ನರೇಗಾ ಯೋಜನೆ ಕಾಮಗಾರಿ ವೀಕ್ಷಣೆ
Team Udayavani, May 17, 2020, 5:58 AM IST
ಗೌರಿಬಿದನೂರು: ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನರೇಗಾ ಯೋಜನೆ ಯಡಿ ಯಲ್ಲಿ ನಿರ್ಮಾಣವಾಗಿರುವ ಹಾಗೂ ನಡೆಯುತ್ತಿರುವ ಕಾಮಗಾರಿಗಳನ್ನು ಜಿಪಂ ಅಧ್ಯಕ್ಷ ಎಂ.ಬಿ. ಚಿಕ್ಕನರಸಿಂಹಯ್ಯ, ಜಿಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ಪರಿಶೀಲಿಸಿದರು. ಜಿಲ್ಲಾ ಪಂಚಾಯ್ತಿ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ ಮಾತನಾಡಿ, ಸಮುದಾಯಕ್ಕೆ ಆಸರೆಯಾಗುವ ಎಲ್ಲ ವಿಧದ ಕಾಮಗಾರಿ ಗಳು ನರೇಗಾ ಯೋಜನೆಯಡಿ ಯಲ್ಲಿದೆ ಎಂದು ಹೇಳಿದರು.
ಜಿ.ಪಂ ಸಿಇಒ ಬಿ.ಫೌಝೀಯಾ ತರುನ್ನುಮ್ ಮಾತನಾಡಿ, ಕೂಲಿ ಕಾರ್ಮಿಕರಿಗೆ ಕೆಲಸವಿಲ್ಲದೆ ಕಂಗಾ ಲಾಗಿದ್ದು, ಇಂತಹ ಪರಿಸ್ಥಿತಿಯಲ್ಲಿ ಪ್ರತಿ ಗ್ರಾಮ ಮಟ್ಟದಲ್ಲಿ ಸಮುದಾಯದ ಅಭಿವೃದ್ಧಿಗಾಗಿ ನಿಯಮಾನುಸಾರ ಕಾಮಗಾರಿ ಮಾಡಲು ಅವಕಾಶವಿದೆ ಎಂದು ಹೇಳಿದರು. ತಾಪಂ ಅಧ್ಯಕ್ಷ ಆರ್.ಲೋಕೇಶ್, ಇಒ ಎನ್. ಮುನಿರಾಜು, ನರೇಗಾ ಸಹಾಯಕ ನಿರ್ದೇಶಕ ಪಿ.ಚಿನ್ನಪ್ಪ, ಜಿಪಂ ಸದಸ್ಯ ಪಿ.ಎನ್.ಪ್ರಕಾಶ್, ಎಚ್.ವಿ.ಮಂಜುನಾಥ್, ಮುಖಂಡ ರಂಗನಾಥ್, ಬಿ.ಪಿ.ಅಶ್ವತ್ಥನಾರಾಯಣಗೌಡ, ಪ್ರಕಾಶರೆಡ್ಡಿ, ಜಿ.ಆರ್.ರಾಜಶೇಖರ್, ಬಾಬು, ಪ್ರಸನ್ನ, ಎನ್.ಪದ್ಮಶ್ರೀ, ಭವ್ಯ, ಪಿಡಿಒ ತಿಪ್ಪಯ್ಯ, ಲೋಕೇಶ್, ಎ. ಶೈಲಾ, ಕರಿಯಪ್ಪ, ಜಿ.ಶ್ರೀನಿವಾಸ್, ಮಡಿವಾಳಪ್ಪ ಇದ್ದರು.
ವಿವಿಧ ನರೇಗಾ ಕಾಮಗಾರಿ ವೀಕ್ಷಣೆ: ಶ್ಯಾಂಪುರ ಗ್ರಾಪಂ ಕಟ್ಟಡ, ಶಾಲಾ ಕಾಂಪೌಂಡ್, ಚೆಕ್ ಡ್ಯಾಂ ನಿರ್ಮಾಣ ಕಾಮಗಾರಿ, ಜಾನುವಾರುಗಳ ಕುಡಿಯುವ ನೀರಿನ ಕುಂಟೆಗೆ ಭೇಟಿ ನೀಡಿದರು. ಗೌಡಗೆರೆ ಗ್ರಾಪಂನಲ್ಲಿ ನೀರಿನ ಕಾಲುವೆ, ಕೃಷಿ ಹೊಂಡ, ನಾಲಾಬದು ನಿರ್ಮಾಣ, ಅಲಕಾಪುರದಲ್ಲಿನ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿಯ ಮಳೆ ನೀರು ಕೊಯ್ಲು ಕಾಮಗಾರಿ, ಮುದುಗೆರೆಯಲ್ಲಿ ಉದ್ಯಾನವನ, ಕಲ್ಯಾಣಿ ಸೇರಿದಂತೆ ಹಲವು ಕಾಮಗಾರಿ ವೀಕ್ಷಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್
Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ
Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.