ಅಂತೂ ಬಂತು ಮಳೆ
ಗಾಳಿಗೆ ಧರೆಗುರುಳಿದ ಮರ, ಸಂಚಾರಕ್ಕೆ ಬಂತು ಸಂಚಕಾರ
Team Udayavani, Jun 13, 2019, 12:01 PM IST
ಚಿಕ್ಕಮಗಳೂರು: ಬಾಳೆಹೊನ್ನೂರು ಬಳಿ ಸುರಿದ ಮಳೆ, ಗಾಳಿಗೆ ಭಾರೀ ಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿರುವುದು.
ಚಿಕ್ಕಮಗಳೂರು: ಜಿಲ್ಲೆಗೆ ಮುಂಗಾರು ಮಳೆ ಪ್ರವೇಶಿಸಿದ್ದು, ಮಲೆನಾಡು ಭಾಗಗಳಲ್ಲಿ ಸತತವಾಗಿ ಮಳೆಯಾಗುತ್ತಿದೆ. ಮುಂಗಾರು ಪ್ರವೇಶಿಸಿದೆಯಾದರೂ ಅಬ್ಬರದ ಮಳೆ ಸುರಿಯುತ್ತಿಲ್ಲ. ಆಗಾಗ ಬಿಟ್ಟು ಬಿಟ್ಟು ಮಳೆಯಾಗುತ್ತಿದೆ. ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ ಮತ್ತು ನರಸಿಂಹರಾಜಪುರ ತಾಲೂಕುಗಳಲ್ಲಿ ಗಾಳಿಯೊಂದಿಗೆ ಸತತವಾಗಿ ತುಂತುರು ಮಳೆಯಾಗುತ್ತಿದೆ. ಚಿಕ್ಕಮಗಳೂರು ನಗರ ಸೇರಿದಂತೆ ವಿವಿಧೆಡೆಗಳಲ್ಲಿ ಆಗಾಗ ತುಂತುರು ಮಳೆ ಸುರಿಯುತ್ತಿದೆ.
ಧರೆಗುರುಳಿದ ಮರ, ಸಂಚಾರ ಅಸ್ತವ್ಯಸ್ತ: ಬಾಳೆಹೊನ್ನೂರು ಸಮೀಪದ ಕಣತಿ ಬಳಿ ಮಳೆಗೆ ದೊಡ್ಡ ಮರವೊಂದು ರಸ್ತೆ ಮೇಲೆ ಬಿದ್ದ ಪರಿಣಾಮ ಗಂಟೆಗೂ ಹೆಚ್ಚು ಕಾಲ ಬಾಳೆಹೊನ್ನೂರು-ಚಿಕ್ಕಮಗಳೂರು ರಸ್ತೆಯಲ್ಲಿ ಸಂಚಾರ ಸ್ಥಗಿತಗೊಂಡಿತ್ತು. ಸ್ಥಳೀಯರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ರಸ್ತೆಯ ಮೇಲೆ ಬಿದ್ದಿದ್ದ ಮರವನ್ನು ತೆರವುಗೊಳಿಸಿದ ನಂತರ ಸಂಚಾರ ವ್ಯವಸ್ಥೆ ಪುನರಾರಂಭಗೊಂಡಿತು.
ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲೂ ರಾತ್ರಿ ಬೀಸಿದ ಗಾಳಿಗೆ ಮರ ಹಾಗೂ ವಿದ್ಯುತ್ ಟ್ರಾನ್ಸ್‌ಫಾರ್ಮರ್ ಮುರಿದು ಬಿದ್ದಿದ್ದವು. ರಸ್ತೆಗೆ ಅಡ್ಡಲಾಗಿ ವಿದ್ಯುತ್ ಕಂಬಗಳೂ ಬಿದ್ದಿದ್ದು, 4ಗಂಟೆಗೂ ಹೆಚ್ಚು ಕಾಲ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.
ಎಲ್ಲೆಲ್ಲಿ ಎಷ್ಟೆಷ್ಟು?
ಚಿಕ್ಕಮಗಳೂರು ತಾಲೂಕಿನ ಚಿಕ್ಕಮಗಳೂರು 5.2ಮಿ.ಮೀ., ವಸ್ತಾರೆ 11.4ಮಿ.ಮೀ., ಜೋಳದಾಳು 12ಮಿ.ಮೀ., ಆಲ್ದೂರು 16.8ಮಿ.ಮೀ., ಕೆ.ಆರ್.ಪೇಟೆ 5.1ಮಿ.ಮೀ., ಅತ್ತಿಗುಂಡಿ 18.5ಮಿ.ಮೀ., ಸಂಗಮೇಶ್ವರಪೇಟೆ 3.7ಮಿ.ಮೀ., ಬ್ಯಾರವಳ್ಳಿ 2.2ಮಿ.ಮೀ., ಮಳಲೂರು 4.3, ದಾಸರಹಳ್ಳಿಯಲ್ಲಿ 6.8ಮಿ.ಮೀ. ಮಳೆಯಾಗಿದೆ. ಕಡೂರು ತಾಲೂಕಿನ ಸಖರಾಯಪಟ್ಟಣ 3.3ಮಿ.ಮೀ., ಕೊಪ್ಪ ತಾಲೂಕಿನ ಕೊಪ್ಪ 8.2ಮಿ.ಮೀ., ಹರಿಹರಪುರ 11.4, ಜಯಪುರ 3.8ಮಿ.ಮೀ., ಕಮ್ಮರಡಿ 9.7ಮಿ.ಮೀ., ಬಸರಿಕಟ್ಟೆಯಲ್ಲಿ 10.8ಮಿ.ಮೀ ಮಳೆಯಾಗಿದೆ. ಮೂಡಿಗೆರೆ ತಾಲೂಕಿನ ಮೂಡಿಗೆರೆ 12.2ಮಿ.ಮೀ., ಕೊಟ್ಟಿಗೆಹಾರ 14.8ಮಿ.ಮೀ., ಜಾವಳಿ 10.1, ಗೋಣಿಬೀಡು 12.3ಮಿ.ಮೀ., ಕಳಸ 13.4, ಎನ್.ಆರ್‌ಪುರ ತಾಲೂಕಿನ ಎನ್.ಆರ್.ಪುರ 0.6ಮಿ.ಮೀ., ಬಾಳೆಹೊನ್ನೂರು 3.4, ಶೃಂಗೇರಿ ತಾಲೂಕಿನ ಶೃಂಗೇರಿ 22.8ಮಿ.ಮೀ., ಕಿಗ್ಗಾ 21.8, ಕೆರೆಕಟ್ಟೆಯಲ್ಲಿ 70.4ಮಿ.ಮೀ. ಬುಧವಾರ ಮಳೆ ಸುರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್ ಪೊಲೀಸ್ ಠಾಣೆ ಬಂಟ್ವಾಳಕ್ಕೆ
Christmas; ಪ್ರಭು ಕ್ರಿಸ್ತನ ಸ್ವಾಗತಕ್ಕೆ ಕರಾವಳಿ ಸಡಗರದಿಂದ ಸಜ್ಜು
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BBK11: ನಡುರಾತ್ರಿ ದೇವರ ಮುಂದೆ ಒಂಟಿಯಾಗಿ ಕೂತು ಪ್ರಾರ್ಥಿಸಿದ ಚೈತ್ರಾ.!
Ex-US President: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಆಸ್ಪತ್ರೆಗೆ ದಾಖಲು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.