ಬಾಲ್ಯವಿವಾಹ ತಡೆಗೆ ಶ್ರಮಿಸಿ: ವಾಸುದೇವ
Team Udayavani, Aug 7, 2020, 10:51 AM IST
ಶಿಡ್ಲಘಟ್ಟ: ಬಾಲ್ಯವಿವಾಹ ಪದ್ಧತಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗಿದೆ ಮತ್ತು ಅವರ ಸುಮಧುರ ಬಾಲ್ಯದ ಬದು ಕನ್ನು ಕತ್ತಲಾಗಿಸುವ ಕೆಟ್ಟ ಆಚಾರ ಎಂದು ಮಕ್ಕಳ ಹಕ್ಕುಗಳ ಸಂಸ್ಥೆಯ ವಾಸುದೇವ ಶರ್ಮಾ ಅಭಿಪ್ರಾಯಪಟ್ಟರು.
ತಾಲೂಕಿನ ವೈ.ಹುಣಸೇನಹಳ್ಳಿಯ ಸಮುದಾಯ ಭವನದ ಆವರಣದಲ್ಲಿ ವಿವಾಹಿತ ಕಿಶೋರಿ ಹೆಣ್ಣುಮಕ್ಕಳ ಸಶಕ್ತೀಕರಣ ಯೋಜನೆಯಡಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಶಿಕ್ಷಕರು, ಪಿಡಿಒ ಮತ್ತು ಸಮುದಾಯ ಸಂಘಟನೆಗಳೊಂದಿಗೆ ಚರ್ಚಿಸುವ ಹಾಗೂ ಸರ್ಕಾರ ಮತ್ತು ಸ್ವಯಂ ಸೇವಾ ಸಂಸ್ಥೆಗಳು ಬಾಲ್ಯವಿವಾಹ ತಡೆಯಲು ಕಾರ್ಯತಂತ್ರಗಳ ಸಮಾಲೋಚನೆ ಸಭೆಯಲ್ಲಿ ಮಾತನಾಡಿದರು.
ದೇಶದಲ್ಲಿ ಬಾಲ್ಯವಿವಾಹಗಳು, ತಾಯಿ ಮತ್ತು ಮಕ್ಕಳ ಮರಣ, ಅಪೌಷ್ಟಿಕತೆ, ಹೆಣ್ಣು ಮಕ್ಕಳ ಶೋಷಣೆ ಮುಂತಾದ ಅಂಶಗಳು ಹೆಚ್ಚಾಗಲು ಕಾರಣವಾಗುತ್ತಿವೆ. ಶಾಲಾ ಮುಖ್ಯ ಶಿಕ್ಷಕರು, ಪಿಡಿಒ, ಪೊಲೀಸ್, ಮುಂತಾದವರು ಬಾಲ್ಯವಿವಾಹ ತಡೆಯಲು ಶ್ರಮಿಸಬೇಕು ಎಂದರು. ಸಮುದಾಯದ ನಿಕಟ ಸಂಪರ್ಕ ಹೊಂದಿರುವ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಧೈರ್ಯದಿಂದ ಮಕ್ಕಳ ಹಕ್ಕುಗಳ ರಕ್ಷಣಾ ಅಧಿಕಾರಿಗಳು ಅಥವಾ ಮಕ್ಕಳ ಸಹಾಯವಾಣಿ 1098 ಗೆ ದೂರು ಸಲ್ಲಿಸಬೇಕೆಂದರು.
ಗ್ರಾಪಂ ಅಧ್ಯಕ್ಷ ರಾಮ್‌ಪ್ರಸಾದ್ ಮಾತನಾಡಿ, ಬಾಲ್ಯ ವಿವಾಹ ನಿಷೇಧ ಕಾನೂನು ಉಲ್ಲಂಘನೆ ಮಾಡಿದವರಿಗೆ ಯಾವ ರೀತಿ ಶಿಕ್ಷೆಯನ್ನು ನೀಡುತ್ತಾರೆ ಎಂಬ ಜಾಗೃತಿ ಹಳ್ಳಿ ಗಳಲ್ಲಿ ಪಂಚಾಯಿತಿ, ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಮೂಡಿಸಬೇಕೆಂದು ಸಲಹೆ ನೀಡಿದರು. ವೈ. ಹುಣಸೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಷಣ್ಮುಗಂ ಬಾಲ್ಯ ವಿವಾಹದಿಂದಾಗುವ ಆರೋಗ್ಯ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮಹೇಶ್, ಮೇಲ್ವಿಚಾರಕಿ ಬಿ.ಶಾಂತ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipal KMC; ಮಧುಮೇಹಿ ಮಕ್ಕಳಿಗಾಗಿ ಶೈಕ್ಷಣಿಕ ಕಾರ್ಯಕ್ರಮ
Mahakumbh Mela: ಪ್ರಯಾಗ್ ರಾಜ್ ಚಲೋ-ಮಹಾಕುಂಭ ಮೇಳಕ್ಕೆ ಅಡ್ಡಿ: ಉ*ಗ್ರ ಪನ್ನು ಬೆದರಿಕೆ
HMPV: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಸಿದ್ದರಾಮಯ್ಯ
Daskath ಮೆಚ್ಚಿದ ಪ್ರೇಕ್ಷಕರಿಗೆ ಬಿಗ್ ನ್ಯೂಸ್ ಕೊಟ್ಟ ಚಿತ್ರತಂಡ
BBK11: ಮಂಜು ನೋಡಿ ʼಥೂ..ʼ ಎಂದ ತ್ರಿವಿಕ್ರಮ್; ದೊಡ್ಮನೆಯಲ್ಲಿ ಮತ್ತೆ ಹೋಗೋ ಬಾರೋ ಗಲಾಟೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.