ನೆರೆ ಸಂತ್ರಸ್ತರಿಗೆ ದಿನಬಳಕೆ ವಸ್ತು ವಿತರಣೆ

ಕುಂಟಿನಮಡು ಗ್ರಾಮಸ್ಥರಿಂದ ಬಟ್ಟೆ, ಹೊದಿಕೆ, ಚಪಾತಿ, ಚಟ್ನಿಪುಡಿ, ನೀರಿನ ಬಾಟಲ್ ರವಾನೆ

Team Udayavani, Aug 15, 2019, 12:25 PM IST

15-Agust-17

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಕುಂಟಿನಮಡು ಗ್ರಾಮಸ್ಥರು ನೆರೆ ಸಂತ್ರಸ್ತರಿಗೆ ವಿವಿಧ ಪದಾರ್ಥಗಳನ್ನು ನೀಡಿದರು.

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಕುಂಟಿನಮಡು ಗ್ರಾಮಸ್ಥರು 1.50 ಲಕ್ಷ ರೂ.ಗೂ ಅಧಿಕ ಮೊತ್ತದ ದಿನಬಳಕೆ ವಸ್ತುಗಳನ್ನು ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಂಗಮೇಶ್ವರಪೇಟೆ, ಬಾಳೆಹೊನ್ನೂರು ಪ್ರದೇಶಗಳಲ್ಲಿ ನೆರೆಯಿಂದ ಸೂರು ಕಳೆದುಕೊಂಡ ಸಂತ್ರಸ್ತರಿಗೆ ನೀಡಿದರು.

ಹೊಸ ಸೀರೆ, ಮಕ್ಕಳ ಉಡುಪು, ಉಲ್ಲನ್‌ ಮತ್ತು ಕಾಟನ್‌ ಹೊದಿಕೆಗಳು, ಪಂಚೆ, ಟವೆಲ್ಲು, ಐದು ಸಾವಿರ ಚಪಾತಿ, ಕೊಬ್ಬರಿಯಿಂದ ತಯಾರಿಸಿದ ಚಟ್ನಿ ಪುಡಿ, ನೀರಿನ ಬಾಟಲಿಗಳನ್ನು ವಾಹನದಲ್ಲಿ ತುಂಬಿಕೊಂಡು ಆಗಮಿಸಿದ್ದ ಗ್ರಾಮಸ್ಥರು, ಸಂಗಮೇಶ್ವರ ಪೇಟೆಯ ವಿದ್ಯಾರ್ಥಿ ನಿಲಯದ ಸಂತ್ರಸ್ತರ ಪರಿಹಾರ ಕೇಂದ್ರ, ಖಾಂಡ್ಯ, ಮಸಿಗದ್ದೆ ಮತ್ತು ಬಾಳೆಹೊನ್ನೂರಿನ ಸಮುದಾಯ ಭವನಗಳ ಸಂತ್ರಸ್ತರಿಗೆ ಜನಪ್ರತಿನಿಧಿಗಳ ಮೂಲಕ ವಿತರಿಸಿ ಮಾನವೀಯತೆ ಮೆರೆದರು.

ಕುಂಟಿನಮಡು ಗ್ರಾಮಸ್ಥರ ಪರವಾಗಿ ಸಾಮಗ್ರಿಗಳೊಂದಿಗೆ ಆಗಮಿಸಿದ್ದ ಗ್ರಾಮದ ಯುವ ಮುಖಂಡರಾದ ಕೆ.ಎಂ.ಸಂತೋಷ್‌, ಕೆ.ಎಸ್‌.ನಟರಾಜ್‌, ಕೆ.ಎಂ.ರವಿಕುಮಾರ್‌, ಅಣ್ಣಪ್ಪ, ದರ್ಶನ್‌, ಕುಮಾರ್‌, ವಿನಾಯಕ, ಹರ್ಷ ಹಾಗೂ ತಂಡದ ಸದಸ್ಯರು ಸಂಗಮೇಶ್ವರಪೇಟೆ, ಮಸಿಗದ್ದೆ ಮತ್ತು ಖಾಂಡ್ಯ ಸಂತ್ರಸ್ತರ ಕೇಂದ್ರಗಳಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ ಮೂಲಕ ಸಂತ್ರಸ್ತರಿಗೆ ಹಸ್ತಾಂತರಿಸಿದರು.

ಬಾಳೆಹೊನ್ನೂರಿನ ಸಂತ್ರಸ್ತರ ಕೇಂದ್ರದಲ್ಲಿ ಉಳಿದ ಎಲ್ಲ ಸಾಮಗ್ರಿಗಳನ್ನು ವಿತರಿಸಲು ಶಾಸಕ ಟಿ.ಡಿ.ರಾಜೇಗೌಡ, ವಿಧಾನ ಪರಿಷತ್‌ ಮಾಜಿ ಶಾಸಕಿ ಎ.ವಿ.ಗಾಯತ್ರಿ ಶಾಂತೇಗೌಡ ಅವರ ಮೂಲಕ ತರೀಕೆರೆ ವಿಭಾಗದ ಎಸಿ ರೂಪಾ ಅವರಿಗೆ ಹಸ್ತಾಂತರಿಸಿದರು. ಕುಂಟಿನಮಡು ಗ್ರಾಮಸ್ಥರ ಸೇವಾ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು.

ತಂಡ ರಚಿಸಿಕೊಂಡು ಸಂತ್ರಸ್ತರ ಎಲ್ಲ ಪರಿಹಾರ ಕೇಂದ್ರಗಳಿಗೆ ಸಾಮಗ್ರಿ ವಿತರಿಸಲು ಕಾಂಗ್ರೆಸ್‌ ಮುಖಂಡರಾದ ಎಸ್‌.ಪೇಟೆ ಸತೀಶ್‌, ಜಯಶೀಲ, ಗುರುಮೂರ್ತಿ, ಮಹೇಶ್‌, ಗಣೇಶ್‌, ರಘು, ಮಸಿಗದ್ದೆ ಸತೀಶ್‌, ಮಂಜುನಾಥ್‌, ಸುಧಾಕರ್‌, ನಾರ್ಬರ್‌ ಪಿಂಟೋ, ಪ್ರಸನ್ನ, ಮೂರ್ತಿ ನೆರವಾದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಡಾ| ಅಂಶುಮಂತ್‌, ಜಿಲ್ಲಾ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಚನ್ನಗಿರಿಗೌಡ, ಹಾಲಿ ಸದಸ್ಯರಾದ ಸದಾಶಿವ, ಚಂದ್ರಮ್ಮ, ತಾಪಂ ಸದಸ್ಯರಾದ ನಾಗೇಶ್‌, ಪ್ರವೀಣ್‌, ಹೋಬಳಿ ಕಾಂಗ್ರೆಸ್‌ ಅಧ್ಯಕ್ಷ ಹನೀಫ್‌, ಮುಖಂಡ ಹಿರಿಯಣ್ಣ, ಸುಧಾಕರ್‌, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಇಂದಿರಾ, ಸದಸ್ಯರಾದ ಆಶಾ, ಸುಚಿತ್ರಾ, ಜಿಲ್ಲಾ ಕಾಂಗ್ರೆಸ್‌ ಕಾರ್ಯದರ್ಶಿ ಹಿರೇಮಗಳೂರು ಪುಟ್ಟಸ್ವಾಮಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.