ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಸಿದ್ಧ

Team Udayavani, Dec 13, 2020, 7:27 PM IST

ಜಿಲ್ಲೆಗೆ ಎತ್ತಿನಹೊಳೆ ನೀರು ಹರಿಸಲು ಸಿದ್ಧ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ನೀರಾವರಿ ಸೌಲಭ್ಯದಿಂದ ವಂಚಿತಗೊಂಡಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆ ಜಾರಿಗೊಳಿಸಲುಸರ್ಕಾರ ಬದ್ಧವಾಗಿದ್ದು, ಮುಂದಿನ ಮೂರೂವರೆ ವರ್ಷಗಳ ಅವಧಿಯಲ್ಲಿ ಜಿಲ್ಲೆಗೆ ಎತ್ತಿನಹೊಳೆ ಯೋಜನೆಯಡಿ ಕೆರೆಗಳಿಗೆ ನೀರು ಹರಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ. ಸುಧಾಕರ್‌ ಭರವಸೆ ನೀಡಿದರು.

ನಗರದಲ್ಲಿ ತಾಲೂಕು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್‌ನ 77ನೇ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ಸಿಎಂ ಬಳಿ ಮನವಿ: ಈ ಭಾಗದ ಜನರಿಗೆ ಎತ್ತಿನಹೊಳೆ ಯೋಜನೆ ಮೂಲಕ ನೀರಾವರಿ ಸೌಲಭ್ಯ ಕಲ್ಪಿಸಲು ಪ್ರತಿಯೊಂದು ಸಚಿವ ಸಂಪುಟ ಸಭೆಯಲ್ಲಿ ಒತ್ತಾಯಮಾಡುತ್ತಿದ್ದು, ಮುಂದಿನ ಆಯವ್ಯಯದಲ್ಲಿ ಈ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿ ಸಲು ಅಗತ್ಯ ಅನುದಾನ ಮೀಸಲಿಡಲು ಸಿಎಂ ಯಡಿಯೂರಪ್ಪ ಅವರ ಬಳಿ ಮನವಿ ಮಾಡಿದ್ದೇನೆ ಎಂದರು. ಕೋಲಾರ ಜಿಲ್ಲೆಗೆ ಕೆ.ಸಿ.ವ್ಯಾಲಿ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗೆಎಚ್‌.ಎನ್‌.ವ್ಯಾಲಿ ಯೋಜನೆ ಮೂಲಕ ಶುದ್ಧೀಕರಿಸಿದ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಜಿಲ್ಲೆಯ26ಕೆರೆಗಳಿಗೆ ನೀರು ಹರಿಸಲಾಗಿದೆ. ಈ ಹಿಂದೆಕೊಟ್ಟ ಮಾತಿನಂತೆ ನಡೆದುಕೊಂಡಿದ್ದೇನೆ ಎಂದರು.

ಪಿಎಲ್‌ಡಿಬ್ಯಾಂಕ್‌ ಸಣ್ಣಕಟ್ಟಡದಿಂದ ಸುಸಜ್ಜಿತಕಟ್ಟಡದಲ್ಲಿ ಕಾರ್ಯಕ್ರಮ ಮಾಡುತ್ತಿರುವುದು ಸಂತೋಷ ತಂದಿದೆ. ನಮ್ಮ ಆಶಯಕ್ಕೆ ಪೂರಕವಾಗಿ ಬ್ಯಾಂಕ್‌ನ ಆಡಳಿತ ಮಂಡಳಿ ಕೆಲಸ ಮಾಡಿದೆ ಎಂದು ಶ್ಲಾಘಿಸಿದರು.

ತಾಲೂಕಿನಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ಹೆಚ್ಚಾಗಿದ್ದು, ಅವರಿಗೆವಾಣಿಜ್ಯಬೆಳೆ ಬೆಳೆಯಲುಪ್ರೋತ್ಸಾಹ ನೀಡಬೇಕಿದೆ. ಆಪೆಲ್‌,ಡ್ರಾಗನ್‌ ಫ್ರೊಟ್‌, ವನೀಲಾ ಬೆಳೆಯುವ ಪ್ರಗತಿಪರ ರೈತರು ನಮ್ಮಲ್ಲಿದ್ದಾರೆ. ಅವರಿಗೆ ಬ್ಯಾಂಕ್‌ ಬೆನ್ನೆಲುಬು ಆಗಬೇಕಿದೆ. ದ್ರಾಕ್ಷಿ ಬೆಳೆಗಾರರಿಗೆ ಅನುಕೂಲ ಕಲ್ಪಿಸಲು ತೋಟಗಾರಿಕೆ ಆಧಾರಿತ ಕೈಗಾರಿಕೆಗಳನ್ನು ಸ್ಥಾಪಿಸಲು ಚಿಂತನೆ ನಡೆಸಿ ಈಗಾಗಲೇ ತೋಟಗಾರಿಕೆ ಸಚಿವರೊಂದಿಗೆ ಸಮಾಲೋಚನೆ ನಡೆಸಿದ್ದೇನೆ ಎಂದರು.

ಸಭೆಯಲ್ಲಿ ಜಿಪಂ ಮಾಜಿ ಅಧ್ಯಕ್ಷ ಕೇಶವರೆಡ್ಡಿ, ಬ್ಯಾಂಕ್‌ ಅಧ್ಯಕ್ಷ ಪಿ.ನಾಗೇಶ್‌, ರಾಜ್ಯ ಮಾವು ಅಭಿವೃದ್ಧಿ ಮಂಡಳಿ ಅಧ್ಯಕ್ಷ ಕೆ.ವಿ.ನಾಗರಾಜು, ತಾಪಂ ಅಧ್ಯಕ್ಷ ರಾಮಸ್ವಾಮಿ,ಮರಳಕುಂಟೆ ಕೃಷ್ಣಮೂರ್ತಿ, ಮುಖಂಡರಾದ ಗೋವಿಂದ ಸ್ವಾಮಿ, ಚನ್ನಕೇಶವ ರೆಡ್ಡಿ, ನಾಗೇಶ್‌, ಮೋಹನ್‌, ಪಿಳ್ಳಪ್ಪ,  ಮಿಲ್ಟನ್‌ ವೆಂಕಟೇಶ, ನಾರಾಯಣಪ್ಪ, ಅಶ್ವತ್ಥಪ್ಪ, ಕೊಂಡಪ್ಪ, ನಾಗೇಶ್‌, ಕೃಷ್ಣಮೂರ್ತಿ, ಚಂದ್ರಣ್ಣ, ರಾಜಣ್ಣ, ಕೃಷ್ಣಾರೆಡ್ಡಿ, ನಾರಾಯಣಪ್ಪ, ಆನಂದ್‌, ತಿರುಮಲಪ್ಪ, ಆನಂದ್‌, ಸಾವಿ ತ್ರಮ್ಮ, ಮಂಜುಳಾ, ನಾಗೇಶ್‌, ಗವಿಯಪ್ಪ, ವೆಂಕಟಸ್ವಾಮಿ, ಲವಣ್ಣ, ನಂಜುಂಡಪ್ಪ,ಕಾಳೇಗೌಡ, ಮುನಿಸ್ವಾಮಿ, ಪ್ರಸಾದ್‌ ಹಾಗೂ ಬ್ಯಾಂಕ್‌ ಸದಸ್ಯರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Ullala ಮಡ್ಯಾರು: ಕಾರ್ಮಿಕರಿಗೆ ಹಲ್ಲೆ; ಬಂಧನ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

Gangolli: 6 ದಿನ ಕಳೆದರೂ ಕಡಲಿಗೆ ಬಿದ್ದ ಮೀನುಗಾರನ ಸುಳಿವು ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

JDS leader hits at Chikkaballapura

Chikkaballapura: ಮಾರಕಾಯುಧಗಳಿಂದ ಜೆಡಿಎಸ್ ಮುಖಂಡನ ಭೀಕರ ಕೊಲೆ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

Arrested: ಮೂವರು ಬುರ್ಖಾಧಾರಿ ಕಳ್ಳಿಯರ ಬಂಧನ

ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

Chikkaballapur: ಮಾನಸಿಕ ಆರೋಗ್ಯಕ್ಕೆ “ಈಶಾ’ ಮಿರಾಕಲ್‌ ಆ್ಯಪ್‌: ಸದ್ಗುರು

9

Dr MC Sudhakar: ‘ಹೈಕಮಾಂಡ್‌ ಎಷ್ಟು ದಿನ ಜವಾಬ್ದಾರಿ ಕೊಡುತ್ತೋ ಅಷ್ಟು ದಿನ ಸಚಿವ’

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Naxal-encounter-Vikram-1

Naxal Package: “ಮೊದಲೇ ಪ್ಯಾಕೇಜ್‌ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Udupi: ಗೀತಾರ್ಥ ಚಿಂತನೆ-150: ತಣ್ತೀನಿಶ್ಚಯ ಬಳಿಕವೇ ಧ್ಯಾನ

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru; ಹಳೆ ನಾಣ್ಯ ಖರೀದಿ ಹೆಸರಲ್ಲಿ 58 ಲಕ್ಷ ರೂ. ವಂಚನೆ!

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Mangaluru: ಮುಡಾ ಕಚೇರಿಯಲ್ಲಿ ಮಧ್ಯವರ್ತಿಯಿಂದ ಕಡತ ತಿದ್ದುಪಡಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.