ಮಂಚನಬೆಲೆ ಕೆರೆಗಳಿಗೂ ನೀರು ಪೂರೈಕೆ


Team Udayavani, Aug 29, 2020, 3:42 PM IST

ಮಂಚನಬೆಲೆ ಕೆರೆಗಳಿಗೂ ನೀರು ಪೂರೈಕೆ

ಶಿಡ್ಲಘಟ್ಟ: ಎತ್ತಿನಹೊಳೆ ಅಥವಾ ಎಚ್‌.ಎನ್‌.ವ್ಯಾಲಿ ಯೋಜನೆಯಿಂದ ಮಂಚನಬೆಲೆಯ ಎರಡು ಕೆರೆಗಳಿಗೆ ನೀರು ತುಂಬಿಸಲು ಯೋಜನೆ ರೂಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಜಿಲ್ಲೆಗೆ ಕುಡಿಯುವ ನೀರು ಒದಗಿಸುವ ಯೋಜನೆಗೆ ಪ್ರಥಮ ಆದ್ಯತೆ ನೀಡಿದ್ದೇನೆ. ಎಚ್‌.ಎನ್‌. ವ್ಯಾಲಿಯಿಂದ ದಿಬ್ಬೂರು ಪಂಚಾಯ್ತಿ ಒಂದರಲ್ಲೇ ಏಳು ಕೆರೆಗಳು ತುಂಬುತ್ತಿವೆ. ಇನ್ನು ಮಂಚನಬೆಲೆಯಲ್ಲೂ ಕೆರೆ ತುಂಬಿಸುವ ಯೋಜನೆ ರೂಪಿಸಲಾಗುವುದು ಎಂದು ವಿವರಿಸಿದರು.

ಜಿಲ್ಲೆಯಲ್ಲಿ ವಸತಿಹೀನರಿಗೆ ವಸತಿ ಸೌಲಭ್ಯ ಕಲ್ಪಿ ಸಲು ವಿಶೇಷ ಕ್ರಮವಹಿಸಲಾಗಿದೆ. 5,000 ಜನರಿಗೆ ವಸತಿ ಕಲ್ಪಿಸಲು ವ್ಯವಸ್ಥೆ ಮಾಡಲಾಗಿದೆ. ಇನ್ನು ಒಂದು ವರ್ಷದಲ್ಲಿ ಮನೆಗಳು ನಿರ್ಮಿಸಿ ಫಲಾನುಭವಿಗಳಿಗೆ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಲಭ್ಯ ವಿರುವ ಮತ್ತಷ್ಟು ಸರ್ಕಾರಿ ಜಾಗಗಳನ್ನು ವಸತಿ ಯೋಜನೆಗೆ ಗುರುತಿಸಲಾಗುತ್ತಿದೆ ಎಂದು ತಿಳಿಸಿದರು.ರಾಷ್ಟ್ರೀಯ ಹೆದ್ದಾರಿಗಳ ಅಭಿವೃದ್ಧಿ: ಜಿಲ್ಲೆಯಲ್ಲಿ ಕೈಗಾ ರಿಕೆಗಳನ್ನು ಸ್ಥಾಪಿಸಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸುವ ಜೊತೆಗೆ ಪ್ರವಾಸಿ ತಾಣಗಳನ್ನು ಅಭಿವೃದ್ಧಿ ಗೊಳಿಸಿ ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳನ್ನು ಮತ್ತಷ್ಟು ಅಭಿವೃದಿ ದ್ಧಿಗೊಳಿಸಿ ಜಿಲ್ಲೆಯ ರೈತರಿಗೆ, ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಹೇಳಿದರು.

ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಎಲ್ಲಾ ಜನರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸಿ ಅನುಷ್ಠಾನಗೊಳಿಸಿದೆ. ಕೇಂದ್ರ ಸಚಿವ ನಿತಿನ್‌ಗಡ್ಕರಿ ಅವರು ದೇಶ ಉದ್ದಲಕ್ಕೂ ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ರಾಷ್ಟ್ರೀಯ ಹೆದ್ದಾರಿಗಳನ್ನು ವೇಗವಾಗಿ ಅಭಿವೃದ್ಧಿಗೊಳಿಸುವ ಜೊತೆಗೆ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಯ ಮೂಲಕ ಪ್ರತಿ ಹಳ್ಳಿಗೂ ರಸ್ತೆ ಸೌಲಭ್ಯ ಕಲ್ಪಿಸುತ್ತಿದ್ದಾರೆ ಎಂದು ಹೇಳಿದರು.

ಎತ್ತಿನಹೊಳೆ ಯೋಜನೆಗೆ ಬಾಂಡ್‌: ರೇಷ್ಮೆ- ಹೆ„ನು ಗಾರಿಕೆ- ತರಕಾರಿ ಹೂಹಣ್ಣುಗಳ ಉತ್ಪಾದನೆಯಲ್ಲಿ ತೊಡಗಿ ಸಿಕೊಂಡಿರುವ ಜಿಲ್ಲೆಯ ರೈತರಿಗೆ ಸರ್ಕಾರ ಗಳಿಂದ ಅನೇಕ ರೀತಿಯ ಸೌಲಭ್ಯಗಳನ್ನು ಕಲ್ಪಿಸಲು ಬದ್ಧನಾಗಿದ್ದು, ಜಿಲ್ಲೆಯ ಜನರ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಅನುದಾನವನ್ನು ಬಿಡುಗಡೆ ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಎತ್ತಿನಹೊಳೆ ಯೋಜನೆಗೆ ಸಾಕಷ್ಟು ಅನುದಾನ ಅಗತ್ಯ ವಾಗಿದ್ದು, ಈ ಸಂಬಂಧ ಬಾಂಡ್‌ ಬಿಡುಗಡೆ ಮಾಡಿ ಅನುದಾನ ಸಂಗ್ರಹಿಸು ವಂತೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಮನವಿ ಮಾಡಲಾಗಿದೆ ಎಂದರು. ಸಂಸದ ಬಿ.ಎನ್‌.ಬಚ್ಚೇಗೌಡ, ಜಿಪಂ ಅಧ್ಯಕ್ಷ ಎಂ.ಬಿ . ಚಿಕ್ಕನರಸಿಂಹಯ್ಯ, ಡೀಸಿ ಆರ್‌.ಲತಾ, ಜಿಪಂ ಸಿಇಒ ಫೌಝೀಯಾ ತರುನ್ನುಮ್‌, ತಾಪಂ ಅಧ್ಯಕ್ಷ ರಾಮಸ್ವಾಮಿ, ಎಸ್ಪಿ ಮಿಥುನ್‌ಕುಮಾರ್‌, ಎಪಿಎಂಸಿ ಅಧ್ಯಕ್ಷ ನಾರಾಯಣ ಸ್ವಾಮಿ, ಭೂ ಅಭಿವೃದಿ œ ಬ್ಯಾಂಕಿನ ಅಧ್ಯಕ್ಷ ನಾಗೇಶ್‌, ಮುಖಂಡರಾದ ಕೆ.ವಿ. ನಾಗರಾಜ್‌, ಮರಳಕುಂಟೆ ಕೃಷ್ಣಮೂರ್ತಿ, ಪಟ್ರೇನಹಳ್ಳಿ ಮೋಹನ್‌, ವೆಂಕಟನಾರಾಯಣಪ್ಪ, ಗಂಗರೇ ಕಾಲುವೆ ಪ್ರಸಾದ್‌, ಮಂಚನಬಲೆ ಶ್ರೀಧರ್‌, ಎಂಎಫ್‌ಸಿ ನಾರಾಯಣಸ್ವಾಮಿ, ಗಿಡ್ನಹಳ್ಳಿ ನಾರಾಯಣ ಸ್ವಾಮಿ, ಆನಂದಮೂರ್ತಿ, ರಮೇಶ್‌ ಮತ್ತಿತರರು ಉಪಸ್ಥಿತರಿದ್ದರು.

15.78 ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ : ಧನ್ಯವಾದ ಸಲ್ಲಿಸಿದರು.ಗುಂಡ್ಲಗುರ್ಕಿ ಕ್ರಾಸ್‌ನಿಂದ ಆಕತಿಮ್ಮನಹಳ್ಳಿ, ಹೊಸಹಳ್ಳಿ, ಸೊಪ್ಪಹಳ್ಳಿ ಮಾರ್ಗವಾಗಿ ರಾಯಪ್ಪನಹಳ್ಳಿವರೆಗೆ 9.50 ಕಿ.ಮೀ., ಹೊಸೂರಿನಿಂದ ಕಂಡಕನಹಳ್ಳಿ, ಗಿಡ್ನಹಳ್ಳಿ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ-234 ವರೆಗೆ 5.78 ಕಿ.ಮೀ., ಅಜ್ಜವಾರ, ತಿಪ್ಪಹಳ್ಳಿ ಮಾರ್ಗವಾಗಿ ಜಾತವಾರವರೆಗೆ 6.63 ಕಿ.ಮೀ. ಉದ್ದದ ರಸ್ತೆಗಳನ್ನು ಒಟ್ಟು 15.78 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ. ಈ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್‌ ಭೂಮಿಪೂಜೆ ನೆರವೇರಿಸಿದರು. ಜೊತೆಗೆ ಬಾಗೇಪಲ್ಲಿಯಲ್ಲಿ ಲೋಕೋಪಯೋಗಿ ಇಲಾಖೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಬಳಿಕ ಚಿಕ್ಕಬಳ್ಳಾಪುರದ ದಿಬ್ಬೂರು ಕೆರೆಗೆ ಬಾಗಿನ ಸಮರ್ಪಿಸಿದರು.

ಟಾಪ್ ನ್ಯೂಸ್

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!

Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್‌ ವಿರುದ್ಧ ತಾಬ್ಡೆ 100 ಕೋಟಿ ದಾವೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

BPL card ಕೇಂದ್ರ ಸರಕಾರವೇ ರದ್ದು ಮಾಡಿದೆ: ಸಿಎಂ ಸಿದ್ದರಾಮಯ್ಯ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

DK SHI NEW

DCM; ಸಂಪನ್ಮೂಲ ಕ್ರೋಡೀಕರಣ ಸಮಿತಿ ಜತೆ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.