ದಲಿತ ದೌರ್ಜನ್ಯ ತಡೆ ಕಾಯ್ದೆ ಪಾಲಿಸಿ: ಡಿಸಿ

ಜಿಲ್ಲೆಯಲ್ಲಿ ಈವರೆಗೆ 35 ಪ್ರಕರಣಗಳು ದಾಖಲು •34 ಪ್ರಕರಣಗಳಿಗೆ 15 ಲಕ್ಷ ರೂ. ಪರಿಹಾರ ಮಂಜೂರು

Team Udayavani, May 30, 2019, 12:19 PM IST

30-May-23

ಚಿಕ್ಕಮಗಳೂರು: ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆ ನಡೆಯಿತು.

ಚಿಕ್ಕಮಗಳೂರು: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಕಾಯ್ದೆಯಡಿ ಜಿಲ್ಲೆಯಲ್ಲಿ ಜನವರಿಯಿಂದ ಮೇ.19ರವರೆಗೆ 35 ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪರಿಶಿಷ್ಟ ಜಾತಿ- ಪರಿಶಿಷ್ಟ ಪಂಗಡಗಳ ದೌರ್ಜನ್ಯ ನಿಯಂತ್ರಣ ಜಿಲ್ಲಾ ಜಾಗೃತಿ ಉಸ್ತುವಾರಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಈವರೆಗೆ 35 ಪ್ರಕರಣಗಳು ದಾಖಲಾಗಿದ್ದು, 34 ಪ್ರಕರಣಗಳಿಗೆ 15 ಲಕ್ಷ ರೂ. ಪರಿಹಾರ ಮಂಜೂರು ಮಾಡಲಾಗಿದೆ. ತರೀಕೆರೆ ತಾಲೂಕು ಲಕ್ಕವಳ್ಳಿ ಹೋಬಳಿಯ ತಿಮ್ಮಭೋವಿ ಕ್ಯಾಂಪಿನ ಸುರೇಶ್‌ ಅವರ ಮರಣೋತ್ತರ ಪರೀಕ್ಷೆ ವರದಿ ಬಂದಿಲ್ಲ. ಬಂದ ತಕ್ಷಣ ಪರಿಹಾರ ವಿತರಿಸಲಾಗುವುದು ಎಂದು ತಿಳಿಸಿದರು.

ಡಾ| ಬಿ.ಆರ್‌.ಅಂಬೇಡ್ಕರ್‌ ಅಭಿವೃದ್ಧಿ ನಿಗಮದಿಂದ ಮಲ್ಲೇಶ್ವರ ಗ್ರಾಮದ ಶಿವರಾಜ್‌ ಎಂಬುವವರಿಗೆ ಟ್ಯಾಕ್ಸಿ ವಿತರಣೆಗಾಗಿ ಕೆನರಾ ಬ್ಯಾಂಕ್‌ನಿಂದ ಸಾಲ ನೀಡುತ್ತಿಲ್ಲ ಎಂಬ ದೂರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಮಾತನಾಡಿ, ಅರ್ಜಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು. ಬ್ಯಾಂಕಿನಲ್ಲಿ ಸಾಲ ನೀಡುವುದಕ್ಕೆ ಸಂಬಂಧಿಸಿದಂತೆ ಕೆಲವು ಮಾನದಂಡಗಳು ಇರುತ್ತವೆ. ಅವುಗಳನ್ನು ಸಡಿಲಿಸಲು ಬರುವುದಿಲ್ಲ. ಅರ್ಜಿದಾರರಿಗೆ ಕಾರಣ ನೀಡದೇ ಅರ್ಜಿಯನ್ನು ವಾಪಸ್ಸ್ ಕಳುಹಿಸಲು ಆಗುವುದಿಲ್ಲ. ಈ ಕುರಿತು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಗಂಗಾ ಕಲ್ಯಾಣ ಯೋಜನೆಯಡಿ ಜಿಲ್ಲೆಯಲ್ಲಿ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್‌ ಸಂಪರ್ಕ ಕಲ್ಪಿಸದಿದ್ದರೆ ಕೂಡಲೇ ವಿದ್ಯುತ್‌ ಸಂಪರ್ಕ ನೀಡಬೇಕೆಂದು ಮೆಸ್ಕಾಂ ಕಾರ್ಯಪಾಲಕ ಅಭಿಯಂತರರಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ಸುಸಜ್ಜಿತವಾದ ಅಂಬೇಡ್ಕರ್‌ ಭವನ ನಿರ್ಮಾಣ ಮಾಡಲು ಕ್ರಮ ವಹಿಸಬೇಕೆಂದು ಸಮಿತಿ ಸದಸ್ಯರು ಮನವಿ ಮಾಡಿದಾಗ ಪ್ರತಿಕ್ರಿಯಿಸಿ, ಜಿಲ್ಲೆಯಲ್ಲಿ ಈಗಾಗಲೇ ಒಂದು ಅಂಬೇಡ್ಕರ್‌ ಭವನ ನಿರ್ಮಾಣ ಮಾಡಲಾಗಿದ್ದು, ಮತ್ತೂಂದು ಅಂಬೇಡ್ಕರ್‌ ಭವನ ನಿರ್ಮಾಣ ಮಾಡಲು ಪ್ರಸ್ತಾವನೆ ಸಲ್ಲಿಸಲು ಬರುವುದಿಲ್ಲ. ಈಗಿರುವ ಭವನಕ್ಕೆ ದುರಸ್ತಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಿಗೆ ತಿಳಿಸಿದರು.

ದಲಿತರಿಗೆ ನಿವೇಶನ ಮತ್ತು ದರಖಾಸ್ತಿನಡಿ ಶೇ.40 ರಷ್ಟು ಹಾಗೂ ಇತರೆಯವರಿಗೆ ಶೇ.60ರಷ್ಟು ನಿವೇಶನ ನೀಡಬೇಕಿದ್ದು, ಇತರೆಯವರಿಗೆ ಶೇ.60ರಷ್ಟು ಹಕ್ಕು ಪತ್ರಗಳನ್ನು ಈಗಾಗಲೇ ನೀಡಲಾಗಿದೆ. ದಲಿತರಿಗೆ ಮಾತ್ರ ಈವರೆಗೂ ಹಕ್ಕುಪತ್ರ ನೀಡಿರುವುದಿಲ್ಲ. ದರಖಾಸ್ತಿನ ಸಮಿತಿಯಲ್ಲಿ ಈ ಕುರಿತು ನಿರ್ಣಯವಾಗಿದ್ದರೂ ಸರ್ಕಾರದ ಹಂತದಲ್ಲಿ ನಿರ್ಣಯವಾಗಬೇಕಾಗಿದೆ ಎಂದು ಸಮಿತಿಯ ಸದಸ್ಯರು ಸಭೆಯ ಗಮನಕ್ಕೆ ತಂದರು. ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿಗಳು, ಯಾವ ಯಾವ ತಾಲೂಕಿನಲ್ಲಿ ಬಾಕಿ ಉಳಿದಿರುವ ಬಗ್ಗೆ ಪಟ್ಟಿ ನೀಡುವಂತೆ ತಹಶೀಲ್ದಾರರಿಗೆ ಸೂಚಿಸಿ ಕಂದಾಯ ಅಧಿಕಾರಿಗಳ ಸಭೆಯಲ್ಲಿ ಚರ್ಚಿಸಿ ಕ್ರಮ ವಹಿಸಲಾಗುವುದು ಎಂದರು.

ದಲಿತರಿಗೆ ಫಾರಂ 53, 53ಎ ಮತ್ತು 94(ಸಿ)ಯಲ್ಲಿ ಅರ್ಜಿ ಸಲ್ಲಿಸಿದವರಿಗೆ ಭೂಮಿಯನ್ನು ಕೊಡಬೇಕೆಂದು ಸರ್ಕಾರ ನಿರ್ಣಯ ಮಾಡಿದ್ದರೂ ಅಧಿಕಾರಿಗಳು ನೀಡಿರುವುದಿಲ್ಲ ಎಂದು ಸಭೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಸತ್ತಿಹಳ್ಳಿ ಗ್ರಾಮ ಪಂಚಾಯತ್‌ನ ಮಾಚಗೊಂಡನಹಳ್ಳಿಯಲ್ಲಿ ಎರಡು ಎಕರೆ ಆಶ್ರಯ ನಿವೇಶನಕ್ಕೆ ಜಮೀನು ಕಾಯ್ದಿರಿಸಲು ಮಂಜೂರಾತಿ ನೀಡಲಾಗಿದೆ. ಜಿಲ್ಲೆಯಲ್ಲಿ ನಿವೇಶನ ನೀಡಲು ಕಾನೂನಿನ ಅಡಿ ಅವಕಾಶವಿದ್ದು, ಯಾವ ಗ್ರಾಮದಲ್ಲಿ ನಿವೇಶನಕ್ಕೆ ಜಾಗ ಬೇಕೋ ಆ ಗ್ರಾಮ ಪಂಚಾಯತ್‌ ಕಾರ್ಯದರ್ಶಿಗಳು ಗುರುತಿಸಿ ಸರ್ಕಾರಿ ಜಾಗವಿದ್ದರೆ ಕ್ರಮ ವಹಿಸಲಾಗುವುದು ಎಂದು ಈಗಾಗಲೇ ತಿಳಿಸಿದೆ. ಆಶ್ರಯ ಸಮಿತಿಯಲ್ಲಿ ನಿವೇಶನ ನೀಡಲು ಅವಕಾಶವಿದ್ದು, ಸುಮಾರು 272 ಎಕರೆ ಜಮೀನನ್ನು ಗ್ರಾಮೀಣ ಪ್ರದೇಶದಲ್ಲಿ ಕಾಯ್ದಿರಿಸಲು ಕಾರ್ಯನಿರ್ವಾಹಣಾಧಿಕಾರಿಗಳಿಗೆ ಈ ಹಿಂದೆಯೇ ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಕುಮಾರ್‌, ನಗರಸಭೆ ಆಯುಕ್ತ ಪರಮೇಶಿ, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಶೃತಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್‌ ಸೇರಿದಂತೆ ಸಮಿತಿಯ ಸದಸ್ಯರು ಹಾಜರಿದ್ದರು.

ದಲಿತರಿಗೆ ನಿವೇಶನ ಮತ್ತು ದರಖಾಸ್ತಿನಡಿ ಶೇ.40 ರಷ್ಟು ಹಾಗೂ ಇತರೆಯವರಿಗೆ ಶೇ.60ರಷ್ಟು ನಿವೇಶನ ನೀಡಬೇಕಿದ್ದು, ಇತರೆಯವರಿಗೆ ಶೇ.60ರಷ್ಟು ಹಕ್ಕು ಪತ್ರಗಳನ್ನು ಈಗಾಗಲೇ ನೀಡಲಾಗಿದೆ. ದಲಿತರಿಗೆ ಮಾತ್ರ ಈವರೆಗೂ ಹಕ್ಕುಪತ್ರ ನೀಡಿರುವುದಿಲ್ಲ. ದರಖಾಸ್ತಿನ ಸಮಿತಿಯಲ್ಲಿ ಈ ಕುರಿತು ನಿರ್ಣಯವಾಗಿದ್ದರೂ ಸರ್ಕಾರದ ಹಂತದಲ್ಲಿ ನಿರ್ಣಯವಾಗಬೇಕಾಗಿದೆ.
ಡಾ| ಬಗಾದಿ ಗೌತಮ್‌,
ಜಿಲ್ಲಾಧಿಕಾರಿ.

ಟಾಪ್ ನ್ಯೂಸ್

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

SMG-Shikaripura

Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

POLICE-5

Karkala: ಗೋವಾ ಮದ್ಯ ಅಕ್ರಮ ದಾಸ್ತಾನು ಪ್ರಕರಣ; ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚನೆ

5

Karkala: ದ್ವೇಷ ಭಾವನೆ ಕೆರಳಿಸುವ ಆರೋಪ; ದೂರು ದಾಖಲು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.