ವಿವಿಪ್ಯಾಟ್‌ ಸಾಧನ ನಿರ್ವಹಣೆ ಅಸಾಧ್ಯ

Team Udayavani, Mar 15, 2019, 7:26 AM IST

network.jpg

ಚಿಕ್ಕಬಳ್ಳಾಪುರ: ಯಾವುದೇ ನೆಟ್‌ವರ್ಕ್‌ ಬಳಸಿ ವಿವಿಪ್ಯಾಟ್‌ ಸಾಧನ ನಿರ್ವಹಣೆ ಸಾಧ್ಯವಾಗುವುದಿಲ್ಲ. ಇದು ಸ್ವತಂತ್ರವಾಗಿ ಕೆಲಸ ನಿರ್ವಹಿಸಲಿದೆ. ಮತದಾರರು, ತಮ್ಮ ಆಯ್ಕೆಯ ಅಭ್ಯರ್ಥಿಗೆ ಮತದಾನ ಮಾಡಿ ಅದನ್ನು ಖಚಿತಪಡಿಸಿಕೊಳ್ಳಬಹುದಾಗಿದ್ದು, ಇವಿಎಂ ಹಾಗೂ ವಿವಿಪ್ಯಾಟ್‌ ಯಂತ್ರಗಳ ಬಗ್ಗೆ ಸಾರ್ವಜನಿಕರು ಆತಂಕ ಅಥವಾ ಅನುಮಾನಪಡಬೇಕಾಗಿಲ್ಲ ಎಂದು ಚಿಕ್ಕಬಳ್ಳಾಪುರ ಉಪ ವಿಭಾಗಾಧಿಕಾರಿ ಬಿ.ಶಿವಸ್ವಾಮಿ ತಿಳಿಸಿದರು.

 ನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ದೃಶ್ಯ ಹಾಗೂ ಮುದ್ರಣ ಮಾಧ್ಯಮದ ಪತ್ರಕರ್ತರೊಂದಿಗೆ ಹಮ್ಮಿಕೊಂಡಿದ್ದ ಇವಿಎಂ ಹಾಗೂ ವಿವಿಪ್ಯಾಟ್‌ ಕುರಿತಾದ ಸಂವಾದ ಹಾಗೂ ಪ್ರಾತ್ಯಕ್ಷಿತೆ  ಉದ್ದೇಶಿಸಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆಯಿಂದ ಈಚೆಗೆ ರಾಜ್ಯದಲ್ಲಿ ವಿವಿಪ್ಯಾಟ್‌ ಬಳಸಲಾಗುತ್ತಿದ್ದು, ಮತದಾರರು ತಾವು ಚಲಾಯಿಸಿದ ಅಭ್ಯರ್ಥಿಗೆ ಮತ ಬಿದ್ದಿರುವುದನ್ನು ವಿವಿಪ್ಯಾಟ್‌ ಖಚಿತಪಡಿಸಲಿದೆ ಎಂದರು. 

ದೇಶದ್ಯಾಂತ ವಿವಿಪ್ಯಾಟ್‌ ಬಳಕೆಗೆ ಉತ್ತಮ ಪ್ರತಿಕ್ರಿಯೆ ಇದ್ದು ಮತದಾರರು, ರಾಜಕೀಯ ಪಕ್ಷಗಳು ಮುಖಂಡರು ಸೇರಿದಂತೆ ಅನುಮಾನ ಪಡುವ ಅಗತ್ಯವಿಲ್ಲ. ಚುನಾವಣೆಯನ್ನು ಜಿಲ್ಲಾಡಳಿತ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ನಡೆಸಲಿದೆ. ಜಿಲ್ಲಾದ್ಯಂತ ಇವಿಎಂ ಹಾಗೂ ವಿವಿಪ್ಯಾಟ್‌ ಬಳಕೆ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದರು.

ಮೂರು ವಿದ್ಯುನ್ಮಾನ ಯಂತ್ರ: ಪ್ರತಿ ಮತಗಟ್ಟೆಯಲ್ಲಿ ಮತದಾನಕ್ಕಾಗಿ ಮೂರು ವಿದ್ಯುನ್ಮಾನ ಯಂತ್ರಗಳನ್ನು ಬಳಸಲಾಗುತ್ತದೆ. ಕಂಟ್ರೋಲ್‌ ಯುನಿಟ್‌, ಬ್ಯಾಲೆಟ್‌ ಯುನಿಟ್‌ ಮತ್ತು ವಿವಿಪ್ಯಾಟ್‌ ಬಳಸಲಾಗುತ್ತದೆ. ಕಂಟ್ರೋಲ್‌ ಯುನಿಟ್‌ನಲ್ಲಿ ನಾಲ್ಕು ಭಾಗಗಳಿದ್ದು, ಡಿಸ್‌ಪ್ಲೇ ಸೆಕ್ಷನ್‌, ಬ್ಯಾಟರಿ ಸೆಕ್ಷನ್‌, ರಿಸಲ್ಟ್ ಸೆಕ್ಷನ್‌ ಮತ್ತು ಬ್ಯಾಲೆಟ್‌ ಸೆಕ್ಷನ್‌ ಎಂದು ಇರುತ್ತದೆ. ಕಂಟ್ರೋಲ್‌ ಯುನಿಟ್‌ಗೆ ಬ್ಯಾಲೆಟ್‌ ಯುನಿಟ್‌ ಮತ್ತು ವಿವಿಪ್ಯಾಟ್‌ನ್ನು ಅಳವಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು. 

7 ಸೆಕೆಂಡ್‌ ಪ್ರದರ್ಶನ: ವಿವಿಪ್ಯಾಟ್‌ ವಿದ್ಯುನ್ಮಾನ ಮತಯಂತ್ರಕ್ಕೆ ಜೋಡಿಸಿರುವ ಪ್ರಿಂಟರ್‌ನಂತೆ ಕಾರ್ಯ ನಿರ್ವಹಿಸುವ ಯಂತ್ರವಾಗಿದೆ. ಮತದಾರರು ಮತದಾನದ ವೇಳೆ ತಾವು ಯಾವ ಅಭ್ಯರ್ಥಿಗೆ ಅಥವಾ ಚಿಹ್ನೆಯ ಪರವಾಗಿ ಮತ ಚಲಾಯಿಸಿದ್ದಾರೆ ಎಂಬುದನ್ನು ಈ ಸಾಧನ ಮೂಲಕ ಖಚಿತಪಡಿಸಿಕೊಳ್ಳಬಹುದಾಗಿದೆ. 

ಮತದಾರರು ಇವಿಎಂನಲ್ಲಿರುವ ಮತದಾನದ ಬಟನ್‌ ಒತ್ತಿದ ತಕ್ಷಣ ವಿವಿಪ್ಯಾಟ್‌ಗೆ ಇದರ ಸಂದೇಶ ರವಾನೆಯಾಗಿ ಸ್ವಯಂ ಚಾಲಿತವಾಗಿ ಮತದಾನ ಮಾಡಿದ ಚಿಹ್ನೆಯ ಮತ್ತಿತರೆ ವಿವರವುಳ್ಳ ಪೇಪರ್‌ ಚೀಟಿಯೊಂದು ಮುದ್ರಿತವಾಗಿ ಪ್ರದರ್ಶನಗೊಳ್ಳುತ್ತದೆ. ಈ ಚೀಟಿ 7 ಸೆಕೆಂಡ್‌ಗಳ ಕಾಲ ಮತದಾರರಿಗೆ ಕಾಣಿಸಿಕೊಂಡ ಬಳಿಕ ತುಂಡಾಗಿ ವಿವಿಪ್ಯಾಟ್‌ನಲ್ಲಿ ಸೀಲ್‌ ಮಾಡಿರುವ ಬಾಕ್ಸ್‌ನಲ್ಲಿ ಬೀಳುತ್ತದೆ ಎಂದರು.

ತರಬೇತಿ ಕಾರ್ಯಕ್ರಮದಲ್ಲಿ ಜಿಲ್ಲಾ ಉದ್ಯೋಗಾಧಿಕಾರಿ ಪ್ರಸಾದ್‌, ಜಿಲ್ಲಾ ಜವಳಿ ಮತ್ತು ಕೈ ಮಗ್ಗ ಇಲಾಖೆ ಉಪ ನಿರ್ದೇಶಕರಾದ ಶಿವಕುಮಾರ್‌ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಚುನಾವಣಾ ಶಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.