ಕಂದಾಯ ಭೂಮಿ ಗುರುತಿಸಲು ಸರ್ವೇ

ಅರಣ್ಯ-ಕಂದಾಯ ಇಲಾಖೆಯಿಂದ ಜಂಟಿ ಸರ್ವೇ•ಯಾವುದೇ ಗೊಂದಲ ಬೇಡ

Team Udayavani, May 17, 2019, 4:18 PM IST

Udayavani Kannada Newspaper

ಚಿಕ್ಕಮಗಳೂರು: ಕಂದಾಯ ಭೂಮಿಯನ್ನು ಗುರುತಿಸುವ ಉದ್ದೇಶದಿಂದ ಜಿಲ್ಲೆಯಲ್ಲಿ ಅರಣ್ಯ ಮತ್ತು ಕಂದಾಯ ಇಲಾಖೆಯಿಂದ ಜಂಟಿ ಸರ್ವೇ ಕಾರ್ಯ ನಡೆಸಲಾಗುತ್ತಿದೆಯೇ ಹೊರತು ಬೇರಾವುದೇ ಉದ್ದೇಶದಿಂದ ಅಲ್ಲ ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಸ್ಪಷ್ಟಪಡಿಸಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಂಟಿ ಸರ್ವೇ ಕಾರ್ಯ ನಡೆಸುತ್ತಿರುವ ಕುರಿತು ಯಾವುದೇ ಗೊಂದಲ ಬೇಡ. ಸರ್ಕಾರಿ ಕಾರ್ಯಕ್ರಮಗಳಿಗೆ ಜಿಲ್ಲೆಯಲ್ಲಿ ಅಗತ್ಯವಿರುವ ಭೂಮಿಯೇ ದೊರೆಯುತ್ತಿಲ್ಲ. ಹೀಗಾಗಿ ಕಳೆದ ಹಲವು ವರ್ಷಗಳಿಂದ ಹಲವಾರು ಯೋಜನೆಗಳು ನೆನಗುದಿಗೆ ಬಿದ್ದಿವೆ. ಈ ಹಿನ್ನೆಲೆಯಲ್ಲಿ ಕಂದಾಯ ಭೂಮಿಯನ್ನು ಗುರುತಿಸಿ ಆ ಭೂಮಿಯನ್ನು ಸರ್ಕಾರಿ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಲು ಅನುಕೂಲವಾಗಲಿ ಎಂಬ ಉದ್ದೇಶದಿಂದ ಜಂಟಿ ಸರ್ವೇ ನಡೆಸಲಾಗುತ್ತಿದೆ ಎಂದು ತಿಳಿಸಿದರು.

ಜಂಟಿ ಸರ್ವೇ ನಡೆಸಿ ಕಂದಾಯ ಮತ್ತು ಅರಣ್ಯ ಭೂಮಿಯನ್ನು ಗುರುತಿಸದ ಕಾರಣ 94ಎ, 94ಬಿ, 94ಸಿ, 94ಸಿಸಿಗಳಲ್ಲಿ ಅರ್ಜಿ ಸಲ್ಲಿಸಿರುವವರಿಗೆ ಮಂಜೂರಾತಿ ನೀಡಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಯ ಹಲವೆಡೆಗಳಲ್ಲಿ ಅಂಗನವಾಡಿ, ಆಸ್ಪತ್ರೆ, ಶಾಲಾ ಕಟ್ಟಡಗಳು ಸೇರಿದಂತೆ ಸರ್ಕಾರಿ ಕಚೇರಿಗಳ ಕಟ್ಟಡ ನಿರ್ಮಿಸಲು ಭೂಮಿ ಲಭ್ಯವಿಲ್ಲದಂತಾಗಿದೆ. ಭದ್ರಾ ಅಣೆಕಟ್ಟು, ಮಸಗಲಿ, ಸಾರಗೋಡು ಅರಣ್ಯಗಳ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಸಾಧ್ಯವಾಗಿಲ್ಲ. ಜಾಗವಿಲ್ಲದಿರುವುದರಿಂದಾಗಿ ಕಳೆದ 15 ವರ್ಷಗಳಿಂದಲೂ ಇವರಿಗೆ ಪುನರ್ವಸತಿ ಕಲ್ಪಿಸಲು ಆಗಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಜಂಟಿ ಸರ್ವೇ ಅಗತ್ಯವಾಗಿತ್ತು ಎಂದು ತಿಳಿಸಿದರು.

ಈಗಾಗಲೇ ಜಂಟಿ ಸರ್ವೇ ಕಾರ್ಯವನ್ನು ಆರಂಭಿಸಲಾಗಿದೆ. 2 ರಿಂದ 3 ತಿಂಗಳುಗಳಲ್ಲಿ ಜಂಟಿ ಸರ್ವೇ ಕಾರ್ಯ ಪೂರ್ಣಗೊಳ್ಳಲಿದೆ. ಕಂದಾಯ ಭೂಮಿಯನ್ನು ಗುರುತಿಸಿ ಅದನ್ನು ಕಂದಾಯ ಇಲಾಖೆಗೆ ವಾಪಸ್‌ ಪಡೆದು ಅಗತ್ಯ ಯೋಜನೆಗಳಿಗೆ ಬಳಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಶೀಘ್ರ ಚಾಲನೆ: ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ವಿವಿಧ ಕಾರಣಗಳಿಂದಾಗಿ ನೆನಗುದಿಗೆ ಬಿದ್ದಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ಹೇಳಿದರು.

ಚಿಕ್ಕಮಗಳೂರು-ಸಕಲೇಶಪುರ ರೈಲ್ವೆ ಯೋಜನೆ, ತುಮಕೂರು-ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ, ಮಳಲೂರು ಏತ ನೀರಾವರಿ, ಕರಗಡ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳು ಹಲವು ವರ್ಷಗಳಿಂದ ನೆನಗುದಿಗೆ ಬಿದ್ದಿವೆ. ಈ ಪೈಕಿ ಕರಗಡ ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಈಗಾಗಲೇ ವೇಗ ನೀಡಲಾಗಿದೆ. ಈಗ ನಾಲ್ಕು ಹಿಟಾಚಿಗಳನ್ನು ಬಳಸಿ ಕಾಮಗಾರಿ ನಿರ್ವಹಿಸಲಾಗುತ್ತಿದೆ. ಕಾಮಗಾರಿ ಕುರಿತು ತಾವು ಆಗಾಗ್ಗೆ ಸಣ್ಣ ನೀರಾವರಿ ಇಲಾಖೆಯೊಂದಿಗೆ ಮಾಹಿತಿ ಪಡೆದುಕೊಳ್ಳುತ್ತಿದ್ದು, ಈ ತಿಂಗಳ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ಮಳಲೂರು ಏತ ನೀರಾವರಿ ಯೋಜನೆಗೆ ಅಗತ್ಯವಿರುವ ಭೂಸ್ವಾಧೀನಪಡಿಸಿಕೊಳ್ಳುವ ವಿಚಾರದಲ್ಲಿ ರೈತರೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಭೂಮಿಗೆ ನಿಗದಿಪಡಿಸಿರುವ ದರದ ವಿಚಾರದಲ್ಲಿ ಸ್ವಲ್ಪ ಗೊಂದಲವಿದೆ. ಶೀಘ್ರದಲ್ಲಿಯೇ ಮತ್ತೂಮ್ಮೆ ರೈತರೊಂದಿಗೆ ಸಭೆ ನಡೆಸಿ ಸಮಸ್ಯೆ ಪರಿಹರಿಸಲಾಗುವುದು ಎಂದು ತಿಳಿಸಿದರು.

ನಗರದ ಮಹಾತ್ಮಗಾಂಧಿ ಉದ್ಯಾನವನದಲ್ಲಿಯೂ ಹಲವು ವರ್ಷಗಳಿಂದ ಸಮಸ್ಯೆಗಳು ಮುಂದುವರೆದಿದ್ದವು. ಉದ್ಯಾನವನದ ಅಭಿವೃದ್ಧಿಗಾಗಿ 1.50 ಕೋಟಿ ರೂ. ಬಿಡುಗಡೆ ಮಾಡಿ ಲೋಕೋಪಯೋಗಿ ಇಲಾಖೆಗೆ ಹಸ್ತಾಂತರಿಸಿದ್ದರೂ ಅವರು ಕಾಮಗಾರಿ ಆರಂಭಿಸಿರಲಿಲ್ಲ. ಈಗ ಶೀಘ್ರದಲ್ಲಿಯೇ ಟೆಂಡರ್‌ ಕರೆದು ಕಾಮಗಾರಿ ಆರಂಭಿಸುವಂತೆ ಇಲಾಖೆಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.

ನಗರಕ್ಕೆ ದಿನದ 24 ಗಂಟೆ ಕುಡಿಯುವ ನೀರು ಒದಗಿಸುವ ಅಮೃತ್‌ ಯೋಜನೆ ಹಾಗೂ ಒಳಚರಂಡಿ ಕಾಮಗಾರಿಯನ್ನು ವೇಗವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಗುತ್ತಿಗೆದಾರರಿಗೆ 4.50 ಕೋಟಿ ರೂ. ಬಿಲ್ ಪಾವತಿಸಲು ಬಾಕಿ ಇದ್ದು, ಚುನಾವಣಾ ನೀತಿ ಸಂಹಿತೆ ಪೂರ್ಣಗೊಂಡ ನಂತರ ಬಿಲ್ ಪಾವತಿಸುವುದಾಗಿ ತಿಳಿಸಲಾಗಿದೆ. ಪೈಪ್‌ಲೈನ್‌ ಅಳವಡಿಸುವ ಕಾಮಗಾರಿ ಬಾಕಿ ಇದ್ದು, ಅದಕ್ಕಾಗಿ ವಿವಿಧ ತಂಡಗಳನ್ನು ರಚಿಸಿ ವೇಗವಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಹೇಳಿದರು.

ಒಳಚರಂಡಿ ಯೋಜನೆ ಕಾಮಗಾರಿಯು ಜೂನ್‌ ಅಂತ್ಯದೊಳಗಾಗಿ ಪೂರ್ಣಗೊಳ್ಳಲಿದೆ. ಈಗಾಗಲೇ ಶೇ.90 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಇರುವ ಸಣ್ಣಪುಟ್ಟ ಲೋಪಗಳನ್ನು ಸರಿಪಡಿಸಲು ಗುತ್ತಿಗೆದಾರರಿಗೆ ಹಾಗೂ ಇಂಜಿನಿಯರ್‌ಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ| ಕುಮಾರ್‌ ಇನ್ನಿತರರಿದ್ದರು.

ಜಂಟಿ ಸರ್ವೇ ನಡೆಸಿ ಕಂದಾಯ ಮತ್ತು ಅರಣ್ಯ ಭೂಮಿಯನ್ನು ಗುರುತಿಸದ ಕಾರಣ 94ಎ, 94ಬಿ, 94ಸಿ, 94ಸಿಸಿಗಳಲ್ಲಿ ಅರ್ಜಿ ಸಲ್ಲಿಸಿರುವವರಿಗೆ ಮಂಜೂರಾತಿ ನೀಡಲು ಸಾಧ್ಯವಾಗುತ್ತಿಲ್ಲ. ಜಿಲ್ಲೆಯ ಹಲವೆಡೆಗಳಲ್ಲಿ ಅಂಗನವಾಡಿ, ಆಸ್ಪತ್ರೆ, ಶಾಲಾ ಕಟ್ಟಡಗಳು ಸೇರಿದಂತೆ ಸರ್ಕಾರಿ ಕಚೇರಿಗಳ ಕಟ್ಟಡ ನಿರ್ಮಿಸಲು ಭೂಮಿ ಲಭ್ಯವಿಲ್ಲದಂತಾಗಿದೆ. ಭದ್ರಾ ಅಣೆಕಟ್ಟು, ಮಸಗಲಿ, ಸಾರಗೋಡು ಅರಣ್ಯಗಳ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಸಾಧ್ಯವಾಗಿಲ್ಲ. ಜಾಗವಿಲ್ಲದಿರುವುದರಿಂದಾಗಿ ಕಳೆದ 15 ವರ್ಷಗಳಿಂದಲೂ ಇವರಿಗೆ ಪುನರ್ವಸತಿ ಕಲ್ಪಿಸಲು ಆಗಿಲ್ಲ. ಈ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಜಂಟಿ ಸರ್ವೇ ಅಗತ್ಯ.
ಡಾ| ಬಗಾದಿ ಗೌತಮ್‌,
ಜಿಲ್ಲಾಧಿಕಾರಿ.

ಟಾಪ್ ನ್ಯೂಸ್

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Kharge

Adani ಕುಟುಂಬ ವಶಕ್ಕೆ ಪಡೆದು ತನಿಖೆ ನಡೆಸಲಿ : ಖರ್ಗೆ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Pro-Kabaddi League: ಯುಪಿ ಯೋಧಾಸ್‌ಗೆ ಶರಣಾದ ತಮಿಳ್‌ ತಲೈವಾಸ್‌

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

Adelaide Test: ಫಿಲಿಪ್‌ ಹ್ಯೂಸ್‌ ಸ್ಮರಣೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

China Badminton: ಚಿರಾಗ್‌- ಸಾತ್ವಿಕ್‌ ಸೆಮಿಫೈನಲ್‌ಗೆ

ಬೈಡೆನ್‌ “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು

Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್‌ ಕ್ಷಮೆಗೆ ವೈದ್ಯರ ಪಟ್ಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚUdupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

Udupi: ಗೀತಾರ್ಥ ಚಿಂತನೆ 102: ಆತ್ಮವಿಕಾಸ- ಆತ್ಮಸಂಕೋಚ

1-dp

Datta peeta; ಸರಕಾರ ನೇಮಕ ಮಾಡಿದ್ದ ಅರ್ಚಕ ರಾಜೀನಾಮೆ

Police

Subhramanya: ಹೆದ್ದಾರಿ ತಡೆದು ಪ್ರತಿಭಟನೆ: 13 ಮಂದಿಗೆ ಜಾಮೀನು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Suside-Boy

Karkala: ಬೋಳ ಗ್ರಾಮದ ವ್ಯಕ್ತಿ ಆತ್ಮಹತ್ಯೆ

Suside-Boy

Mudubidre: ಅಂತಿಮ ಬಿಬಿಎಂ ವಿದ್ಯಾರ್ಥಿ ಆತ್ಮಹತ್ಯೆ

Suside-Boy

Belthangady: ಕಲ್ಮಂಜ: ರಿಕ್ಷಾ ಚಾಲಕ ಆತ್ಮಹತ್ಯೆ

DK–BJP-Protest

Mangaluru: ತುಳುನಾಡಿನ ದೈವ-ದೇವರ ಜಾಗ ಉಳಿಸಲು ಹೋರಾಟ: ಸಂಸದ ಚೌಟ

Suside-Boy

Punjalakatte: ಕೊಯಿಲದ ವ್ಯಕ್ತಿ ಹಾಸನದಲ್ಲಿ ನಿಗೂಢ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.