ಜಿಲ್ಲೆ ಹಿಪ್ಪುನೇರಳೆಗೆ ಆಂಧ್ರ ಹುಳು ಕಾಟ!
ಸಂಕಷ್ಟದ ನಡುವೆ ಹಿಪ್ಪುನೇರಳೆಗೆ ಕೀಟ ಬಾಧೆ ; ಬೆಳೆಗಾರರಲ್ಲಿ ಆತಂಕ
Team Udayavani, Apr 23, 2020, 1:19 PM IST
ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ: ಕೋವಿಡ್ ಸಂಕಷ್ಟದಿಂದ ಇಡೀ ದೇಶವೇ ಲಾಕ್‌ಡೌನ್ ಆಗಿ ಬೆಳೆದ ಕೃಷಿ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ, ಬೇಡಿಕೆ ಇಲ್ಲದೇ ರೈತಾಪಿ ಕೃಷಿ ಕೂಲಿ ಕಾರ್ಮಿಕರು ತೀವ್ರ ಸಂಕಷ್ಟ ಅನುಭವಿಸುತ್ತಿರುವ ಸಂದರ್ಭದಲ್ಲಿ ಜಿಲ್ಲೆಯ ರೇಷ್ಮೆ ಬೆಳೆಗಾರರಿಗೆ ಹೊಸ ತಲೆ ನೋವು ಶುರುವಾಗಿದೆ. ಬೆವರು ಸುರಿಸಿ ಬೆಳೆದು ಕಾಟಾವಿಗೆ ಬಂದಿರುವ ಹಿಪ್ಪುನೇರಳೆ ಸೊಪ್ಪಿಗೆ ಈಗ ಕೀಟ ಬಾಧೆ ಕಾಣಿಸಿಕೊಂಡಿದೆ. ಮೊದಲೇ ಲಾಕ್ ಡೌನ್‌ನಿಂದ ರೇಷ್ಮೆಗೂಡು ಮಾರಾಟಕ್ಕೆ ಹರಸಾಹಸ ಪಡುತ್ತಾ ಆರ್ಥಿಕ ಸಂಕಷ್ಟದ ಸುಳಿಯಲ್ಲಿ ಸಿಲುಕಿರುವ ರೇಷ್ಮೆ ಬೆಳೆಗಾರರಿಗೆ
ಕೀಟಬಾಧೆ ನಿದ್ದೆಗೆಡಿಸಿದ್ದು ತೋಟಗಳಲ್ಲಿ ಅಪಾರ ಪ್ರಮಾಣದ ಹಿಪ್ಪುನೇರಳೆ ಸೊಪ್ಪು ಈಗ ಕೈಗೆ ಬಾರದಂತಹ ಸ್ಥಿತಿ ತಲುಪುವಂತಾಗಿದೆ.
ನೆರೆಯ ಆಂಧ್ರಪ್ರದೇಶದಲ್ಲಿ ಹಲವು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಈ ಕೀಟ, ಈಗ ರಾಜ್ಯಕ್ಕೂ ಪ್ರವೇಶಿಸಿದ್ದು ಜಿಲ್ಲೆಯ ಶಿಡ್ಲಘಟ್ಟ ರೇಷ್ಮೆ ಬೆಳೆಗಾರರನ್ನು ಕಂಗಾಲಾಗಿಸಿದೆ. ಒಂದೆಡೆ ಬರ ಮತ್ತೂಂದಡೆ ಕೋವಿಡ್ ಲಾಕ್‌ಡೌನ್‌ನಿಂದ ಇನ್ನಿಲ್ಲದ ಸಂಕಷ್ಟ ಅನುಭವಿಸುತ್ತಿರುವ ಜಿಲ್ಲೆಯ ರೈತರಿಗೆ ರೇಷ್ಮೆ ಗೂಡು ಉತ್ಪಾದನೆಗೆ ಅವಶ್ಯಕವಾದ ಹಿಪ್ಪು ನೇರಳೆ ಸೊಪ್ಪಿಗೆ ಕೀಟಬಾಧೆ ಕಾಣಿಸಿಕೊಂಡಿದ್ದು ರಾತ್ರಿ ವೇಳೆ ತೋಟಗಳಿಗೆ ದಾಳಿ ಇಡುತ್ತಿರುವ ಈ ಕೀಟಗಳ ದಾಳಿಯಿಂದ ಹಲವು ತಿಂಗಳ ಬೆವರಿನ ಶ್ರಮ ನೀರಿನಲ್ಲಿ ಹೋಮ ಮಾಡಿದಂತಾಗಿದೆ. ಜಿಲ್ಲೆಯಲ್ಲಿ ನಿತ್ಯ 25 ರಿಂದ 30 ಟನ್ ರೇಷ್ಮೆಗೂಡು ಉತ್ಪಾದನೆ ಆಗುತ್ತಿದ್ದು ಲಾಕ್‌ಡೌನ್‌ನಿಂದ ಉತ್ಪಾದನೆ ಇಳಿಮುಖವಾದರೂ ಬೆಳೆದ ರೇಷ್ಮೆಗೂಡು ಮಾರಾಟಕ್ಕೆ ರೈತರು ಪರದಾಡುವಂತಾಗಿದೆ.
ಇರುಳಲ್ಲಿ ಮಾತ್ರ ಕಾಣಿಸುತ್ತವೆ
ಹಿಪ್ಪುನೇರಳೆ ಸೊಪ್ಪಿಗೆ ಸದ್ಯ ಆವರಿಸಿರುವ ಕೀಟಗಳು ಹಗಲಿನಲ್ಲಿ ಇರದೇ ಕೇವಲ ರಾತ್ರಿ ಹೊತ್ತು ಮಾತ್ರ ತೋಟಗಳಿಗೆ ಲಗ್ಗೆ ಇಟ್ಟು ಬೆಳೆದು ನಿಂತು ಕಾಟಾವಿಗೆ ಬಂದಿರುವ ರೇಷ್ಮೆ ಸೊಪ್ಪು ತಿಂದು ಹಾಳು ಮಾಡುತ್ತಿವೆ. ಇದು ಬೆಳೆಗಾರರನ್ನು ಆತಂಕಕ್ಕೀಡು ಮಾಡಿದ್ದು, ಕೃಷಿ ತಜ್ಞರು ಕೀಟ ಭಾದೆ ತಡೆಗೆ ಕ್ರಮ ವಹಿಸಬೇಕೆಂದು ಆಗ್ರಹ ರೇಷ್ಮೆ ಬೆಳೆಗಾರರಿಂದ ಕೇಳಿ ಬರುತ್ತಿದೆ.
ಇತ್ತೀಚೆಗೆ ಈ ಮಾದರಿ ಹುಳುಗಳು ಪಕ್ಕದ ಆಂಧ್ರಪ್ರದೇಶದಲ್ಲಿ ಕಾಣಿಸಿಕೊಂಡಿದ್ದವು. ಆಗಲೇ ನಾವು ರಾಜ್ಯದ ರೇಷ್ಮೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಹಾಗೂ ಕೃಷಿ ತಜ್ಞರಿಗೆ ಮಾಹಿತಿ ನೀಡಿದ್ದವು. ರೇಷ್ಮೆ ಆಯುಕ್ತರಿಗೆ ಈ ವಿಚಾರ ತಿಳಿಸಲಾಗಿದೆ. ಅಧಿಕಾರಿಗಳು ಕೀಟಬಾಧೆ ನಿಯಂತ್ರಣಕ್ಕೆ ಕೂಡಲೇ ಕ್ರಮ ವಹಿಸಬೇಕು.
● ಭಕ್ತರಹಳ್ಳಿ ಬೈರೇಗೌಡ, ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ
ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್ ಆ್ಯಪ್: ಸದ್ಗುರು
Dr MC Sudhakar: ‘ಹೈಕಮಾಂಡ್ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’
Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.