Revenge Story; ರೆಸಾರ್ಟ್ ಗೆ ಪ್ರಿಯಕರನ ಕರೆಸಿ 20 ಲಕ್ಷ ದೋಚಿದ್ದ ಯುವತಿ ಸೆರೆ
Team Udayavani, Jun 30, 2023, 3:24 PM IST
ಚಿಕ್ಕಬಳ್ಳಾಪುರ: ಹಲವು ದಿನಗಳ ಹಿಂದೆ ನಂದಿ ಸಮೀಪದ ರೆರ್ಸಾಟ್ ಗೆ ಪ್ರಿಯಕರನನ್ನು ಕರೆಸಿಕೊಂಡು ಆತನ ಮೇಲೆ ಹಲ್ಲೆ ನಡೆಸಿ 20 ಲಕ್ಷ ರೂ.ಗೂ ಅಧಿಕ ಹಣ ದೋಚಿ ಪರಾರಿಯಾಗಿದ್ದ ಆಂಧ್ರ ಮೂಲದ ಯುವತಿಯನ್ನು ಹಾಗೂ ಆಕೆಯ ಸಹೋದರನನ್ನು ನಂದಿ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಯುವತಿಯನ್ನು ಭಾವನಾ ಹಾಗೂ ಆಕೆಯ ಸಹೋದರ ಪುಲ್ಲಾರೆಡ್ಡಿ ಎಂದು ಗುರುತಿಸಲಾಗಿದೆ. ನಂದಿ ಠಾಣೆ ಪೊಲೀಸರು ಅವರನ್ನು ಬಂಧಿಸಿ ಗುರುವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಏನಿದು ಘಟನೆ: ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಉದ್ಯೋಗಿಯಾಗಿದ್ದ ವಿಜಯ್ ಸಿಂಗ್ ಎಂಬಾತ ಭಾವನಾಳನ್ನು ಪ್ರೀತಿಸುತ್ತಿದ್ದು, ಹಲವು ದಿನಗಳ ಹಿಂದೆ ಆಕೆಯನ್ನು ಬಿಟ್ಟು ಮತ್ತೂಬ್ಬ ಯುವತಿ ಜತೆಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಗೊಂಡ ಭಾವನಾ, ನಂದಿ ಸಮೀಪ ಇರುವ ರೆಸಾರ್ಟ್‌ಗೆ ವಿಜಯ್ ಸಿಂಗ್ ನನ್ನು ಕರೆದುಕೊಂಡಿದ್ದಳು. ಬಳಿಕ ಆಕೆಯ ಸಹೋದರ ಹಾಗೂ ಆಕೆ ವಿಜಯ್ ಸಿಂಗ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಆತನ ಬಳಿ ಇದ್ದ 20 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದರು.
ಇದನ್ನೂ ಓದಿ:Ambati Rayudu: ಆಂಧ್ರ ಪ್ರದೇಶ ರಾಜಕೀಯಕ್ಕೆ ಎಂಟ್ರಿಕೊಟ್ಟ ಕ್ರಿಕೆಟಿಗ ಅಂಬಟಿ ರಾಯುಡು
ಈ ಕುರಿತು ವಿಜಯ್ ಸಿಂಗ್ ನಂದಿ ಠಾಣೆ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಆಂಧ್ರ ಪೊಲೀಸರ ನೆರವಿನೊಂದಿಗೆ ನಂದಿ ಠಾಣೆ ಪೊಲೀಸರು ಭಾವನಾರೆಡ್ಡಿ ಹಾಗೂ ಆಕೆಯ ಸಹೋದರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್ ನಿಲ್ದಾಣ
Chikkaballapur: ಬ್ಯಾಂಕ್ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್ ವಂಚಕನ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.