ಬಿಜೆಪಿ ಜನ ಸಾಮಾನ್ಯರ ಪಕ್ಷ: ಸಿ.ಟಿ. ರವಿ
ಪ್ರಜಾಪ್ರಭುತ್ವದ ಮೇಲೆ ಬಿಜೆಪಿಗಿದೆ ನಂಬಿಕೆವಂಶಪಾರಂಪರ್ಯ ರಾಜಕಾರಣ ನಡೆಯಲ್ಲ
Team Udayavani, Jul 8, 2019, 3:27 PM IST
ಚಿಕ್ಕಮಗಳೂರು: ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ನಡೆಸಿದರು
ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟಿರುವ ಪಕ್ಷ ಬಿಜೆಪಿ. ಆದರೆ ಕೆಲವು ಪಕ್ಷಗಳು ಹೆಸರಿಗೆ ಪ್ರಜಾಪ್ರಭುತ್ವ ಎಂದು ಹೇಳಿಕೊಂಡರೂ ಆಂತರಿಕವಾಗಿ ಪ್ರಜಾಪ್ರಭುತ್ವ ವ್ಯವಸ್ಥೆ ಬಿಟ್ಟು ವಂಶಪಾರಂಪರ್ಯದ ವ್ಯವಸ್ಥೆ ಅಳವಡಿಸಿಕೊಂಡಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದರು.
ನಗರದಲ್ಲಿ ಬಿಜೆಪಿ ಸದಸ್ಯತ್ವ ಆಂದೋಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಪ್ರಜಾಪ್ರಭುತ್ವ ಗಟ್ಟಿಗೊಳಿಸುವ ಆಶಯ ಹೊಂದಿ ಸದಸ್ಯತ್ವ ಆಂದೋಲನ ನಡೆಸುತ್ತಿದ್ದೇವೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬರಿಗೂ ಮತದಾನದ ಹಕ್ಕನ್ನು ನೀಡುವ ಮೂಲಕ ಎಲ್ಲರಿಗೂ ಅಧಿಕಾರ ದೊರೆಯಬೇಕೆಂಬ ಆಶಯವನ್ನು ಡಾ.ಬಿ.ಆರ್.ಅಂಬೇಡ್ಕರ್ ಹೊಂದಿದ್ದರು. ಅದೇ ರೀತಿಯ ಅವಕಾಶವನ್ನು ಸಂವಿದಾನದಲ್ಲಿಯೂ ನೀಡಿದರು. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಾಮಾನ್ಯ ಜನರನ್ನು ನೇತಾರರನ್ನಾಗಿ ಮಾಡಲಿಲ್ಲ. ಬದಲಾಗಿ ಕುಟುಂಬದ ಕುಡಿಗಳನ್ನು ನೇತಾರರನ್ನಾಗಿ ಮಾಡುತ್ತಿದ್ದಾರೆ. ಸಾಮಾನ್ಯ ಜನರ ನಡುವೆ ಬದುಕಿ, ಅವರ ಪರವಾಗಿರುವವರನ್ನು ನಾಯಕರನ್ನಾಗಿಸುವ ಉದ್ದೇಶದಿಂದ ಬಿಜೆಪಿ ಸದಸ್ಯತ್ವ ಆಂದೋಲನ ನಡೆಸುತ್ತಿದೆ ಎಂದು ಹೇಳಿದರು.
ಕೇವಲ 10 ಜನ ಸದಸ್ಯರನ್ನು ಹೊಂದಿದ್ದ ಪಕ್ಷ ಬಿಜೆಪಿ. ಈಗ 11 ಕೋಟಿ ಸದಸ್ಯರನ್ನು ಹೊಂದಿರುವ, ದೇಶದಲ್ಲಿ ಅತೀ ಹೆಚ್ಚು ಸಂಸದರು, ಅತೀ ಹೆಚ್ಚು ಶಾಸಕರು, ಅತೀ ಹೆಚ್ಚು ಎಸ್.ಸಿ., ಎಸ್.ಟಿ., ಮಹಿಳಾ ಶಾಸಕರನ್ನು ಹೊಂದಿರುವ ದೇಶದಲ್ಲಿ ಅತೀ ಹೆಚ್ಚು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಪಕ್ಷವಾಗಿ ಬೆಳೆದಿದೆ. ಈ ಬಾರಿ ರಾಜ್ಯದಲ್ಲಿ 50 ಲಕ್ಷ, ದೇಶದಲ್ಲಿ 5 ಕೋಟಿ ಸದಸ್ಯರನ್ನು ನೋಂದಾಯಿಸುವ ಗುರಿ ಹೊಂದಲಾಗಿದೆ. ಸದಸ್ಯತ್ವವನ್ನು ಆನ್‌ಲೈನ್ ಮೂಲಕ ಕ್ರಮಬದ್ಧವಾಗಿ ಮಾಡಿಕೊಳ್ಳಲಾಗುತ್ತಿದೆ ಎಂದರು. 1988ರಲ್ಲಿ ಆಲ್ದೂರಿನ ಆಟೋ ಚಂದ್ರು ಎಂಬುವವರು ನನ್ನ ಸದಸ್ಯತ್ವವನ್ನು ಬಿಜೆಪಿಯಲ್ಲಿ ಮಾಡಿಸಿದ್ದರು. ಆ ನಂತರ ನಾನು ಶಾಸಕ, ಸಚಿವನಾಗಲು ಸಾಧ್ಯವಾಯಿತು. ಈಗ ನಾನು ಸದಸ್ಯತ್ವ ಮಾಡಿಸುವವರು ಮುಂದಿನ ದಿನಗಳಲ್ಲಿ ಶಾಸಕ, ಸಚಿವ, ಪ್ರಧಾನಮಂತ್ರಿಯೂ ಆಗಬಹುದು. ಬಿಜೆಪಿಯಲ್ಲಿ ಪ್ರತಿಯೊಬ್ಬರಿಗೂ ಅವಕಾಶವಿದೆ. ಯಾರು ಪಕ್ಷಕ್ಕಾಗಿ ನಿಷ್ಠಾವಂತರಾಗಿ ದುಡಿಯುತ್ತಾರೋ ಅವರೆಲ್ಲರಿಗೂ ಪಕ್ಷ ಒಂದಲ್ಲ ಒಂದು ಅವಕಾಶವನ್ನು ನೀಡುತ್ತದೆ ಎಂದು ಹೇಳಿದರು.
ಜಿಲೇಬಿ ಹಂಚಿಕೆ: ಸದಸ್ಯತ್ವ ಆಂದೋಲನದ ಅಂಗವಾಗಿ ನಗರದ ಮಲ್ಲಂದೂರು ರಸ್ತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರುಗಳು ಸದಸ್ಯತ್ವ ಪಡೆದುಕೊಂಡವರು ಹಾಗೂ ಸಾರ್ವಜನಿಕರಿಗೆ ಜಿಲೇಬಿ ಹಂಚುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು. ಜಿಲ್ಲಾ ಬಿಜೆಪಿ ವಕ್ತಾರ ವರಸಿದ್ದಿ ವೇಣುಗೋಪಾಲ್, ಸಮೃದ್ ಪೈ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.