.
6 ತಾಲೂಕಲ್ಲಿ ಪರಿಷ್ಕರಣೆ: ಮತದಾರರ ಪಟ್ಟಿ ಪರಿಷ್ಕರಣೆಯಿಂದ ಒಬ್ಬ ವ್ಯಕ್ತಿಯು ಎಲ್ಲಿ ನೆಲೆಸಿರುತ್ತಾನೋ ಅಲ್ಲಿಯೇ ಮತವನ್ನು ಚಲಾಯಿಸಬಹುದು. ಮತದಾರರ ಪಟ್ಟಿ ಪರಿಷ್ಕರಣಾ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ, ಸಾರ್ವಜನಿಕರ ಮತ ಪಟ್ಟಿಯಲ್ಲಿ ಯಾವುದೇ ತಿದ್ದಪಡಿ, ಸೇರ್ಪಡೆ, ಸಮಸ್ಯೆಗಳಿದ್ದರೂ ಬಗೆಹರಿಸಿ ದಾಖಲಾತಿಗಳನ್ನು ಪಡೆಯಬಹುದಾಗಿದೆ. ಜಿಲ್ಲೆಯ 6 ತಾಲೂಕುಗಳಲ್ಲೂ ಬಾಪು ಸೇವಾ ಕೇಂದ್ರಗಳು, ಅಟಲ್‌ಜೀ ಜನಸ್ನೇಹಿ ಕೇಂದ್ರಗಳಲ್ಲಿ ಪರಿಷ್ಕರಣೆ ಮಾಡಲಾಗುತ್ತದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಆರ್.ಲತಾ, ಮತದಾನದ ಗುರುತಿನ ಚೀಟಿಯಲ್ಲಿ ತಮ್ಮ ಹೆಸರು, ವಿಳಾಸ, ಭಾವಚಿತ್ರ, ವಯಸ್ಸು ಸರಿಯಾಗಿದೆಯೇ ಎಂದು ಮೊದಲೇ ಅರಿತುಕೊಂಡು ಮತದಾನ ಮಾಡುವುದು ಉತ್ತಮ. ಇದಕ್ಕೆ ಚುನಾವಣಾ ಆಯೋಗವು ಈ ವರ್ಷ ಮತದಾರರ ಪಟ್ಟಿಯನ್ನು ಚುನಾವಣೆಗಿಂತ ಮೊದಲೇ ಪರಿಷ್ಕರಿಸುವ ನಿಟ್ಟಿನಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮವು ಮಹತ್ವದಾಗಿದೆ ಎಂದರು.
ವಿಶೇಷ ಆ್ಯಪ್: ಜಿಪಂ ಸಿಇಒ ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಮತದಾನ ಕೇವಲ ಹಕ್ಕು ಮಾತ್ರವಲ್ಲ ಅದು ಕರ್ತವ್ಯ ಕೂಡ ಆಗಿದೆ. 18 ವರ್ಷ ಪೂರೈಸಿದ ಪ್ರತಿಯೊಬ್ಬರು ಸ್ವಇಚ್ಛೆಯಿಂದ ಮತ ಚಲಾಯಿಸುವ ಹಕ್ಕು ಪ್ರತಿಯೊಬ್ಬರಿಗೂ ಸಂವಿಧಾನ ನೀಡಿದೆ. ಆದ್ದರಿಂದ ಮತದಾರರ ಪಟ್ಟಿ ಪರಿಷ್ಕರಣೆ ಪ್ರತಿ ವರ್ಷ ಚುನಾವಣಾ ಆಯೋಗ ಹಮ್ಮಿಕೊಳ್ಳುತ್ತಿದ್ದು, ಈ ವರ್ಷ ವಿಶೇಷ ಆ್ಯಪ್ ಸಹ ಬಿಡುಗಡೆಗೊಳಿಸಿ ಮತದಾರರೇ ತಮ್ಮ ಹೆಸರು, ವಿಳಾಸ ಬದಲಾವಣೆಗೆ ಅವಕಾಶ ಮಾಡಿಕೊಟ್ಟಿದೆ. ಈ ಕಾರ್ಯಕ್ರಮವನ್ನು ಜಿಲ್ಲಾದ್ಯಂತ ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಆರತಿ, ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ, ಜಿಲ್ಲಾ ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕರಾದ ರೇಣುಕಾ, ತಹಶೀಲ್ದಾರ್ ಕೆ.ನರಸಿಂಹಮೂರ್ತಿ, ಚಿಕ್ಕಬಳ್ಳಾಪುರ ತಾಪಂ ಇಒ ಹರ್ಷವರ್ಧನ್, ನಗರಸಭೆ ಪೌರಯುಕ್ತ ಉಮಾಕಾಂತ್ ಸೇರಿದಂತೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಅಧಿಕಾರಿಗಳು ಉಪಸ್ಥಿತರಿದ್ದರು.
ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಜನಜಾಗೃತಿ: ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಜಿಲ್ಲಾದ್ಯಂತ ಚುನಾವಣಾ ಆಯೋಗದ ನಿರ್ದೇಶನದಂತೆ ಸೆ.1ರಿಂದ ಅ.15 ರ ವರೆಗೂ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದ ಹೋಬಳಿ ಕೇಂದ್ರ, ಗ್ರಾಪಂ, ಮತಗಟ್ಟೆ ಕೇಂದ್ರಗಳಲ್ಲಿ ವಿಶೇಷವಾಗಿ ನಡೆಯಲಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜಿಲ್ಲಾ ಕೇಂದ್ರದ ಮುಖ್ಯ ರಸ್ತೆಗಳಲ್ಲಿ ಜನ ಜಾಗೃತಿ ಜಾಥಾ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.