ಶಾಲೆ- ಕಾಲೇಜು ಆರಂಭದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಕೆ. ಸುಧಾಕರ್
Team Udayavani, Dec 18, 2020, 3:22 PM IST
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಸಲಹಾ ಸಮಿತಿ ನೀಡಿರುವ ವರದಿಯ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ನಗರದ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಸಚಿವರು, ಈ ಹಿಂದಿನಂತೆ ಶಿಕ್ಷಣ ಇಲಾಖೆ ಮತ್ತು ತಮ್ಮ ಇಲಾಖೆಗಳ ಜತೆ ಮುಖ್ಯಮಂತ್ರಿಯವರು ಸಭೆ ನಡೆಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಇನ್ನೂ ಯಾವುದೇ ತೀರ್ಮಾನ ಆಗಿಲ್ಲವೆಂದು ಸ್ಪಷ್ಟಪಡಿಸಿದರು.
ಸರ್ಕಾರ ರಚಿಸಿರುವ ತಾಂತ್ರಿಕ ಸಲಹಾ ಸಮಿತಿ ಗುರುವಾರ ಶಿಕ್ಷಣ ಸಚಿವರನ್ನು ಭೇಟಿ ಮಾಡಿದ್ದಾರೆ ಎಂದು ಮಾಹಿತಿ ಗೊತ್ತಾಗಿದೆ ಅವರು ನೀಡುವ ವರದಿ ಇನ್ನೂ ತಮಗೆ ಬಂದಿಲ್ಲ. ವರದಿ ಬಂದ ಬಳಿಕ ಪರಿಶೀಲಿಸಲಾಗುವುದು. ತಾಂತ್ರಿಕ ಸಮಿತಿ ಕೊಟ್ಟ ವರದಿಯೇ ಅಂತಿಮ ಎಂದೇನು ಅಲ್ಲ. ಸರ್ಕಾರಕ್ಕೆ ಸಮಿತಿ ಸಲಹೆ ನೀಡಿದೆ ಅಷ್ಟೇ, ಸಾಧಕ- ಬಾಧಕಗಳನ್ನು ಸರ್ಕಾರ ಪರಿಶೀಲಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.
ಇದನ್ನೂ ಓದಿ:MSP ಹೆಚ್ಚಳ ಮಾಡಿರುವುದು ಎನ್ ಡಿಎ ಸಾಧನೆ: ನೂತನ ಕೃಷಿ ಕಾಯ್ದೆ ಬಗ್ಗೆ ಪ್ರಧಾನಿ ಮೋದಿ ವಿವರ
ಸರ್ಕಾರ ಜತೆಗಿದೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕು ವೈದ್ಯಾಧಿಕಾರಿ ಅವರು ಹಾಸನದಲ್ಲಿ ಪತ್ತೆಯಾಗಿದ್ದಾರೆ. ನಕಲಿ ವೈದ್ಯರನ್ನು ಪತ್ತೆ ಹಚ್ಚಿದ ಸಂಬಂಧ ಕೆಲವರು ಅವರನ್ನು ನಿಂದಿಸಿದ್ದರಿಂದ ಮನನೊಂದು ಅವರು ಎರಡು ದಿನ ಮೊಬೈಲ್ ಸ್ವಿಚ್ಛ್ ಆಫ್ ಮಾಡಿ ಹೊರಗೆ ಹೋಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾ ಆರೋಗ್ಯಾಧಿಕಾರಿ ಅವರನ್ನು ಸಂಪರ್ಕಿಸಿ ಅವರನ್ನು ಭೇಟಿ ಮಾಡಿ ನೈತಿಕವಾಗಿ ಧೈರ್ಯ ತುಂಬುವಂತೆ ಸೂಚನೆ ನೀಡಿದ್ದೇನೆ. ಪ್ರಾಮಾಣಿಕತೆಯಿಂದ, ಬದ್ಧತೆಯಿಂದ ಕೆಲಸ ಮಾಡುವವರ ಜತೆ ಸರ್ಕಾರ ಇದೆ. ವೈದ್ಯರು ಯಾರಿಗೂ ಹೆದರುವ ಅಗತ್ಯವಿಲ್ಲ. ಸರ್ಕಾರ ಅವರ ಜತೆಗಿದೆ ಎಂದು ಸ್ಪಷ್ಟಪಡಿಸಿದರು.
ವಿಧಾನಪರಿಷತ್ತಿನಲ್ಲಿ ಇತ್ತೀಚೆಗೆ ನಡೆದ ಘಟನೆ ಎಲ್ಲರೂ ತಲೆತಗ್ಗಿಸುವಂತಹದ್ದು. ರಾಜ್ಯದ ರಾಜಕಾರಣ ಮತ್ತು ಸಂಸದೀಯ ನಡುವಳಿಕೆಗಳು ದೇಶಕ್ಕೆ ಮಾದರಿಯಾಗಿದ್ದವು. ಹೀಗಿರುವಾಗ ಎಲ್ಲರೂ ತಲೆತಗ್ಗಿಸುವಂತಹ ಘಟನೆ ನಡೆದಿರುವುದು ಖಂಡನಾರ್ಹ, ಅದು ಯಾವುದೇ ಪಕ್ಷವಾಗಲೀ ಈ ರೀತಿ ನಡೆದುಕೊಳ್ಳಬಾರದು. ಆದರೆ ಆ ಘಟನೆಗ ತುಪ್ಪ ಹಾಕಿದ್ದು ಮಾತ್ರ ಕಾಂಗ್ರೆಸ್ ಎನ್ನುವುದನ್ನು ಇಡೀ ದೇಶದ ಜನತೆ ಗಮನಿಸಿದೆ. ಇಂತಹ ನಡುವಳಿಕೆಗಳಿಂದಲೇ ಕಾಂಗ್ರೆಸ್ ಸರ್ವನಾಶ ಆಗುವ ದಿನಗಳು ದೂರವಿಲ್ಲ ಎಂದು ಸಚಿವ ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದರು.
ಚಿಕ್ಕಬಳ್ಳಾಪುರ ನಗರಸಭೆಯ ಅಧ್ಯಕ್ಷ ಡಿ.ಎಸ್.ಆನಂದರೆಡ್ಡಿ (ಬಾಬು) ಮತ್ತಿತರರು ಉಪಸ್ಥಿತರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.