ಗಾಳಿಪಟ ಉತ್ಸವದ ಮೂಲಕ ಮತದಾನ ಜಾಗೃತಿ
Team Udayavani, Apr 17, 2019, 3:00 AM IST
ಚಿಕ್ಕಬಳ್ಳಾಪುರ: ಜಿಲ್ಲಾ ಕೇಂದ್ರದ ಸರ್‌ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಮಂಗಳವಾರ ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆ ಪ್ರಯುಕ್ತ ಮತದಾನ ಜಾಗೃತಿಗಾಗಿ ಆಯೋಜಿಸಿದ್ದ ಗಾಳಿಪಟ ಉತ್ಸವ ಎಲ್ಲರ ಗಮನ ಸೆಳೆಯಿತು.
ಮಹಿಳೆಯರಿಗೆ ರಂಗೋಲಿ, ಯುವಕರಿಗೆ ಮ್ಯಾರಥಾನ್, ಕ್ರೀಡಾಪಟುಗಳಿಗೆ ವಾಲಿಬಾಲ್, ಹಾಸ್ಟಲ್ ವಿದ್ಯಾರ್ಥಿಗಳಿಂದ ಪೋಷಕರಿಗೆ ಅಂಚೆ ಪತ್ರ ಅಭಿಯಾನ, ಮಾನವ ಸರಪಳಿ, ಮೇಣದ ಬತ್ತಿ ಮೆರವಣಿಗೆಗಳ ಮೂಲಕ ಯುವ ಮತದಾರರ ಗಮನ ಸೆಳೆದಿದ್ದ ಜಿಲ್ಲಾ ಸ್ಪೀಪ್ ಸಮಿತಿ ಸರ್‌ಎಂವಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಗಾಳಿಪಟ ಉತ್ಸವಕ್ಕೂ ನಿರೀಕ್ಷೆಗೂ ಮೀರಿ ಸ್ಪಂದನೆ ಸಿಕ್ಕಿತ್ತು.
ಸಿಇಒ ಚಾಲನೆ: ಸರ್‌ಎಂವಿ ಕ್ರೀಡಾಂಗಣದಲ್ಲಿ ಮದ್ಯಾಹ್ನ ಆಯೋಜಿಸಿದ್ದ ಗಾಳಿಪಟ ಉತ್ಸವಕ್ಕೆ ಖುದ್ದು ಜಿಲ್ಲಾ ಸ್ಪೀಪ್ ಸಮಿತಿ ಅಧ್ಯಕ್ಷರಾದ ಜಿಪಂ ಸಿಇಒ ಗುರುದತ್ತ ಹೆಗಡೆ ಚಾಲನೆ ನೀಡಿದರು. ನಗರದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಗಾಳಿಪಟವನ್ನು ಹಾರಿ ಬಿಡುವ ಮೂಲಕ ಎತ್ತರಕ್ಕೆ ಹಾರಿಸಲು ಪೈಪೋಟಿ ನಡೆಸಿದರು.
ಬಣ್ಣ ಬಣ್ಣದ ಗಾಳಿಪಟಗಳು ಗಾಳಿಯಲ್ಲಿ ತೇಲಾಡಿ ಹಾರಾಡಿದವು. ಕ್ರೀಡಾಂಗಣದಲ್ಲಿ ನೆರದಿದ್ದ ಗಾಳಿಪಟ ಪ್ರೇಮಿಗಳು ಆಗಸದಲ್ಲಿ ಹಾರಡುತ್ತಿದ್ದ ಗಾಳಿಪಟಗಳನ್ನು ನೋಡಿ ಕಣ್ತುಂಬಿಸಿಕೊಂಡರು. ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ಯುವಕರು, ಕಾಲೇಜು ವಿದ್ಯಾರ್ಥಿಗಳು ಗಾಳಿಪಟ ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಪ್ರತಿಜ್ಞಾ ವಿಧಿ ಬೋಧನೆ: ನೈತಿಕ ಹಾಗೂ ಕಡ್ಡಾಯ ಮತದಾನ ಮಾಡುವಂತೆ ಪ್ರತಿಜ್ಞಾ ವಿಧಿ ಬೋಧಿಸಿದ ಜಿಪಂ ಸಿಇಒ ಗುರುದತ್ ಹೆಗಡೆ, ಮತದಾರರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ನೈಜ್ಯವಾಗಿ ಮತದಾನ ಮಾಡಬೇಕು ಎಂದರು.
ತಾಪಂ ಕಾರ್ಯನಿರ್ವಹಣಾಧಿಕಾರಿ ಸಂಜೀವಪ್ಪ, ಜಿಲ್ಲಾ ಸ್ವೀಪ್ ಸಮಿತಿ ಸದಸ್ಯರಾದ ರವಿಕುಮಾರ್. ಮುನಿರಾಜು, ಸತೀಶ್ ಕುಮಾರ್, ಜಿಲ್ಲಾ ಯುವಜನ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರುದ್ರಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಗಮನ ಸೆಳೆದ ಮುಖವೀಣೆ ನೀನಾದ: ಜಿಲ್ಲಾ ಸ್ಪೀಪ್ ಸಮಿತರಿ ಮತದಾನ ಜಾಗೃತಿಗಾಗಿ ಆಯೋಜಿಸಿದ್ದ ಗಾಳಿಪಟ ಉತ್ಸವ ನೋಡಲು ಒಂದಡೆ ರೋಮಾಂಚನವಾದರೆ ಮತ್ತೂಂದಡೆ ಸಂಗೀತ ಪ್ರಿಯರಿಗೆ ಜಿಲ್ಲೆಯ ಗುಡಿಬಂಡೆ ತಾಲೂಕಿನ ಖ್ಯಾತ ಮುಖವೀಣೆ ಗಾಯಕ ಆಂಜಿನಪ್ಪ ತನ್ನ ವೈಶಿಷ್ಟವಾದ ತನ್ನ ಮುಖವೀಣೆಯನ್ನು ನುಡಿಸುವ ಮೂಲಕ ಎಲ್ಲರು ತಲೆದೂಗುವಂತೆ ಮಾಡಿದರು. ಚುನಾವಣೆಯ ನೆಪದಲ್ಲಿ ಆದರೂ ಜಿಲ್ಲಾಡಳಿತ ಬಡ ಕಲಾವಿದನನ್ನು ಗುರುತಿಸಿದ್ದು ಮಾತ್ರ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MP ಡಾ. ಸುಧಾಕರ್ ವಿರುದ್ಧ ಏನೂ ಮಾತನಾಡಲ್ಲ: ಪ್ರದೀಪ್
Crime: ಸತ್ತಂತೆ ನಟಿಸಿ ಗುಂಡಿಯಿಂದ ಬದುಕಿ ಬಂದ ಬೆಂಗಳೂರಿನ ಯೋಗ ಶಿಕ್ಷಕಿ!
Chintamani: ಹಳ್ಳಕ್ಕೆ ಬಿದ್ದು ಓಮ್ನಿ ಕಾರು ಸ್ಫೋಟ; ಒಬ್ಬ ಮೃತ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.