ಪರಿಸರ ಸಂರಕ್ಷಣೆ ನಿರ್ಲಕ್ಷಿಸಿದರೆ ಜಲಮೂಲ ನಾಶ
Team Udayavani, Jun 16, 2019, 3:00 AM IST
ಚಿಕ್ಕಬಳ್ಳಾಪುರ: ತೀವ್ರ ಬರಗಾಲಕ್ಕೆ ತುತ್ತಾಗಿರುವ ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆಯನ್ನು ಸಮಾರೋಪಾದಿಯಲ್ಲಿ ಕೈಗೊಳ್ಳದಿದ್ದರೆ ಭವಿಷ್ಯದ ದಿನಗಳಲ್ಲಿ ಇರುವ ಜಲಮೂಲಗಳು ಬರಿದಾಗಲಿವೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್.ಹೆಚ್.ಶಿವಶಂಕರ ರೆಡ್ಡಿ ಎಚ್ಚರಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ವತಿಯಿಂದ ಆಯೋಜಿಸಲಾಗಿದ್ದ ಜಲಾಮೃತ ಹಾಗೂ ಸ್ವಚ್ಛ ಮೇವ ಜಯತೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಈ ವರ್ಷವನ್ನು ರಾಜ್ಯ ಸರ್ಕಾರ ಜಲ ವರ್ಷ ಎಂದು ಘೋಷಣೆ ಮಾಡಿ ಜಲಮೂಲಗಳನ್ನು ಸಂರಕ್ಷಣೆ ಮಾಡಿ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.
ಹವಾಮಾನ ವೈಪರೀತ್ಯದಿಂದ ಜಿಲ್ಲೆ ಬರ ಹಾಗೂ ಕುಡಿಯುವ ನೀರಿಗೂ ಸಮಸ್ಯೆ ಎದುರಿಸಲಾಗುತ್ತಿದೆ. ಎಷ್ಟೇ ಕೊಳವೆ ಬಾವಿ ಕೊರೆದರೂ ನೀರು ಸಿಗುತ್ತಿಲ್ಲ. ಇದಕ್ಕೆ ನಮ್ಮಲ್ಲಿ ಗಿಡ, ಮರಗಳು ನಾಶವೇ ಕಾರಣವಾಗಿದೆ. ಪರಿಸರ, ನದಿ ಹಾಗೂ ಕೆರೆ ಮೂಲಗಳನ್ನು ಒತ್ತುವರಿ ಮಾಡಿಕೊಂಡು ಹಾಳು ಮಾಡಿದ್ದೇವೆ.
ಸಂರಕ್ಷಣೆ ಅಗತ್ಯ: ಕೆರೆಗೆ ಬರುವ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿದ್ದೇವೆ. ಕೆರೆಗಳಲ್ಲಿ ಉಳುಮೆ ಮಾಡುವ ಪರಿಸ್ಥಿತಿ ಕಾಣುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. ಜಲಮೂಲಗಳು ಕಾಣೆಯಾಗುತ್ತಿರುವುದರಿಂದ ಕಷ್ಟದ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಪರಿಸರ ಸಂರಕ್ಷಣೆ ಮಾಡದಿದ್ದರೆ ನಮ್ಮ ಜಲಮೂಲಗಳು ಬರಿದಾಗಲಿವೆ ಎಂದರು. ಮಳೆ ನೀರನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಇದಕ್ಕಾಗಿ ಮಳೆ ಕೊಯ್ಲಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಸಹಕಾರ ಮುಖ್ಯ: ಜಿಲ್ಲೆಯಲ್ಲಿ 1 ಕೋಟಿ ಸಸಿ ನೆಡುವ ಗುರಿ ಹೊಂದಲಾಗಿದ್ದು, ಸದ್ಯಕ್ಕೆ 50 ಲಕ್ಷ ಸಸಿ ಸಿದ್ಧವಾಗಿದೆ. ಈ ವರ್ಷದಲ್ಲಿ ಕನಿಷ್ಠ 60, 70 ಲಕ್ಷ ಸಸಿಗಳನ್ನು ನೆಡಬೇಕಿದೆ. ಸರ್ಕಾರ, ಜನಪ್ರತಿನಿಧಿಗಳು, ಅಧಿಕಾರಿಗಳು ದಾರಿ ತೋರಿಸಬಹುದು. ಆದರೆ ಸಮುದಾಯ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು ಎಂದರು.
ಜನ ಸಮುದಾಯ ಪಾಲ್ಗೊಳ್ಳದೇ ಯಾವ ಕಾರ್ಯಕ್ರಮ ಕೂಡ ಯಶಸ್ಸು ಆಗುವುದಿಲ್ಲ. ಜಲ್ಲೆಯಲ್ಲಿ 100ಕ್ಕೆ 90 ಭಾಗ ಶೌಚಾಲಯಗಳ ನಿರ್ಮಾಣ ಆಗಿದೆ. ಗ್ರಾಮೀಣ ಭಾಗದಲ್ಲಿ ಮನೆಗಳನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವ ನಾಗರಿಕರು ಮನೆ ಹೊರಗಿನ ಪರಿಸರದ ಸ್ವಚ್ಛತೆ ಗಮನ ಕೊಡುವುದಿಲ್ಲ. ಪ್ರತಿ ಗ್ರಾಪಂ, ಹಳ್ಳಿ ಮಟ್ಟದಲ್ಲಿ ಸ್ವಚ್ಛ ಮೇವ ಜಯತೆ ಹಾಗೂ ಜಲಾಮೃತ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು ಎಂದರು.
ಜಿಪಂ ಅಧ್ಯಕ್ಷ ಹೆಚ್.ವಿ.ಮಂಜುನಾಥ ಮಾತನಾಡಿ, ಕಳೆದ 10 ವರ್ಷಗಳಲ್ಲಿ 8 ವರ್ಷ ಬರಗಾಲದ ದವಡೆಗೆ ಸಿಲುಕಿದೆ. ಈ ಬಾರಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಸರ್ಕಾರದ ವಿವಿಧ ಇಲಾಖೆಗಳ ಮೂಲಕ ಕೋಟ್ಯಂತರ ರೂ. ಹಣ ತಂದು ಕೊಳವೆ ಬಾವಿ ಕೊರೆದರೂ ನೀರೇ ಸಿಗದ ದುಸ್ಥಿತಿ ನಿರ್ಮಾಣವಾಗಿದೆ.
ಜಲಾಮೃತ ಯೋಜನೆ: ಪರಿಸ್ಥಿತಿ ಇದೇ ರೀತಿ ಮುಂದುವರಿದರೆ ಜಿಲ್ಲೆಯು ಶಾಶ್ವತವಾಗಿ ಬರಗಾಲಕ್ಕೆ ತುತ್ತಾಗುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಎಚ್ಚರಿಸಿದರು. ಸರ್ಕಾರ ಎಚ್ಚೆತ್ತುಕೊಂಡು ಜಲಾಮೃತ ಯೋಜನೆಯನ್ನು ರೂಪಿಸುವ ಮೂಲಕ ಜನ ಸಾಮಾನ್ಯರಲ್ಲಿ ಜಲ ಸಾಕ್ಷರತೆ ಬಗ್ಗೆ ಅರಿವು ಮೂಡಿಸಲು ಮುಂದಾಗಿದೆ.
ಜಿಲ್ಲಾದ್ಯಂತ ಆಂದೋಲನವಾಗಿ ಈ ಕಾರ್ಯಕ್ರಮ ರೂಪಿಸಲಾಗುವುದು. ಕೆರೆ, ಕುಂಟೆಗಳ ಒತ್ತುವರಿ ತೆರವುಗೊಳಿಸುವುದರ ಜೊತೆಗೆ ಹರಿಯುವ ನೀರನ್ನು ತಡೆದು ಉತ್ತರ ಪಿನಾಕಿನಿ ಹಾಗೂ ಕುಮದ್ವತಿಯನ್ನು ಪುನಶ್ಚೇತನಗೊಳಿಸುವ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದರು.
ಜಿಪಂ ಉಪಾಧ್ಯಕ್ಷೆ ನಿರ್ಮಲ, ಜಿಲ್ಲಾಧಿಕಾರಿ ಅನಿರುದ್ಧ್ ಶ್ರವಣ್, ಜಿಪಂ ಸಿಇಒ ಗುರುದತ್ ಹೆಗಡೆ, ಜಿಪಂ ಸದಸ್ಯರಾದ ಶಿವಣ್ಣ, ಕೆ.ಎಂ.ಮುನೇಗೌಡ, ಕೆ.ಸಿ.ರಾಜಾಕಾಂತ್, ಬಂಕ್ ಮುನಿಯಪ್ಪ, ಸ್ಕೂಲ್ ಸುಬ್ಟಾರೆಡ್ಡಿ, ಎನ್.ಶ್ರೀನಿವಾಸ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಎಲ್ಲಿ ಸಮುದಾಯದ ಪಾತ್ರ ಇರುತ್ತದೆಯೋ ಅಲ್ಲಿ ಒಳ್ಳೆಯ ಕೆಲಸಗಳು ನಡೆಯುತ್ತವೆ. ಬಹಳಷ್ಟು ಕಡೆ ಸಸಿಗಳನ್ನು ನಾಟಿ ಮಾಡಿ ಅದರ ಸಂರಕ್ಷಣೆ ಬಗ್ಗೆ ಗಮನ ಹರಿಸದಿರುವುದು ಬೇಸರದ ಸಂಗತಿ. ಪ್ರತಿಯೊಬ್ಬರು ಕೂಡ ನಾಟಿ ಮಾಡಿದ ಸಸಿಗಳನ್ನು ಸಂರಕ್ಷಣೆಗೆ ಮುಂದಾಗಬೇಕು.
-ಎನ್.ಹೆಚ್.ಶಿವಶಂಕರರೆಡ್ಡಿ, ಜಿಲ್ಲಾ ಉಸ್ತುವಾರಿ ಸಚಿವರು
ಜಿಲ್ಲೆಯಿಂದ ಬೆಂಗಳೂರಿಗೆ ಹಾಲು, ಹಣ್ಣು, ತರಕಾರಿ, ರೇಷ್ಮೆ ಬೆಳೆದು ಕಳಿಸಬೇಕು. ಆದರೆ ಬೆಂಗಳೂರಿನಿಂದ ಹರಿಯುವ ಕೊಳಚೆ ನೀರಿಗೆ ನಾವು ಕಾಯಬೇಕಿದೆ. ಜಿಲ್ಲೆಯಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಅಕ್ರಮ ಮರಳು ದಂಧೆ, ಗಣಿಗಾರಿಕೆಗಳು ಇಂದು ನಮ್ಮನ್ನು ಈ ಪರಿಸ್ಥಿತಿ ತಂದು ನಿಲ್ಲಿಸಿವೆ. ಜಿಲ್ಲೆಯ ಜನರೇ ದುರಾಸೆಗೆ ಒಳಗಾಗಿ ಕೆರೆ, ಕುಂಟೆಗಳನ್ನು ಹಾಗೂ ಜಲಮೂಲಗಳನ್ನು ಒತ್ತುವರಿ ಮಾಡಿಕೊಂಡಿರುವುದರಿಂದ ಈ ಪರಿಸ್ಥಿತಿ ಎದುರಾಗಿದೆ.
-ಹೆಚ್.ವಿ.ಮಂಜುನಾಥ, ಜಿಪಂ ಅಧ್ಯಕ್ಷರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.