ಶಿಥಿಲ ವಾಣಿಜ್ಯ ಮಳಿಗೆ ನೆಲಸಮ
ಚಿಕ್ಕಜಾಜೂರು ಗ್ರಾಪಂನಿಂದ 75 ಲಕ್ಷ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ
Team Udayavani, Nov 7, 2019, 1:01 PM IST
ಚಿಕ್ಕಜಾಜೂರು: ಸುಮಾರು 60 ವರ್ಷಗಳ ಹಿಂದೆ ನಿರ್ಮಾಣವಾದ ಸ್ಥಳೀಯ ಗ್ರಾಮ ಪಂಚಾಯತ್ ಅಧೀನದಲ್ಲಿದ್ದ ವಾಣಿಜ್ಯ ಮಳಿಗೆಗಳು ಸಂಪೂರ್ಣ ಶಿಥಿಲಾವಸ್ಥೆ ತಲುಪಿದ್ದವು. ಈ ಹಿನ್ನೆಲೆಯಲ್ಲಿ ಜೆಸಿಬಿ ಮೂಲಕ ಶಿಥಿಲಗೊಂಡ ಕಟ್ಟಡಗಳನ್ನು ನೆಲಸಮ ಮಾಡಲಾಯಿತು.
ಗ್ರಾಮ ಪಂಚಾಯತ್‌ನವರು ಮಳಿಗೆಗಳನ್ನು ಕೆಡವಿರುವುದರಿಂದ ಮಳಿಗೆಗಳ ಮುಂದೆ ಬೀದಿ ವ್ಯಾಪಾರ ಮಾಡಿಕೊಂಡು ಜೀವನ ನಡೆಸುತ್ತಿದ್ದ ಕುಟುಂಬಗಳು ಕಂಗಾಲಾಗಿವೆ. ಮಳಿಗೆಗಳು ಮತ್ತೆ ನಿರ್ಮಾಣವಾಗುವವರೆಗೂ ಎಲ್ಲಿ ವ್ಯಾಪಾರ ಮಾಡಬೇಕು ಎಂದು ಅಳಲು ವ್ಯಕ್ತಪಡಿಸಿದರು.
ವ್ಯಾಪಾರವನ್ನು ನಂಬಿಕೊಂಡು ಸಾಲ ಪಡೆದು ವ್ಯಾಪಾರ ಮಾಡುತ್ತಿದ್ದೇವೆ. ಅಲ್ಪ ಸ್ವಲ್ಪ ಹಣವನ್ನುಕೂಡಿಟ್ಟು ತಿಂಗಳ ಕೊನೆಗೆ ಸಾಲ ತೀರಿಸಿ ಮಿಕ್ಕುಳಿದ ಹಣದಲ್ಲಿ ಮನೆ ಖರ್ಚು ನೋಡಿಕೊಂಡು ಜೀವನ ಮಾಡುತ್ತಿದ್ದೆವು. ಈಗ ಸಾಲಗಾರರಿಗೆ ಹೇಗೆ ಹಣ ಹೊಂದಿಸುವುದು, ಕುಟುಂಬದ ನಿರ್ವಹಣೆ ಹೇಗೆ ಮಾಡಬೇಕೆಂಬುದೇ ಗೊತ್ತಾಗುತ್ತಿಲ್ಲ.
ಹಾಗಾಗಿ ಮಳಿಗೆ ನಿರ್ಮಾಣ ಕಾಮಗಾರಿಯನ್ನು ಆದಷ್ಟು ಬೇಗ ಮುಗಿಸಿಕೊಡಬೇಕು ಎಂದು ಬೀದಿಬದಿ ವ್ಯಾಪಾರಿಗಳಾದ ಫಾಲಾಕ್ಷಯ್ಯ, ಕೆಂಚಪ್ಪ, ಧರಣೇಶ್, ಯೋಗೀಶ್, ವಾಸುದೇವಮೂರ್ತಿ, ಈರಮ್ಮ, ತರಕಾರಿ ಪ್ರಸನ್ನ, ತಿಮ್ಮಣ್ಣ, ಸಂತೋಷ್, ರಾಜಶೇಖರ್, ಜಯಮ್ಮ, ಭಾರತಮ್ಮ, ಮಾಲಾ,ಬಸವರಾಜಪ್ಪ ತಿಳಿಸಿದರು.
2 ತಿಂಗಳ ಹಿಂದೆಯೇ ಮಾಹಿತಿ ನೀಡಿದ್ದೆವು: ಮಳಿಗೆ ನೆಲಸಮಗೊಳಿಸಿದ ಬಗ್ಗೆ ಪತ್ರಿಕೆಯೊಂದಿಗೆ ಮಾತನಾಡಿದ ಚಿಕ್ಕಜಾಜೂರು ಗ್ರಾಮ ಪಂಚಾಯತ್ ಅಧ್ಯಕ್ಷ ಡಿ.ಸಿ. ಮೋಹನ್, ಆರು ದಶಕಗಳ ಹಿಂದೆ ಮಂಡಲ ಪಂಚಾಯತ್ ನಿರ್ಮಿಸಿದ್ದ ಸುಮಾರು 18 ಮಳಿಗೆಗಳು ಹಾಗೂ ನಂತರದ ವರ್ಷಗಳಲ್ಲಿ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನಿರ್ಮಾಣವಾದ 9 ಮಳಿಗೆಗಳು ಸಂಪೂರ್ಣ ಶಿಥಿಲವಾಗಿದ್ದವು. ಮೇಲ್ಛಾವಣಿಯ ಹೆಂಚು, ತಗಡಿನ ಶೀಟ್‌ಗಳು ಮುರಿದು ಹಾಳಾಗಿದ್ದವು.
ಮಳೆ ಬಂದರೆ ಮಳಿಗೆಗಳು ಸೋರುತ್ತಿವೆ. ಕೆಲವು ಕೊಠಡಿಗಳ ಕಿಟಕಿ, ಬಾಗಿಲುಗಳು ಮುರಿದು ಹೋಗಿವೆ. ಗೋಡೆಗಳು ಬಿರುಕು ಬಿಟ್ಟಿವೆ ಎಂದು ಸಾರ್ವಜನಿಕವಾಗಿ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಹಳೆಯ ಮಳಿಗೆಗಳನ್ನು ನೆಲಸಮ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದರು.
ಗ್ರಾಮ ಪಂಚಾಯತ್ ಸರ್ವ ಸದಸ್ಯರ ಸಭೆಯಲ್ಲಿ ಶಿಥಿಲಾವಸ್ಥೆಯ ಕಟ್ಟಡಗಳನ್ನು ಕೆಡವಲು ತೀರ್ಮಾನಿಸಲಾಗಿತ್ತು. ಈ ಬಗ್ಗೆ ಮಳಿಗೆದಾರರಿಗೆ ಎರಡು ತಿಂಗಳ ಮೊದಲೇ ಮಾಹಿತಿ ನೀಡಲಾಗಿತ್ತು. ಹೊಳಲ್ಕೆರೆ ಶಾಸಕ ಎಂ. ಚಂದ್ರಪ್ಪ ನೂತನ ಮಳಿಗೆಗಳ ಪುನರ್ ನಿರ್ಮಾಣಕ್ಕೆ ಮೊದಲ ಹಂತದಲ್ಲಿ 50 ಲಕ್ಷ ರೂ. ನೀಡುವುದಾಗಿ ಭರವಸೆ ನೀಡಿದ್ದಾರೆ. ಅಲ್ಲದೇ ಗ್ರಾಪಂನ 14ನೇ ಹಣಕಾಸು ಮತ್ತು ಇನ್ನಿತರ ಯೋಜನೆಗಳ ಅಡಿ 25 ಲಕ್ಷ ರೂ. ನೀಡಲಾಗುವುದು. ಟೆಂಡರ್ ಕರೆದು ಕಟ್ಟಡ ನಿರ್ಮಾಣ ಮಾಡಲಾಗುವುದು. ಸ್ಥಳೀಯರಿಗೆ ವ್ಯಾಪಾರ, ವ್ಯವಹಾರಕ್ಕಾಗಿ ಅನುಕೂಲವಾಗಲೆಂದು ಸುಮಾರು 75 ಲಕ್ಷರೂ ವ್ಯಯಿಸಿ ಸುಸಜ್ಜಿತವಾದ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಿ ಕೊಡಲಾಗುವುದು. ಮಳಿಗೆ ಕಾಮಗಾರಿ ಮುಗಿದ ನಂತರ ಸರ್ವ ಸದಸ್ಯರ ಸಭೆಯ ತೀರ್ಮಾನದಂತೆ ಈ ಮೊದಲು ವ್ಯಾಪಾರ ಮಾಡುತ್ತಿದ್ದವರಿಗೆ ಮೊದಲ ಆದ್ಯತೆ ನೀಡಲಾಗುವುದು. ಉಳಿದ ಮಳಿಗೆಗಳನ್ನು ಹರಾಜಿನ ಮೂಲಕ ಬಾಡಿಗೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.