ಅಂಗನವಾಡಿ ಕೇಂದ್ರಕ್ಕೆ ಜಿಪಂ ಅಧ್ಯಕ್ಷ‌ರ ದಿಢೀರ್‌ ಭೇಟಿ


Team Udayavani, Feb 17, 2017, 4:11 PM IST

25-JOSH-9.2.jpg

ಚಿಕ್ಕಬಳ್ಳಾಪುರ: ತಾಲೂಕಿನ ಕೋರೇನಹಳ್ಳಿ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಗುರುವಾರ ಅನಿರೀಕ್ಷಿತ ಭೇಟಿ ನೀಡಿದ ಜಿಪಂ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜೆ.ಮಂಜುನಾಥ ನೇತೃತ್ವದ ಅಧಿಕಾರಿಗಳ ತಂಡ, ಕೇಂದ್ರದ ಮೂಲ ಸೌಕರ್ಯಗಳನ್ನು ಪರಿಶೀಲಿಸಿತು.

ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆಯ ಜೊತೆಗೆ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಕಳಪೆ ಗುಣಮಟ್ಟದ ಆಹಾರ ವಿತರಿಸಲಾಗುತ್ತಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ ನೇತೃತ್ವದಲ್ಲಿ ಜಿಪಂ ಹಿರಿಯ ಅಧಿಕಾರಿಗಳ ತಂಡ ಕೋರೇನಹಳ್ಳಿ ಅಂಗನವಾಡಿ ಕೇಂದ್ರಕ್ಕೆ ದಿಢೀರ್‌ ಭೇಟಿ ನೀಡಿತ್ತು.

ದಾಖಲೆಗಳ ಪರಿಶೀಲನೆ: ಈ ವೇಳೆ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ವಿತರಣೆ ಮಾಡಲು ಸರಬರಾಜಾಗಿರುವ ಪೌಷ್ಟಿಕ ಆಹಾರದ ಪ್ಯಾಕೇಟ್‌ಗಳ ದಾಸ್ತಾನು ಕುರಿತ ಸ್ಟಾಕ್‌ಬುಕ್‌ ಹಾಗೂ ಆಹಾರ ಪದಾರ್ಥಗಳ ಗುಣಮಟ್ಟವನ್ನು ತಂಡ ಪರಿಶೀಲಿಸಿತು. ಅಂಗನವಾಡಿ ವ್ಯಾಪ್ತಿಯಲ್ಲಿರುವ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಕಾಲಕಾಲಕ್ಕೆ ಪೌಷ್ಟಿಕ ಆಹಾರ ವಿತರಿಸಬೇಕು. ಕಡ್ಡಾಯವಾಗಿ ಪೌಷ್ಟಿಕ ಆಹಾರ ಪಡೆದ ಫ‌ಲಾನುಭವಿಗಳಿಂದ ಸಹಿ ಪಡೆದುಕೊಳ್ಳಬೇಕೆಂದು ಅಂಗನವಾಡಿ ಕಾರ್ಯಕರ್ತೆಗೆ ಜಿಪಂ ಅಧಿಕಾರಿಗಳು ಸೂಚಿಸಿದರು.

ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ: ಇದೇ ವೇಳೆ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೋರೇನಹಳ್ಳಿ ಅಂಗನವಾಡಿ ಕೇಂದ್ರಕ್ಕೆ ನೂತನವಾಗಿ ನಿರ್ಮಿಸಲಾಗಿರುವ ಕಾಂಪೌಂಡ್‌, ಕಾಲುವೆ ಅಭಿವೃದ್ಧಿ ಕಾಮಗಾರಿಗಳು ಹಾಗೂ ಸ್ವತ್ಛ ಭಾರತ ಮಿಷನ್‌ ಯೋಜನೆಯಡಿ ನಿರ್ಮಿಸಲಾಗಿರುವ ಶೌಚಾಲಯಗಳ ಕಟ್ಟಡದ ಗುಣಮಟ್ಟವನ್ನು ತಂಡ ಪರಿಶೀಲಿಸಿತು. ಗ್ರಾಮದ ನೈರ್ಮಲ್ಯಕ್ಕಾಗಿ ಹಾಗೂ ಬಯಲು ಬಹಿರ್ದೆಸೆ ಮುಕ್ತ ಗ್ರಾಮವಾಗಿಸಲು ಪ್ರತಿಯೊಂದು ಮನೆಗೂ ವೈಯಕ್ತಿಕ ಶೌಚಾಲಯಗಳನ್ನು ನಿರ್ಮಿಸಿಕೊಳ್ಳಲು ಗ್ರಾಮಸ್ಥರಲ್ಲಿ ಅರಿವು ಮೂಡಿಸುವಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ ಸೂಚಿಸಲಾಯಿತು.

ಅಂಗನವಾಡಿ ಕೇಂದ್ರಗಳಿಗೆ ಸ್ವಂತ ಕಟ್ಟಡ: ಅಂಗನವಾಡಿ ಪರಿಶೀಲನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಜಿಪಂ ಅಧ್ಯಕ್ಷ ಪಿ.ಎನ್‌.ಕೇಶವರೆಡ್ಡಿ, ಜಿಲ್ಲೆಯಲ್ಲಿ ಸ್ವಂತ ಕಟ್ಟಡ ಇಲ್ಲದ ಅಂಗನವಾಡಿ ಕೇಂದ್ರಗಳಿಗೆ ಶೀಘ್ರದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಿಸಿಕೊಡಲಾಗುವು ಎಂದು ಹೇಳಿದರು. 

ಪ್ರಾಥಮಿಕ ಶಾಲೆಗಳಲ್ಲೂ ಕಟ್ಟಡ ನಿರ್ಮಾಣ: ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಸ್ವಂತ ಕಟ್ಟಡ ಹಾಗೂ ನಿವೇಶನ ಇಲ್ಲದ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಕಟ್ಟಡಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಉದ್ಯೋಗ ಖಾತ್ರಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಅಂಗನವಾಡಿ ಕೇಂದ್ರಗಳಿಗೆ ಕಟ್ಟಡ, ಕಾಂಪೌಂಡ್‌ ಹಾಗೂ ಸ್ವತ್ಛ ಭಾರತ ಯೋಜನೆಯಡಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನಿವೇಶನದ ಕೊರತೆ ಇರುವ ಕಡೆ ಪ್ರಾಥಮಿಕ ಶಾಲೆಗಳ ಆವರಣಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಡಾ.ಸಿ.ಸಿದ್ದರಾಮಯ್ಯ, ಮುಖ್ಯ ಲೆಕ್ಕಾಧಿಕ್ಷಕ ಡಾ.ಎಂ.ಎಚ್‌.ನಾಗೇಶ್‌ ಸೇರಿದಂತೆ ಜಿಪಂ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಸ್ಥಳೀಯ ಗ್ರಾಪಂ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಪೌಷ್ಟಿಕ ಆಹಾರ ಗುಣಮಟ್ಟದಿಂದ ಕೂಡಿರಬೇಕು. ಈ ಬಗ್ಗೆ ಗುತ್ತಿಗೆದಾರರು ಬೇಜವಾಬ್ದಾರಿ ತೋರಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಂಗನವಾಡಿ ಕೇಂದ್ರಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಏನೇ ತೊಂದರೆಯಾದರೂ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು.
-ಪಿ.ಎನ್‌.ಕೇಶವರೆಡ್ಡಿ, ಜಿಪಂ ಅಧ್ಯಕ್ಷರು 

ಟಾಪ್ ನ್ಯೂಸ್

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

11

Gowribidanur: ಸಮಸ್ಯೆಗಳ ಆಗರ ಗೌರಿಬಿದನೂರು ಬಸ್‌ ನಿಲ್ದಾಣ  

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Chikkaballapur: ಬ್ಯಾಂಕ್‌ ಖಾತೆಯಿಂದ ಹಣ ಲೂಟಿ ಮಾಡಿದ್ದ ಅಂತಾರಾಜ್ಯ ಸೈಬರ್‌ ವಂಚಕನ ಬಂಧನ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Sidlaghatta: ಸ್ಥಳಾಂತರಕ್ಕೆ ಎದುರು ನೋಡುತ್ತಿದೆ ಬಸ್‌ ನಿಲ್ದಾಣ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

Gudibande: ಹೆಸರಿಗಷ್ಟೇ ಬಸ್‌ ನಿಲ್ದಾಣ; ಬಸ್‌ಗಳೇ ಬರಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Brahmavar

Siddapura: ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.