ಚಿಕ್ಕಬಳ್ಳಾಪುರ: ಜಿಲ್ಲೆಯ ಪವಿತ್ರ ಯಾತ್ರಾ ಸ್ಥಳ ಕೈವಾರದಲ್ಲಿ ಪಂಚರತ್ನ ಯಾತ್ರೆಗೆ ಸ್ವಾಗತ

Team Udayavani, Nov 23, 2022, 2:18 PM IST

11

ಚಿಕ್ಕಬಳ್ಳಾಪುರ: ರಾಜ್ಯದ ಸಮಗ್ರ ಅಭಿವೃದ್ಧಿಗಾಗಿ ಕೋಲಾರ ಜಿಲ್ಲೆಯ ಮುಳಬಾಗಿಲುನಿಂದ ಆರಂಭವಾಗಿರುವ ಪಂಚರತ್ನ ಯಾತ್ರೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಪವಿತ್ರ ಯಾತ್ರಾಸ್ಥಳ ಶ್ರೀ ಯೋಗಿ ನಾರಾಯಣ ಅವರ ಪುಣ್ಯ ಭೂಮಿಗೆ ಪಂಚರತ್ನ ಯಾತ್ರೆ ಪ್ರವೇಶ ಮಾಡಿದ್ದು, ಜೆಡಿಎಸ್ ಕಾರ್ಯಕರ್ತರು ಅದ್ದೂರಿಯಾಗಿ ಸ್ವಾಗತಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆಯು ಕೋಲಾರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆದಿದ್ದು, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದಿನಿಂದ ಪಂಚರತ್ನ ಯಾತ್ರೆ ನಡೆಯಲಿದೆ. ಕೈವಾರದಲ್ಲಿ ಮೊದಲು ಹಝರತ್ ಇಬ್ರಾಹಿಂ ಷಾವಲೀ ಮತ್ತು ಮಖ್ದೂಂ ಷಾ ವಲೀ ದರ್ಗಾದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಚಿಂತಾಮಣಿ ವಿಧಾನಸಭಾ ಕ್ಷೇತ್ರದ ಶಾಸಕ ಜೆ.ಕೆ. ಕೃಷ್ಣಾ ರೆಡ್ಡಿ ನೇತೃತ್ವದಲ್ಲಿ ಸಹಸ್ರಾರು ಜೆಡಿಎಸ್ ಕಾರ್ಯಕರ್ತರು, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹಾಗೂ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ಯಾತ್ರೆಯನ್ನು ಭವ್ಯವಾಗಿ ಬರಮಾಡಿಕೊಂಡರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪುಣ್ಯಕ್ಷೇತ್ರ ಕೈವಾರದ ಶ್ರೀ ಯೋಗಿನಾರಾಯಣ ಮತ್ತು  ಅವರ‌‌ ಸನ್ನಿಧಿಯಲ್ಲಿ ವಿಶೇಷ ಪೂಜೆ ಮತ್ತು ಪ್ರಾರ್ಥನೆ ಸಲ್ಲಿಸುವ ಮೂಲಕ ಪಂಚರತ್ನ ಯಾತ್ರೆಯನ್ನು ಆರಂಭಿಸಿದರು. ಇದೇ ಸಮಯದಲ್ಲಿ ಮುಂದಿನ ಮುಖ್ಯಮಂತ್ರಿ ಕುಮಾರಣ್ಣ ಹರ್ಷೋದ್ಗಾರದ ನಡುವೆ ಯಾತ್ರೆ ಮುಂದುವರೆಯಿತು.

ಮಳೆಯನ್ನೂ ಲೆಕ್ಕಿಸದೆ ಭಾಷಣ ಅಲಿಸಿದ ಜನ: ಮಾಜಿ‌ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಭಾಷಣ ಮಾಡುವ ವೇಳೆ ಮಳೆ ಸುರಿದರೂ ಕೂಡಾ ಅದನ್ನು ಲೆಕ್ಕಿಸದೆ ಜೆಡಿಎಸ್ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಷಣ ಆಲಿಸಿದರು. ಇದಕ್ಕೆ ಮನಸೋತ ಮಾಜಿ ಸಿಎಂ ಕುಮಾರಸ್ವಾಮಿ ನಿಮ್ಮ ಪ್ರೀತಿಯನ್ನು ಜೀವನ ಪರ್ಯಂತ ಮರೆಯುವುದಿಲ್ಲ ಎಂದರು.

ಬೈಕ್‌ ರ‍್ಯಾಲಿ: ಕೈವಾರ ಗ್ರಾಮದಿಂದ ಚಿನ್ನಸಂದ್ರವರಿಗೆ ಜೆಡಿಎಸ್ ಕಾರ್ಯಕರ್ತರು ಜೆಡಿಎಸ್ ಪಕ್ಷದ ಬಾವುಟದೊಂದಿಗೆ ಬೈಕ್‌ ರ‍್ಯಾಲಿ ನಡೆಸಿ ಗಮನ ಸೆಳೆದರು. ಜನ ಮಹಡಿ ಮೇಲೆ ನಿಂತು ಮಾಜಿ ಸಿಎಂಗೆ ಅಭಿನಂದಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ತಿನ ಸದಸ್ಯ ಇಂಚರ ಗೋವಿಂದರಾಜ, ಮಾಜಿ ಸದಸ್ಯ ಚೌಡರೆಡ್ಡಿ, ಜಿಪಂ ಮಾಜಿ ಸದಸ್ಯ ಶೇಖ್ ಮೌಲಾ, ಜೆಡಿಎಸ್ ಮುಖಂಡರಾಸ ಅಮರ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಬೈರರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆMandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

Mandya: ಮರ ಕತ್ತರಿಸುವ ಯಂತ್ರದಿಂದ ಮನೆ ಮಾಲಕನ ಕತ್ತರಿಸಿ ಕೊ*ಲೆ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Surjewala

Pegasus spyware ಬಗ್ಗೆ ಸುಪ್ರೀಂಕೋರ್ಟ್‌ ತನಿಖೆ ನಡೆಸಲಿ: ಸುರ್ಜೇವಾಲಾ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.